

ಬೆಂಗಳೂರು,ನ.26: ಜನೌಷಧಿ ಕೇಂದ್ರಗಳಲ್ಲಿ ಕೇವಲ ಕಡಿಮೆ ದರದ ‘ಜೆನೆರಿಕ್’ ಔಷಧಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂಬ ನಿಯಮವಿದೆ. ಆದರೆ, ಹಲವು ಕೇಂದ್ರಗಳಲ್ಲಿ ನಿಯಮ ಉಲ್ಲಂಘಿಸಿ ಹೆಚ್ಚಿನ ಲಾಭಕ್ಕಾಗಿ ಖಾಸಗಿ ಕಂಪನಿಗಳ ಬ್ರಾಂಡೆಡ್ ಔಷಧಿಗಳು ಹಾಗೂ ಕಾಸ್ಮೆಟಿಕ್ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕದ 150 ಜನೌಷಧಿ ಕೇಂದ್ರಗಳ ಮೇಲೆ ಎಫ್ಡಿಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. 80ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿಗೆ ರಾಜ್ಯ ಔಷಧ ನಿಯಂತ್ರಣ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಜನೌಷಧಿ ಕೇಂದ್ರಗಳಲ್ಲಿ ಕೇವಲ ಕಡಿಮೆ ದರದ ‘ಜೆನೆರಿಕ್’ ಔಷಧಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂಬ ನಿಯಮವಿದೆ. ಆದರೆ ಹೆಚ್ಚಿನ ಲಾಭದ ಆಸೆಗಾಗಿ ಹಲವು ಮಳಿಗೆಗಳು ಖಾಸಗಿ ಕಂಪನಿಗಳ ದುಬಾರಿ ಬ್ರಾಂಡೆಡ್ ಔಷಧಿಗಳನ್ನು ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಟನೆ ಮಾಡಿದ 80ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಜನೌಷಧಿ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧ ಮಾರಾಟ ಮಾಡುವಂತಿಲ್ಲ. ಆದರೂ ಜನೌಷಧ ಕೇಂದ್ರಗಳಲ್ಲಿ ಬ್ರ್ಯಾಂಡೆಡ್ ಔಷಧ ಮಾರುತ್ತಿದ್ದರು. ಅಲ್ಲದೇ ಕಾಸ್ಮೆಟಿಕ್ಸ್ ಮಾರಾಟ ಮಾಡಲಾಗುತ್ತಿದೆ. ಇದರೊಂದಿಗೆ ಎಫ್ಡಿಎ ನಿಯಮ ಗಾಳಿಗೆ ತೂರಿದ್ದು, ನಿಯಮ ಉಲ್ಲಂಘಿಸಿದ ಮಳಿಗೆಗಳ ಪರವಾನಗಿ ರದ್ದುಪಡಿಸುವ ಬಗ್ಗೆಯೂ ಔಷಧ ನಿಯಂತ್ರಣ ಇಲಾಖೆ ಎಚ್ಚರಿಕೆ ನೀಡಿದೆ.






.
.
.
.
.
.
.
.
.
.
.
.
.
.
.
.
.
.
.
.
