Share this news

ಶಿವಮೊಗ್ಗ: ಮಹಿಳೆಯರು ಕೇವಲ ಮತದಾರರು ಮಾತ್ರವಲ್ಲ ಭಾರತದ ಮಹಿಳೆಯರು ನನ್ನ ಪಾಲಿನ ಮಾತೆಯರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ನಾರಿ ಶಕ್ತಿ ದೇಶದ ಪ್ರಧಾನಶಕ್ತಿ, ಮಹಿಳೆಯರು ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾರೆ. ಮೋದಿ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತದೆ. ಭಾರತೀಯ ನಾರಿಯ ಉನ್ನತೀಕರಣಕ್ಕೆ, ಉನ್ನತ ಬದುಕಿಗೆ, ಸಶಕ್ತಿಗಾಗಿ ಬಿಜೆಪಿ ಕೆಲಸ ಮಾಡುತ್ತದೆ. ತಾಯಿ, ತಂಗಿ, ಮಗಳು ಸೇರಿದಂತೆ ಮಹಿಳಾ ಕಲ್ಯಾಣಕ್ಕೆ ಬಿಜೆಪಿ ಹೆಚ್ಚಿನ ಆದ್ಯತೆ ನೀಡಿದೆ. ನಮ್ಮ ಶಕ್ತಿಯನ್ನು ಹೆಚ್ಚಿಸುವ ಕೆಲಸ ನಾವು ಮಾಡುತ್ತೇವೆ ಎಂದು ಮೋದಿ ಹೇಳಿದರು.

ಅವರು ಸೋಮವಾರ ಶಿವಮೊಗ್ಗದ ಫ್ರೀಡಂ ಪಾರ್ಕಿನ ಅಲ್ಲಮಪ್ರಭು ಮೈದಾನದಲ್ಲಿ ನಡೆದ ಬಿಜೆಪಿ ವಿಕಸಿತ ಸಂಕಲ್ಪ ಯಾತ್ರೆಯ ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಿ, ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದರು. ಇದೇವೇಳೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ಅಧಿಕಾರ ಪಡೆಯಲು ಯಾವ ಮಟ್ಟಕ್ಕೂ ಇಳಿಯಲು ಸಿದ್ದರಿದ್ದಾರೆ.ದೇಶವನ್ನು ಒಡೆಯುವ ಅಪಾಯಕಾರಿ ಮಾತುಗಳನ್ನಾಡಿದ್ದು ಬ್ರಿಟಿಷರ ಒಡೆದು ಆಳುವ ಕುಟಿಲನೀತಿಯನ್ನು ಅನುಷ್ಠಾನಗೊಳಿಸಲು ಹೊರಟಿದ್ದಾರೆ.ರಾಜ್ಯದ ಖಜಾನೆ ಲೂಟಿ ಮಾಡಿದ ಹಣವನ್ನು ದೆಹಲಿಗೆ ಕಳುಹಿಸಿಕೊಡಲಾಗುತ್ತದೆ. ಹಾಗಾಗಿ,ರಾಜ್ಯದ ರಸ್ತೆ,ಕುಡಿಯುವ ನೀರು,ವಿದ್ಯುತ್ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನವಿಲ್ಲ, ಒಟ್ಟಾರೆಯಾಗಿ ಕರ್ನಾಟಕ ಸರ್ಕಾರವು ದೆಹಲಿ ಕಾಂಗ್ರೆಸ್ ವರಿಷ್ಠರಿಗೆ ನೀಡುವ ಎಟಿಎಂ ಆಗಿದೆ. ಇಲ್ಲಿ ಹಲವರು ಸಿಎಂಗಳಿದ್ದು, ದಿಲ್ಲಿಗೆ ಹಣ ತೆಗೆದುಕೊಂಡು ಹೋಗಲು ಕಲೆಕ್ಷನ್ ಮಿನಿಸ್ಟರ್ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು. ಗ್ಯಾರಂಟಿ ಹೆಸರಿನಲ್ಲಿ ಜನರ ಜೇಬಿಗೆ ಕನ್ನ ಹಾಕುವ ಕಾಂಗ್ರೆಸ್ ಪಕ್ಷವನ್ನು ಈ ಚುನಾವಣೆಯಲ್ಲಿ ಕರ್ನಾಟಕದ ಮತದಾರರು ತಿರಸ್ಕರಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸ್ವಾತಂತ್ರö್ಯ ನಂತರದ ಸುಧೀರ್ಘ 70 ವರ್ಷಗಳ ಕಾಲ ಆಳ್ವಿಕೆ ನಡೆಸಿದರೂ ಬಡತನ ನಿವಾರಣೆಯಾಗಲಿಲ್ಲ, ಬದಲಾಗಿ ಬಡವರು ಮತ್ತಷ್ಟು ಬಡವರಾದವರು, ಇದೀಗ ಚುನಾವಣೆಯ ಹೊತ್ತಲ್ಲಿ ಮತ್ತೆ ಈಡೇರಿಸಲಾಗದ ಸುಳ್ಳು ಭರವಸೆ ನೀಡುವ ಮೂಲಕ ಜನರನ್ನು ಮೂರ್ಖರನ್ನಾಗಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ಮೋದಿ ತೀವೃ ವಾಗ್ದಾಳಿ ನಡೆಸಿದರು. ದೇಶವನ್ನು ಒಡೆಯಲು ಸಂಚು ರೂಪಿಸಿದವರನ್ನು ದೇಶದ ಜನ ಕ್ಷಮಿಸಲು ಸಾಧ್ಯವೇ ಇಲ್ಲ ಇಂತಹ ಮನಸ್ಥಿತಿಯ ಸಂಸದನನ್ನು ಅಮಾನತು ಮಾಡುವ ಬದಲಿಗೆ ಆ ಸಂಸದನ ಹೇಳಿಕೆಯನ್ನು ಸಮರ್ಥಿಸುವ ಕೆಲಸವನ್ನು ಕಾಂಗ್ರೆಸ್ ಮಾಡಯವ ಮೂಲಕ ದೇಶ ವಿಭಜಿಸುವ ಕೆಲಸಕ್ಕೆ ಕುಮ್ಮಕ್ಕು ನೀಡಿದೆ ಎಂದು ಮೋದಿ ಆರೋಪಿಸಿದರು

ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.

Village Accountant Recruitment 2024: Apply Now For 1000 Village Accountant (VA) Vacancies Through Karnataka Revenue Department

Leave a Reply

Your email address will not be published. Required fields are marked *