ಕಾರ್ಕಳ: ರಾಜ್ಯ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಹಿಂದುತ್ವದ ಕುರಿತ ಮೃದು ಧೋರಣೆ ಕೈ ಪಾಳಯದಲ್ಲಿ ತೀವೃ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಪೂರಕ ಎಂಬAತೆ ತಮಿಳುನಾಡಿನ ಕೊಯಮುತ್ತೂರಿನ ಇಶಾ ಫೌಂಡೇಶನ್ ಮುಖ್ಯಸ್ಥ ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಡಿಕೆ ಶಿವಕುಮಾರ್ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಡಿಕೆಶಿ ಈ ನಡೆಗೆ ಕಾಂಗ್ರೆಸ್ ಫುಲ್ ಗರಂ ಆಗಿದೆ. ಇದಕ್ಕೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು ತಾನು ಹಿಂದೂ ಧರ್ಮದಲ್ಲಿ ಹುಟ್ಟಿ ಧರ್ಮದ ಆಚರಣೆ ಪಾಲಿಸಿದ್ದೇನೆ ಇದರಲ್ಲಿ ರಾಜಕಾರಣ ಬೆರೆಸಲ್ಲ ಅಷ್ಟಕ್ಕೂ ನನ್ನ ಹೆಸರಿನಲ್ಲೇ ಶಿವ ಇದ್ದಾನೆ ಎಂದಿದ್ದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮಾ.2 ರಂದು ಭಾನುವಾರ ಡಿಕೆ ಶಿವಕುಮಾರ್ ಕಾರ್ಕಳದಲ್ಲಿ ನಡೆಯಲಿರುವ ಕಾಂಗ್ರೆಸ್ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು, ಡಿಕೆ ಶಿವಕುಮಾರ್ ಅವರ ಆಗಮನಕ್ಕೆ ಕಾರ್ಕಳ ಬಿಜೆಪಿ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಟ್ವೀಟ್ ಮೂಲಕ ಸ್ವಾಗತ ಕೋರಿದ್ದು, ಈ ಟ್ವೀಟ್ ಗೆ ಕಾರ್ಕಳ ಕಾಂಗ್ರೆಸ್ ಪಾಳಯ ಕಕ್ಕಾಬಿಕ್ಕಿಯಾಗಿದೆ. ಸುನಿಲ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಡಿಕೆ ಶಿವಕುಮಾರ್ ಕಾರ್ಕಳ ಭೇಟಿ ಕುರಿತು ಟ್ವೀಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದರೂ ಕುಂಭ ಮೇಳದಲ್ಲಿ ಮಿಂದ ಎಐಸಿಸಿ ಮುನಿಸಿನ ಮಧ್ಯೆಯೂ ಈಶಾ ಫೌಂಡೇಶನ್ ಶಿವರಾತ್ರಿಯಲ್ಲಿ ನಿಂದ ಹಿಂದುವಾಗಿ ಹುಟ್ಟಿ ಹಿಂದುವಾಗಿಯೇ ಸಾಯುವೆ ಎಂದ ಹಿAದುತ್ವದೆಡೆಗೆ ಹೆಜ್ಜೆ ಹಾಕಲು ಮನಸ್ಸು ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಅವರಿಗೆ ಗಂಡುಮೆಟ್ಟಿನ ನೆಲ, ಹಿಂದುತ್ವದ ಭದ್ರಕೋಟೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆತ್ಮೀಯ ಸ್ವಾಗತ, ನಿಮ್ಮ ಈ ಭೇಟಿ ಹಿಂದುತ್ವ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಫಲಪ್ರದವಾಗಲಿ ಎಂದು ಟ್ವೀಟ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಸುನಿಲ್ ಕುಮಾರ್ ಅವರ ಈ ಟ್ವೀಟ್ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ. ಸುನಿಲ್ ಕುಮಾರ್ ಟ್ವೀಟ್ ಕುರಿತು ಕೈ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದು ಇದು ಸಹಜವಾಗಿಯೇ ಕಾರ್ಯಕರ್ತರ ಗೊಂದಲಕ್ಕೆ ಕಾರಣವಾಗಿದೆ
ರಾಜ್ಯದ ಮುಖ್ಯಮಂತ್ರಿಯಾಗಲೇಬೇಕೆAಬ ಕನಸನ್ನು ಹೊತ್ತಿದ್ದ ಡಿಕೆ ಶಿವಕುಮಾರ್ ಆಸೆಗೆ ಕಾಂಗ್ರೆಸ್ ಹೈಕಮಾಂಡ್ ಸರ್ಕಾರ ರಚನೆಯ ಆರಂಭದಲ್ಲೇ ತಣ್ಣೀರೆರಚಿತ್ತು. 5 ವರ್ಷಗಳ ಅವಧಿಯಲ್ಲಿ ಅಧಿಕಾರ ಹಂಚಿಕೆಯ ಸೂತ್ರದ ಲೆಕ್ಕಾಚಾರದಲ್ಲಿದ್ದ ಡಿಕೆ ಶಿವಕುಮಾರ್ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಈ ನಡುವೆ ಸಿಎಂ ಸಿದ್ಧರಾಮಯ್ಯ ಬಣದ ಕೆಲ ಸಚಿವರು ಹಾಗೂ ಶಾಸಕರು ಸಧ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ, ಮುಂದಿನ 5 ವರ್ಷದ ಅವಧಿಗೂ ಸಿದ್ಧರಾಮಯ್ಯನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎನ್ನುವ ಹೇಳಿಕೆ ನೀಡಿ ಡಿಕೆ ಶಿವಕುಮಾರ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗಗಳು ಗಮನಿಸಿದಾಗ ಡಿಕೆ ಶಿವಕುಮಾರ್ ಹಿಂದುತ್ವದ ಕುರಿತು ಮೃಧು ಧೋರಣೆಯು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದರೂ ಅಚ್ಚರಿಯಿಲ್ಲ.
ಡಿಕೆ ಶಿವಕುಮಾರ್ ಪ್ರಯಾಗರಾಜ್ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ, ಶಿವರಾತ್ರಿ ಜಾಗರಣೆಯಲ್ಲಿ ಪಾಲ್ಗೊಂಡು ತನ್ನ ಧರ್ಮದ ಆಚರಣೆಯಲ್ಲಿ ಭಾಗವಹಿಸಿದೆ ಇದರಲ್ಲಿ ತಪ್ಪೇನಿದೆ ಎಂದರೂ ಕಾಂಗ್ರೆಸ್ ಇದನ್ನು ಒಪ್ಪಲು ಸಾಧ್ಯವೇ ಎನ್ನುವುದು ಯಕ್ಷಪ್ರಶ್ನೆ. ಯಾಕೆಂದರೆ ಸ್ವತಃ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಕುಂಭಮೇಳದ ಸ್ನಾನ ಮಾಡಿದರೆ ಬಡತನ ನಿರ್ಮೂಲನೆ ಆಗುತ್ತಾ ಎನ್ನುವ ಹೇಳಿಕೆಯ ವಿರುದ್ಧ ಎಲ್ಲೆಡೆ ಭಾರೀ ಆಕ್ರೋಶಕ್ಕೂ ಕಾರಣವಾಗಿತ್ತು. ಈ ನಡುವೆ ಡಿಕೆ ಶಿವಕುಮಾರ್ ಅವರ ಮುಂದಿನ ರಾಜಕೀಯ ನಡೆ ಏನು ಎನ್ನುವುದು ಸಧ್ಯಕ್ಕೆ ಭಾರೀ ಕುತೂಹಲ ಮೂಡಿಸಿದೆ
