
ಬೆಂಗಳೂರು,ಜೂ.03: ಹಾಲಿ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ವಿಚಾರ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿದ್ದು, ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರ ಆಯ್ಕೆ ವಿಚಾರ ಕೊನೆಗೂ ಬಗೆಹರಿದಿದೆ.ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನೇಮಕವಾಗಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಳೆದ ಕೆಲ ದಿನಗಳಿಂದ ಕೆಪಿಸಿಸಿಗೆ ಸತೀಶ್ ಜಾರಕಿಹೊಳಿ, ಬಿ.ಕೆ ಹರಿಪ್ರಸಾದ್, ಶಿವರಾಜ್ ತಂಗಡಗಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಪಕ್ಷ ಸಂಘಟನೆಯ ನಿಟ್ಟಿನಲ್ಲಿ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಪರ ಒಲವು ತೋರಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಕೇಳಿಬರುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಅಧಿಕೃತವಾಗಿ ಘೋಷಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
