ಬಳ್ಳಾರಿ : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೂ ಬಳ್ಳಾರಿಗೂ ನಂಟಿದೆ ಎಂಬ ಮಾಹಿತಿ ಕಲೆಹಾಕಿದ NIA ಅಧಿಕಾರಿಗಳು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿರುವ ಶಂಕಿತ ಉಗ್ರ ಸುಲೇಮಾನ್ ಎಂಬಾತನನ್ನು ವಶಕ್ಕೆ ಪಡೆದು ಕಳೆದ ಎರಡು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ NIA ಅಧಿಕಾರಿಗಳ ತಂಡ ಬಳ್ಳಾರಿ ನಗರದ ಎಸ್ ಎನ್ ಪೇಟೆಯ ಮತ್ತೋರ್ವ ಶಂಕಿತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದೆ. ನಿರಂತರ ಒಂದು ಗಂಟೆಯ ಕಾಲ ಅಧಿಕಾರಿಗಳು ಯುವಕನನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಸೈಯದ್ ಸಮೀರ್, ಸುಲೇಮಾನ್ ಜತೆ ಈ ಯುವಕ ನಂಟು ಹೊಂದಿದ್ದ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಶಂಕಿತ ವ್ಯಕ್ತಿ ಹಲವು ಕೋಮುಗಲಭೆ ಪ್ರಕರಣಗಳಲ್ಲಿ ಕಾಣಿಸಿಕೊಂಡಿದ್ದ ಎನ್ನಲಾಗಿದೆ. ಮಲ್ಲೇಶ್ವರಂ ಬಾಂಬ್ ಬ್ಲಾಸ್ಟ್ ಕೇಸ್ ಗು ಬಳ್ಳಾರಿಗೂ ನಂಟಿರುವ ಮಾಹಿತಿ ಹಿನ್ನೆಲೆಯಲ್ಲಿ NIA ಅಧಿಕಾರಿಗಳು ಪ್ರಮುಖ ಆರೋಪಿ ಪತ್ತೆಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.