Share this news

ಉಡುಪಿ: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಜಿಲ್ಲಾ ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬದಲಾಗಿ ಬಿಜೆಪಿ ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ ಅವರ ಭಾವಚಿತ್ರ ಮುದ್ರಿಸಲಾಗಿದೆ.

 

ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ್ ಅವರ ಚುನಾವಣಾ ಪ್ರಚಾರ ಪತ್ರದಲ್ಲಿ ಈ ಎಡವಟ್ಟು ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
ಆರು ಪುಟಗಳ ಪ್ರಚಾರ ಪತ್ರದ ಐದನೇ ಪುಟದಲ್ಲಿ ಎಲ್ಲಾ ನಾಯಕರ ಫೋಟೋಗಳ ಮಧ್ಯೆ ಬಿಜೆಪಿಯ ಉದಯ ಕುಮಾರ್ ಶೆಟ್ಟಿ ಅವರ‌‌ ಭಾವಚಿತ್ರವಿದೆ.
ಇದರಿಂದ ಕಾಂಗ್ರೆಸ್ ಗೆ ಮುಜುಗರವಾದಂತಾಗಿದೆ

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *