Share this news

 

 

 

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದೆ.ಜನಾಕ್ರೋಶ ಮೊಳಗಿದೆ. ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರAತೆ ದರ ಏರಿಕೆಗೆ ರಾಜ್ಯಾದ್ಯಂತ ಜನ ಕಿಡಿಕಾರಿದ್ದಾರೆ. ಹಾಲು, ಮೊಸರಿನ ಬೆನ್ನಲ್ಲೇ ಡೀಸೆಲ್ ದರವೂ 2 ರೂಪಾಯಿ ಏರಿಕೆಯಾಗಿದ್ದು ಜನಾಕ್ರೋಶಕ್ಕೆ ಗುರಿಯಾಗಿದೆ. ಇದೇ ವಿಚಾರ ಮುಂದಿಟ್ಟುಕೊAಡು ಬಿಜೆಪಿ ಹೋರಾಟಕ್ಕಿಳಿದೆ. ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇತರ ಮಾಜಿ ಸಿಎಂಗಳು, ಶಾಸಕರು, ಮಾಜಿ ಶಾಸಕರು, ಪರಿಷತ್ ಸದಸ್ಯರು ಹಾಜರಾಗಿದ್ದಾರೆ.

ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಇಂದು ವಿಧಾನ ಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ನಿಂತು ಅಧಿವೇಶನ ನಡೆಯುತ್ತಿದ್ದಾಗ 18 ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿರುವ ಸ್ಪೀಕರ್ ಯುಟಿ ಖಾದರ್ ವಿರುದ್ಧ ಪ್ರತಿಭಟನೆ ನಡೆಸಿದರು. ಸ್ಪೀಕರ್ ಹುದ್ದೆ ಧರ್ಮಾತೀತ ಮತ್ತು ಪಕ್ಷಾತೀತವಾದದ್ದು ಆದರೆ ಖಾದರ್ ಸರ್ಕಾರದ ಏಜೆಂಟ್ ನಂತೆ ವರ್ತಿಸಿದ್ದಾರೆ, ಮುಸ್ಲಿಂ ಮೀಸಲಾತಿ ವಿಧೇಯಕವನ್ನು ಪಾಸು ಮಾಡಬೇಕಿತ್ತು, ಅದೇ ಕಾರಣಕ್ಕೆ ಅವರು ಸಂವಿಧಾನಬಾಹಿರವಾಗಿ ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ವಿರೋಧ ಪಕ್ಷ ದ ನಾಯಕ ಆರ್ ಅಶೋಕ ಹೇಳಿದರು.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಬಿಜೆಪಿ ಆರೋಪ ಪಟ್ಟಿ ಬಿಡುಗಡೆ ಮಾಡಿದ್ದು, ಬಡವರಿಗೆ ಗ್ಯಾರಂಟಿ ಯೋಜನೆ ನೀಡಿ ಆರ್ಥಿಕವಾಗಿ ಸದೃಢ ಮಾಡಿದ್ದೇವೆ ಎಂದು ಪದೇ ಪದೇ ಬಡಾಯಿ ಕೊಟ್ಟಿಕೊಳ್ಳುವ ಸರ್ಕಾರ ಕಳೆದ ಎರಡು ವರ್ಷದಲ್ಲಿ 50 ವಸ್ತುಗಳ ಬೆಲೆಯನ್ನು ಹೆಚ್ಚಿಸಿ ಒಂದು ಕೈಯಲ್ಲಿ ಹಣ ಕೊಟ್ಟು ಇನ್ನೊಂದು ಕೈಯಲ್ಲಿ ಬಡ್ಡಿ ಸಮೇತ ಕಿತ್ತುಕೊಳ್ಳುತ್ತಿದೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಸಂಪನ್ಮೂಲ ಕ್ರೋಢಿಕರಣಕ್ಕೆ ಕಂಡ ಕಂಡ ವಸ್ತುಗಳ ಬೆಲೆಗಳ ಏರಿಕೆ ಮಾಡಿ ಜನಸಾಮಾನ್ಯರ ಬವಣೆಗೆ ಕಿಂಚಿತ್ತೂ ಕಾಳಜಿ ತೋರದ ನಿರ್ದಯಿ ಸರ್ಕಾರವಾಗಿದೆ ಎಂದು ಬಿಜೆಪಿ ಕಿಡಿಕಾರಿದೆ.

ಬೆಲೆಯೇರಿಕೆಯ ಪರ್ವ ಈ ಸರ್ಕಾರ ಅಧಿಕಾರಕ್ಕೆ ಬಂದ ವರ್ಷದಿಂದಲೇ ಆರಂಭಿಸಿದರು. ಆದಾಯ ಮೂಲವಿಲ್ಲದೆ ಪರದಾಡುವಂತಾಗಿರುವ ಸರ್ಕಾರ ಜನರ ಸುಲಿಗೆಗೆ ಡೊಂಕ ಕಟ್ಟಿ ನಿಂತಿದೆ. ಹುಟ್ಟಿನಿಂದ ಸಾವಿನವರೆಗೂ ಬೆಲೆಯೇರಿಕೆ ಮಾಡಿರುವ ಅಪಕೀರ್ತಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ. ದೇಶದಲ್ಲೇ ಅತ್ಯಂತ ದುಬಾರಿಯಾದ ಜೀವನವನ್ನು ಕರ್ನಾಟಕದ ಜನತೆಯು ನಡೆಸುವಂತಹ ದುಸ್ಥಿತಿಯನ್ನು ಕಾಂಗ್ರೆಸ್ ಸರ್ಕಾರ ನಿರ್ಮಾಣ ಮಾಡಿದೆ. ದುರ್ದೈವವೆಂದರೆ ಓಟು ಕೊಟ್ಟು ಅಧಿಕಾರಕ್ಕೆ ತಂದ ಜನರ ಮೇಲೆ ಗಾಳಿಯನ್ನು ಹೊರತು ಪಡಿಸಿ ಮಿಕ್ಕೆಲ್ಲಾ ವಸ್ತುಗಳ ಬೆಲೆಯನ್ನು ಕಾಂಗ್ರೆಸ್ ಸರ್ಕಾರ ಹೆಚ್ಚಳ ಮಾಡಿ ಜನರ ನಂಬಿಕೆಗೆ ದ್ರೋಹ ಬಗೆದಿದೆ ಎಂದು ವಾಗ್ದಾಳಿ ಮಾಡಿದೆ.

ಜೂನ್ 24 ರಂದು ಪೆಟ್ರೋಲ್ 3ರೂ ಮತ್ತು ಡೀಸೆಲ್‌ಗೆ ರೂ 3.50 ಪೈಸೆ ಪ್ರತಿ ಲೀಟರ್‌ಗೆ ಬೆಲೆ ಏರಿಕೆ ಮಾಡಿದರು. ಸರ್ಕಾರ ಆದಾಯ ಹೆಚ್ಚಳ ಮಾಡಲು ಎಷ್ಟು ಬರಗೆಟ್ಟಿದೆಯೆಂದರೆ ಬಡ ರೋಗಿಗಳು ಚಿಕಿತ್ಸೆಗೆ ಬರುವ ಸರ್ಕಾರಿ ಆಸ್ಪತ್ರೆಯನ್ನು ಸುಲಿಗೆ ಕೇಂದ್ರವನ್ನಾಗಿ ಮಾಡಿಕೊಂಡಿದೆ. ಉಚಿತ ಚಿಕಿತ್ಸೆ ನೀಡಬೇಕಾದ ಸರ್ಕಾರ ಬಡವರ ಹಣವನ್ನು ತನ್ನ ಆದಾಯ ಹೆಚ್ಚಳದ ಮೂಲವಾಗಿ ಕಾಣುತ್ತಿರುವುದು ಸರ್ಕಾರದ ಬಡ ಜನರ ವಿರೋಧಿ ನೀತಿಗೆ ಸಾಕ್ಷಿಯಾಗಿದೆ.ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಒಹಿಡಿ ಮತ್ತು ಐಹಿಡಿ ಶುಲ್ಕವನ್ನು ಶೇ.10-30ರಷ್ಟು ಹೆಚ್ಚಿಸಿದೆ. ನವೀಕರಿಸಿದ ಶುಲ್ಕಗಳು ಬಡವರಿಗೆ ಹೊರೆಯಲ್ಲ ಎಂದು ಆರೋಗ್ಯ ಸಚಿವರು ವಾದಿಸುವ ಮೂಲಕ ತಮ್ಮ ಭಂಡತನ ಪ್ರದರ್ಶನ ಮಾಡಿದ್ದಾರೆ ಎಂದರು.

ಜನನ, ಮರಣ ಪ್ರಮಾಣ ಪತ್ರದ ದರವನ್ನು ಶೇಕಡಾ 100ರಷ್ಟು ಹೆಚ್ಚಿಸಿದ್ದಾರೆ. ಈಗ ಮನೆಯಲ್ಲಿ ಸಂಗ್ರಹವಾಗುವ ಕಸದ ಮೇಲೂ ನೂರಾರು ರೂಪಾಯಿ ಸೆಸ್ ವಿಧಿಸಲಾಗಿದೆ. ಕಸದಲ್ಲೂ ಆದಾಯ ಗಳಿಸಲು ಮುಂದಾಗಿರುವ ಬರೆಗೆಟ್ಟ ಸರ್ಕಾರವಿದು. ದೌರ್ಭಾಗ್ಯವೆಂದರೆ ತಮ್ಮ ಬೆಲೆಯೇರಿಕೆಯನ್ನು ಸಮರ್ಥಿಸಿಕೊಳ್ಳಲು ರೈತ ಸಮುದಾಯವನ್ನು ಗುರಾಣಿಯ ಹಾಗೆ ಬಳಸಿಕೊಳ್ಳುತ್ತಿರುವುದು ಶೋಚನೀಯ.
ಸರ್ಕಾರ ಹೆಚ್ಚಳ ಮಾಡಿರುವ ದರವನ್ನು ರೈತರಿಗೆ ವರ್ಗಾಯಿಸಲಾಗುವುದು ಎಂಬ ದಾರಿ ತಪ್ಪಿಸುವ ಮಾತನ್ನು ಆಡುತ್ತಿದ್ದಾರೆ. ಕಳೆದ ಎರಡು ವರ್ಷದಲ್ಲಿ ಹಾಲು ದರವನ್ನು ಹೆಚ್ಚಳ ಮಾಡಿದಾಗಲೂ ಹಣವನ್ನು ರೈತರಿಗೆ ನೀಡುತ್ತೇವೆ ಎಂದು ಹೇಳಿದರೆ ವಿನಹ ಹಣವನ್ನು ವರ್ಗ ಮಾಡಲೇ ಇಲ್ಲ.
ಸ್ಟಾಂಪ್ ಡ್ಯೂಟಿ ದರವನ್ನು 4 ಪಟ್ಟು ಹೆಚ್ಚಳ ಮಾಡಿದ್ದಾರೆ. ಈಗ ಭೂ ಪತ್ರ ಪಡೆಯಲು ದುಪ್ಪಟ್ಟು ಹಣ ಪಾವತಿಸುವ ಅನಿವಾರ್ಯತೆಯಾಗಿದೆ. ಬಡ ರೈತರಿಗೆ ಇದು ದೊಡ್ಡ ಹೊಡತವಾಗಿದೆ.
ಕೃಷಿ ಭೂಮಿ ಮಾರ್ಗಸೂಚಿ ಮೌಲ್ಯವು ಶೇಕಡಾ 50ರಷ್ಟು ಏರಿಕೆಯಾಗಿದ್ದರೆ, ನಿವೇಶನಗಳ ಹೆಚ್ಚಳವು ಶೇಕಡಾ 30ರಷ್ಟು ಹೆಚ್ಚಾಗಿದೆ. ಹಾಗೆಯೇ ಅಪಾರ್ಟ್ ಮೆಂಟ್ ಮಾರ್ಗಸೂಚಿ ಮೌಲ್ಯವನ್ನು ಶೇಕಡಾ 5 ರಿಂದ ಶೇಕಡಾ 20 ರಷ್ಟು ಏರಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ.

ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮಾರಣಾಂತಿಕ ಪೆಟ್ಟನ್ನು ನೀಡಿದ್ದಾರೆ.ವಿದ್ಯುತ್ ಇಲಾಖೆಯ ನೌಕರರಿಗೆ ಪಿಂಚಣಿ ಕೊಡಲು ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರ ವಿದ್ಯುತ್ ಗ್ರಾಹಕರಿಂದ ಯೂನಿಟ್ ಗೆ 0.35 ಪೈಸೆ ಹೆಚ್ಚಳ ಮಾಡಿ ಜನರ ಸುಲಿಗೆ ಮಾಡುತ್ತಿದೆ.ರೈತರಿಗೆ ಅತ್ಯಾವಶ್ಯಕವಾಗಿ ಬೇಕಾದ ಬಿತ್ತನೆ ಬೀಜದ ಬೆಲೆಯಲ್ಲಿ ಶೇಕಡಾ 50 ರಿಂದ 100 ರಷ್ಟು ಏರಿಕೆಯಾಗಿದೆ.
ರೈತರು ತಮ್ಮ ಜಮೀನಿನಲ್ಲಿ ಟ್ರಾನ್ಸಫಾರ್ಮರ್ ಅಳವಡಿಸುವ ಶುಲ್ಕವನ್ನು 25,000 ದಿಂದ 2,50,000 ದಿಂದ 13,00,000 ಕ್ಕೆ ಹೆಚ್ಚಳ ಮಾಡಿ ರೈತರ ತಲೆಯ ಮೇಲೆ ಹೊರಲಾರ ಹೊರೆ ಹೊರೆಸಿದ್ದಾರೆ.ಸಾರಿಗೆ ಬಸ್ ದರವನ್ನು ಶೇಕಡಾ 15 ರಿಂದ 20 ರಷ್ಟು ಹೆಚ್ಚಳವನ್ನು ಮಾಡಲಾಗಿದೆ. ಸಾರಿಗೆ ಸಂಸ್ಥೆಯು ಸಂಬಳ ನೀಡಲು ಪರದಾಡುವ ಸ್ಥಿತಿಗೆ ತಂದು ನಿಲ್ಲಿಸಿದ್ದಾರೆ.
ಬೆಂಗಳೂರು ಮೆಟ್ರೊ ಪ್ರಯಾಣ ದರವು ಶೇಕಡಾ 100 ರಷ್ಟು ಹೆಚ್ಚಳ ಮಾಡಿ ದೇಶದಲ್ಲೆ ಹೊಸ ಇತಿಹಾಸ ಬರೆದ ಅಪಕೀರ್ತಿ ಸರ್ಕಾರಕ್ಕೆ ಸಲ್ಲುತ್ತದೆ.
ವಿದ್ಯುತ್ ಕಾರು ಖರೀದಿಯನ್ನು ಉತ್ತೇಜಿಸುವ ಬದಲು ಶೇಕಡಾ 10ರಷ್ಟು ಜೀವಿತಾವಧಿ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಹೊಸ ವಾಹನ ಖರೀದಿ ಮಾಡಿದಾಗ 500 ರಿಂದ 1000 ವರಗೆ ಸೆಸ್ ವಿಧಿಸಲಾಗಿದೆ ಎಂದಿದ್ದಾರೆ.

ಜನರ ಸಂಕಷ್ಟಕ್ಕೆ ಕವಡೆ ಕಿಮ್ಮತ್ತು ನೀಡದೆ ತನ್ನ ರಾಜಕೀಯ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ಜನರ ಹಗಲು ದರೋಡೆಗೆ ಸರ್ಕಾರ ಇಳಿದಿರುವುದನ್ನು ಬಿಜೆಪಿ ಖಂಡಿಸುತ್ತದೆ. ಬೆಲೆಯೇರಿಕೆಯನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಕೈಗೊಂಡಿರುವ ಅಹೋ ರಾತ್ರಿ ಧರಣಿಯು ರಾಜಿಯ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ನ್ಯಾಯ ಕೊಡಿಸಲು ತೀವ್ರ ಹೋರಾಟ ಕೈಗೊಳ್ಳಲಿದೆ. ನಮ್ಮ ಬಡವರ ಪರ ಧ್ವನಿಗೆ ತಲೆಬಾಗಿ ಸರ್ಕಾರ ವಿವೇಕತನವನ್ನು ಪ್ರದರ್ಶಿಸಿ ಆಗಿರುವ ಅನಾಹುತವನ್ನು ಸರಿಪಡಿಸಿಕೊಳ್ಳಲು ಮುಂದಾಗಬೇಕು ಎಂದು ಬಿಜೆಪಿ ಆಗ್ರಹಿಸಿದೆ.

Leave a Reply

Your email address will not be published. Required fields are marked *