ಭೋಪಾಲ್: ಮಧ್ಯಪ್ರದೇಶದ ಮಂಡೌರ್‌ನ ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ನಾಯಕ ಮನೋಹರ್ ಲಾಲ್ ಧಾಕಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಿಂದ ಇಳಿದು ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಹೆದ್ದಾರಿ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಮೇ 13 ರಂದು ಈ ವೀಡಿಯೊ ಸೆರೆಯಾಗಿದ್ದು ಈತನ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮಂಡೌರ್ ಜಿಲ್ಲೆಯ ಬನಿ ಗ್ರಾಮದ ನಿವಾಸಿಯಾಗಿರುವ ಮನೋಹರ್ ಲಾಲ್ ಧಾಕಡ್, ಹೊಸದಾಗಿ ನಿರ್ಮಾಣದ 8 ಪಥದ ಹೆದ್ದಾರಿಯಲ್ಲಿ ಆಕ್ಷೇಪಾರ್ಹ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಮಹಿಳೆಯೊಂದಿಗೆ ರಾಸಲೀಲೆಯಲ್ಲಿ ತೊಡಗಿಸಿಕೊಂಡಿರುವುದು ಬಯಲಾಗಿದೆ. ಸುಮಾರು ಮೂರೂವರೆ ನಿಮಿಷಗಳ ವಿಡಿಯೋ ವೈರಲ್ ಆಗಿದ್ದು,
ವೀಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ ಮಂಡೌರ್ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ದೀಕ್ಷಿತ್, ಧಾಕಡ್ ಬಿಜೆಪಿ ಪದಾಧಿಕಾರಿಯಲ್ಲ,ಆತ ಆನ್‌ಲೈನ್ ಮೂಲಕ ಸದಸ್ಯತ್ವ ಪಡೆದುಕೊಂಡಿದ್ದಾನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಬಿಜೆಪಿ ವಕ್ತಾರ ಯಶ್ವಾಲ್ ಸಿಂಗ್ ಸಿಸೋಡಿಯಾ, ಪಕ್ಷವು ಈ ಗಂಭೀರ ಆರೋಪವನ್ನು ಗಣನೆಗೆ ತೆಗೆದುಕೊಂಡು, ಪರಿಶೀಲಿಸಿ ಕಟ್ಟುನಿಟ್ಟಿನ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಧಾಕಡ್ ಬಿಜೆಪಿಯ ಪ್ರಾಥಮಿಕ ಸದಸ್ಯರಲ್ಲ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿ.ಡಿ. ಶರ್ಮಾ ಕೂಡಾ ಹೇಳಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವುದು ಸರಿಯಲ್ಲ. ಪೊಲೀಸರು ವೀಡಿಯೊ ಚಿತ್ರೀಕರಿಸಿದ ಸ್ಥಳವನ್ನು ಗುರುತಿಸಿದ್ದು ಆತನ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಈ ಘಟನೆಯ ಬಳಿಕ ಧಕಾಡ್ ಮಹಾಸಭಾ ಯುವ ಸಂಘವು ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಳಿಸಿದೆ.