Share this news

 

 

 

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 10 ರಂದು ರಾಜ್ಯದ ಸರ್ಕಾರದದ ವಿರುದ್ಧ ಬಿಜೆಪಿ ವತಿಯಿಂದ ನಡೆಯಲಿರುವ ಬೃಹತ್ ಜನಾಕ್ರೋಶ ಸಭೆಯ ಹಿನ್ನೆಲೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ನಡೆಸಲಾಯಿತು.

ಕಾರ್ಕಳ ಕ್ಷೇತ್ರದಿಂದ ಪ್ರತಿಭಟನಾ ಸಭೆಗೆ 2 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದು,ಪ್ರತೀ ಬೂತ್ ನಿಂದ ಕನಿಷ್ಠ 15 ಜನ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮನವಿ ಮಾಡಿದ್ದಾರೆ, ಇದಲ್ಲದೇ ರಾಜ್ಯ ಸರ್ಕಾರದ ಬೆಲೆ ಏರಿಕೆತನಕ ನೀತಿ, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಮೀಸಲಾತಿ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನ ದುರ್ಬಳಕೆ ಕುರಿತು ಜನರ ಪರವಾಗಿ ನಾವು ಧ್ವನಿ ಎತ್ತಲಿದ್ದೇವೆ ಎಂದು ನವೀನ್ ನಾಯಕ್ ತಿಳಿಸಿದ್ದಾರೆ.

 

 

 

Leave a Reply

Your email address will not be published. Required fields are marked *