Share this news

ಕಾರ್ಕಳ ,ಜು.21: ಕಾರ್ಕಳ ತಾಲೂಕು ಬೋಳ ಗ್ರಾಮದ ಗ್ರಾಮ ಪಂಚಾಯತ್ ಸಭೆಯಲ್ಲಿ ರಾಜ್ಯ ಸರ್ಕಾರ ನೀಡುವ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ ಬಿಜೆಪಿ ಪಂಚಾಯತ್ ಸದಸ್ಯರ ದುರ್ನಡತೆಯ ವಿರುದ್ದ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಜಂಟಿ ಆಶ್ರಯದಲ್ಲಿ ಜು.21 ರಂದು ಬೋಳ ಗ್ರಾಮ ಪಂಚಾಯತ್ ಕಚೇರಿ ಮುಂಬಾಗದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಗ್ಯಾರಂಟಿ ಯೋಜನೆಗಳನ್ನು ವಿರೋದಿಸಸುತ್ತೇವೆ ಎಂದ ಬಿಜೆಪಿ ಪಂಚಾಯತ್ ಸದಸ್ಯರ ಮಾತನ್ನು ಖಂಡಿಸಿ ಇಂದು ಬೋಳ ಪಂಚಾಯತಿ ಕಚೇರಿಗೆ ಬಂದಿದ್ದೇವೆ, ಮುಂದಿನ ದಿನಗಳಲ್ಲಿ ಇದೇ ಉದ್ದಟತನ ತೋರಿದರೆ ನಿಮ್ಮ ಮನೆ ಬಾಗಿಲಿಗೆ ಬರಬೇಕಾದೀತು ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಸದ್ಯರಿಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬೇಡವಾಗಿದ್ದರೆ ತಾಲೂಕು ಕಚೇರಿಗೆ ಅರ್ಜಿಯನ್ನು ಸಲ್ಲಿಸಿ, ಅದು ಬಿಟ್ಟು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಬಿಜೆಪಿ ವಾಗ್ದಾಳಿ ನಡೆಸಿದರು.
ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅದ್ಯಕ್ಷ ಮಾಳ ಅಜಿತ್ ಹೆಗ್ಡೆ ಮಾತನಾಡಿ, ಗ್ಯಾರಂಟಿ ಯೋಜನೆಗಳು ಜನರ ಜೀವನಮಟ್ಟ ಸುಧಾರಣೆಗಾಗಿ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕಾಳಜಿಯು ಗ್ಯಾರಂಟಿ ಯೋಜನೆಯಲ್ಲಿ ಅಡಕವಾಗಿದೆ ಎಂದರು. ಬಿಜೆಪಿ ಆಡಳಿತದ ಅವಧಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿಲ್ಲ ಎಂದು ಅದೆಷ್ಟೋ ಬಡವರ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿತ್ತು, ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಗೃಹಜ್ಯೋತಿ ಗ್ಯಾರಂಟಿ ಯೋಜನೆಯ ಮೂಲಕ ಉಚಿತ ವಿದ್ಯುತ್ ನೀಡುತ್ತಿದ್ದು ಇಂದು ಗ್ಯಾರಂಟಿ ಯೋಜನೆಗಳಿಂದ ಬಡವರು ಮನೆಯಲ್ಲಿ ಬೆಳಕು ಕಾಣುವಂತಾಗಿದೆ ಎಂದರು, ಮುಂದಿನ ದಿನಗಳಲ್ಲಿ ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಅದಾಲತ್ ನಡೆಸಲಾಗುವುದು ಎಂದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸುಪ್ರಿತ್ ಶೆಟ್ಟಿ ಕೆದಿಂಜೆ ಸಭೆಯನ್ನುದ್ದೇಶಿಸಿ ಮಾತನಾಡಿ ಗ್ರಾಮ ಪಂಚಾಯತ್ ಸದಸ್ಯರುಗಳು ಜನರ ಸೇವಕರಾಗಿ ಸರ್ಕಾರದಲ್ಲಿ ಸಿಗುವ ಸವಲತ್ತುಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯವನ್ನು ಮಾಡಬೇಕು, ಅದುಬಿಟ್ಟು ರಾಜ್ಯ ಸರ್ಕಾರದ ಗ್ಯಾರಂಟಿ ಸವಲತ್ತುಗಳಿಗೆ ತಡೆಯೊಡುತ್ತೇನೆ ಎಂದು ಗ್ರಾಮ ಸಭೆಯಲ್ಲಿಯೇ ಹೇಳಿರುವುದು ಇದು ಬಿಜೆಪಿ ಸದಸ್ಯರ ಮೂರ್ಖತನ ಮತ್ತು ಅವರು ರಾಜಕಾರಣದಲ್ಲಿ ಮುಂದುವರಿಯಲು ಅರ್ಹರಲ್ಲ ಎಂದರು.
ಮಾಜಿ ಗ್ರಾಮ ಪಂಚಾಯತ್ ಸದಸ್ಯ ಅವಿನಾಶ್ ಮಲ್ಲಿ ಬೋಳ ಮಾತನಾಡಿ ನಾನೂ ಬೋಳ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಮಾಡಿದವನು, ನಾವು ಕಾಂಗ್ರೆಸ್ ಬಿಜೆಪಿ ಎನ್ನುವ ಭೇದಭಾವ ಮಾಡದೇ ಸರ್ವರನ್ನು ಸಮಾನರಾಗಿ ಕಂಡಿದ್ದೇವೆ, ಆದರೆ ಇಂದು ಬಿಜೆಪಿ ಸದಸ್ಯರ ಪಕ್ಷಭೇದ ನೀತಿಯಿಂದಾಗಿ ನಮ್ಮದೇ ಊರಿನಲ್ಲಿ ನಮ್ಮದೇ ಪಂಚಾಯತ್ ನ ಮುಂದೆ ಪ್ರತಿಭಟನೆ ನಡೆಸುವಂತಹ ಪರಿಸ್ಥಿತಿ ಬಂದಿರುವುದು ಗ್ರಾಮದ ಜನರ ದೌರ್ಭಾಗ್ಯ, ಈ ಸ್ಥಿತಿಗೆ ಕಾರಣರಾದ ಬಿಜೆಪಿಗರು ಗ್ರಾಮದ ಜನ ಕ್ಷಮೆ ಕೇಳಬೇಕು ಎಂದರು.
ಪ್ರತಿಭಟನಾ ಸಭೆಯಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಭಾನು ಭಾಸ್ಕರ್ ಪೂಜಾರಿ, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಅನಿತಾ ಡಿಸೋಜ, ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಶೆಟ್ಟಿ ಬಜಗೋಳಿ, ಗ್ರಾಮ ಪಂಚಾಯತಿ ಸದಸ್ಯ ಬೋಳ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯೋಗೀಶ್ ಮೂಲ್ಯ, ಕಿಶೋರ್ ದೀಕ್ಷಿತ್ ದೇವಾಡಿಗ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ಜೋಗಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ಯುವ ಕಾಂಗ್ರೆಸ್ ಅಸೆಂಬ್ಲಿ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಲಿಕ್ ಅತ್ತೂರು, ಕಾಂತಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಿ.ಸುದರ್ಶನ್ ಬಂಗೇರ, ಚಂದ್ರಹಾಸ ಪುತ್ರನ್, ರೊನಾಲ್ಡ್ ಅಲ್ಪೊನ್ಸೊ, ಡೆನಿಸ್, ಗಣೇಶ್ ಮೂಲ್ಯ, ಸುರೇಶ್ ಮಸ್ಕರೇನಸ್, ಶಂಕರ ಮೂಲ್ಯ, ಗೀತಾ, ದೀಕ್ಷಿತ್ ಶೆಟ್ಟಿ, ದೀಪಕ್ ಶೆಟ್ಟಿ, ಹೇಮಂತ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಭಟನಾ ಸಭೆಯಲ್ಲಿ ಸ್ಥಳೀಯ ಗೃಹಲಕ್ಷ್ಮೀ ಮುಂತಾದ ಗ್ಯಾರಂಟಿ ಫಲಾನುಭವಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಗ್ಯಾರಂಟಿ ಸಮಿತಿಯ ಸದಸ್ಯರು ಸ್ಥಳೀಯ ನಾಯಕರಾದ ಸಂತೋಷ್ ದೇವಾಡಿಗ ಸ್ವಾಗತಿಸಿ, ಗ್ರಾಮ ಪಂಚಾಯತ್ ಸದಸ್ಯ ಗ್ರಾಮೀಣ ಕಾಂಗ್ರೆಸ್ ಬೋಳ ಸಮಿತಿಯ ಅಧ್ಯಕ್ಷ ಯೋಗೀಶ್ ಮೂಲ್ಯ ವಂದಿಸಿದರು.ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.

 

 

Leave a Reply

Your email address will not be published. Required fields are marked *