Share this news

ಉಡುಪಿ: ಉಡುಪಿ ನಗರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿಯ ಪ್ರಭಾಕರ ಪೂಜಾರಿ ಹಾಗೂ ಉಪಾಧ್ಯಕ್ಷೆಯಾಗಿ ಬಿಜೆಪಿಯ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಭವನದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ ಚಂದ್ರ ಈ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ‌ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲು ನಿಗದಿಪಡಿಸಲಾಗಿತ್ತು. ಈ ಎರಡು ಸ್ಥಾನಗಳಿಗೆ ಕ್ರಮವಾಗಿ ಗುಂಡಿಬೈಲು ವಾರ್ಡ್ ನ ಪ್ರಭಾಕರ ಪೂಜಾರಿ ಹಾಗೂ ಒಳಕಾಡು ವಾರ್ಡ್ ನ ರಜನಿ ಹೆಬ್ಬಾರ್ ನಾಮಪತ್ರ ಸಲ್ಲಿಸಿದ್ದರು. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣಾಧಿಕಾರಿ ಘೋಷಿಸಿದರು. ಈ ಸಂದರ್ಭದಲ್ಲಿ ನಗರ ಸಭೆ ಆಯುಕ್ತ ಡಾ ರಾಯಪ್ಪ ಹಾಜರಿದ್ದರು.

ಒಟ್ಟು 35 ಸಂಖ್ಯಾಬಲ ಇರುವ ನಗರಸಭೆಯಲ್ಲಿ ಬಿಜೆಪಿ 32 ಹಾಗೂ ಕಾಂಗ್ರೆಸ್ 3 ಸದಸ್ಯರನ್ನು ಹೊಂದಿದೆ.

                        

                          

                        

                          

 

`

Leave a Reply

Your email address will not be published. Required fields are marked *