Share this news

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ  ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ ಆಯೋಗ ಹೇಳಿದ್ದು, ಈ ಸಂಬAಧ ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಆಯೋಗ ಶಿಫಾರಸು ಮಾಡಿದೆ.

ಅಂದಿನ ಸರ್ಕಾರ ಚೀನಾ ಕಂಪನಿಗಳಿAದ ಪಿಪಿಇ ಕಿಟ್ ಖರೀದಿ ಮಾಡಿತ್ತು. ಪಿಪಿಇ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬAದಿದೆ. ದರ ವ್ಯತ್ಯಾಸದಿಂದ ಪಿಪಿಇ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ. ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮ ಎಸಗಲಾಗಿದೆ ಎಂದು ವರದಿಯಲ್ಲಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಆಗಸ್ಟ್ 25, 2023ರಲ್ಲಿ ರಚನೆಯಾಗಿದ್ದ ತನಿಖಾ ಆಯೋಗ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದು ಪತ್ತೆ ಮಾಡಿದೆ.

ಗ್ಲೋಬಲ್ ಹಾಂಗ್ ಕಾಂಗ್ (ಚೀನಾ) ಮತ್ತು ಬಿಗ್ ಫಾರ್ಮಾಸ್ಯುಟಿಕಲ್ಸ್ನಿಂದ 1999 ರ ಸಾರ್ವಜನಿಕ ಸಂಗ್ರಹಣೆಯಲ್ಲಿನ ಕರ್ನಾಟಕ ಪಾರದರ್ಶಕತೆ ಕಾಯಿದೆಯಿಂದ ನೀಡಲಾದ ಯಾವುದೇ ಟೆಂಡರ್ ಅಥವಾ ವಿನಾಯಿತಿ ಇಲ್ಲದೆ ನೇರ ಖರೀದಿ ಆದೇಶಗಳ ಮೂಲಕ 3 ಲಕ್ಷ ಪಿಪಿಇ ಕಿಟ್‌ಗಳನ್ನು ಪ್ರತಿ 2,000 ಕ್ಕಿಂತ ಹೆಚ್ಚು ವೆಚ್ಚದಲ್ಲಿ ಖರೀದಿಸಲಾಗಿತ್ತು ಎಂದು ಹೇಳಲಾಗಿದೆ. ಹೀಗಾಗಿ, ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರಾಗಿದ್ದ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಆಯೋಗ ಶಿಫಾರಸು ಮಾಡಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *