ಕಾರ್ಕಳ : ಮೋದಿಯವರ ʻವಿಕಸಿತ ಭಾರತʼ ಪರಿಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಅಭಿಯಾನವು ಈ ಬಾರಿ ಒಂದು ಆಂದೋಲನದ ರೀತಿಯಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 02 ರಿಂದ 25 ಮತ್ತು ಅಕ್ಟೋಬರ್ 01 ರಿಂದ 15 ರವರೆಗೆ ಎರಡು ಹಂತಗಳಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯಲಿದೆ. ಎಲ್ಲರೂ 88 0000 2024 ಸಂಖ್ಯೆಗೆ ಮಿಸ್ ಕಾಲ್ ಕೊಡುವ ಮೂಲಕ, ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಮತ್ತು ನಮೋ ಆಪ್ ಮೂಲಕ ನೋಂದಣಿಯಾಗಿ ಕಾರ್ಕಳ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಬೇಕು .ಆ ಮೂಲಕ ಈ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಶಾಸಕ ವಿ.ಸುನಿಲ್ ಕುಮಾರ್ ಕರೆ ನೀಡಿದರು.
ಅವರು ಬಿಜೆಪಿ ಕಾರ್ಕಳ ಮಂಡಲದ ವತಿಯಿಂದ ಜಿಲ್ಲೆಯ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು, ಮೋರ್ಚಾ, ಪ್ರಕೋಷ್ಠ ಮತ್ತು ಮಂಡಲಗಳ ಪದಾಧಿಕಾರಿಗಳು , ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪ್ರಮುಖರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ,ಈ ಅಭಿಯಾನಕ್ಕೆ ಮಾನ್ಯ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ರವರು ಹಾಗೂ ನಮ್ಮ ಪ್ರಧಾನಿಗಳಾದ ನರೇಂದ್ರ ಮೋದಿಯವರು ಸದಸ್ಯತ್ವ ಪಡೆಯುವ ಮೂಲಕ ರಾಷ್ಟ್ರದಾದ್ಯಂತ ಈ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಸಂಚಾಲಕರಾದ ರಾಜೇಶ್ ಕಾವೇರಿ ಅಭಿಯಾನದ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಮಹಾವೀರ ಹೆಗ್ಡೆ ,ಜಯರಾಮ್ ಸಾಲ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಉದಯ್ ಕೋಟ್ಯಾನ್, ತಾಲೂಕು ಪ್ರಧಾನ ಕಾರ್ಯದರ್ಶಿ ಬೋಳ ಸತೀಶ್ ಪೂಜಾರಿ ಹಾಗೂ ಪಕ್ಷದ
ಪ್ರಮುಖರು ಉಪಸ್ಥಿತರಿದ್ದರು.