ಕಾರ್ಕಳ:ವಿಶೇಷಚೇತನ ಹಾಗೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಗಂಭೀರ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ.
ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಂಚಾಯತ್ ಕಚೇರಿ ಬಳಿಯ ನಿವಾಸಿ ಶರ್ಮಿಳಾ (36) ಎಂಬವರು ಮೃತಪಟ್ಟ ಮಹಿಳೆ. ಅವರು ಹುಟ್ಟಿನಿಂದಲೇ ಕೈ ಕಾಲು ಸರಿಯಾಗಿ ಬೆಳವಣಿಗೆಯಾಗದ ಹಿನ್ನೆಲೆಯಲ್ಲಿ ಜೀವನದಲ್ಲಿ ಸಾಕಷ್ಟು ನೊಂದಿದ್ದರು,ಇದೇ ನೋವಿನಲ್ಲಿ ಕಳೆದ 13 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಇದಕ್ಕಾಗಿ ಉಡುಪಿ ಬಾಳಿಗಾ ಆಸ್ಪತ್ರೆಯ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರ ಖಾಯಿಲೆ ವಾಸಿಯಾಗದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಮೇ 3 ರಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸುಟ್ಟಗಾಯಗಳಾದ ಅವರನ್ನು ಉಡುಪಿ ಹಾಗೂ ಮಣಿಪಾಲ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.