Share this news

ಬೆಂಗಳೂರು  : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬAಧಿಸಿದAತೆ ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಕೊನೆಗೂ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು ಮೂಲದ ಮಹಿಳೆಯೊಬ್ಬರು ನನ್ನನ್ನು ಹೆದರಿಸಿ ಬೆದರಿಸಿ ಮುನಿರತ್ನ ಅತ್ಯಾಚಾರವೆಸಗಿದ್ದು ಅಲ್ಲದೇ ನನ್ನನ್ನು ಬಳಸಿಕೊಂಡು ಹನಿ ಟ್ರ‍್ಯಾಪ್ ಗೆ ಮುಂದಾಗಿದ್ದರು ಎಂದು ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದರು.ಮಹಿಳೆಯ ದೂರಿನ ಆಧಾರದಲ್ಲಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಇದೀಗ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಅಥವಾ ನಾಳೆ ಅವರು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಇದಕ್ಕೂ ಮುನ್ನ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ತಕ್ಷಣವೇ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಪೊಲೀಸರು ಅವರನ್ನು ಅರೆಸ್ಟ್ ಮಾಡಿದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

 

Leave a Reply

Your email address will not be published. Required fields are marked *