ಮಂಗಳೂರು: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹಾಗೂ ಪುತ್ತೂರು ನಗರ ಸಭೆಯ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಬಳಿ ರಮೇಶ್ ರೈ ಮೊಬೈಲ್ ಮತ್ತು ಬೈಕ್ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಹಾಗೂ ಸ್ಥಳೀಯರು ಹುಡುಕಾಟ ನಡೆಸಿದಾಗ ಇಂದು(ಕೂ.5) ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇದೀಗ ರಮೇಶ್ ರೈಯವರ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.