ನವದೆಹಲಿ:ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಗೃಹ ಸಚಿವರಾಗಿದ್ದ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಸ್ಪತ್ರೆಯ ಹಿರಿಯ ವೈದ್ಯರು ಅಡ್ವಾಣಿಯವರ ಆರೋಗ್ಯ ತಪಾಸಣೆ ನಡೆಸಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅವರು ಕಳೆದ ಎರಡು ವಾರಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಆಗಸ್ಟ್ ನಲ್ಲಿ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ನರರೋಗ ಶಾಸ್ತçಜ್ಞ ಡಾ.ವಿನೀತ್ ಸೂರಿಯವರು ಅಡ್ವಾಣಿಯವರ ಆರೋಗ್ಯ ನೋಡಿಕೊಳ್ಳುತ್ತಿದ್ದರು, ಅವರ ಆರೋಗ್ಯ ಸುಧಾರಿಸಿದ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಕಳೆದ ಮಾರ್ಚ್ 30, 2024 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು.