Share this news

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಗುತ್ತಿದೆ.

ಇಂದು ಬೆಳಿಗ್ಗೆ ಅನಾಮಧೇಯ ಐಡಿಯಿಂದ ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರಿಗೆ ಇಮೇಲ್ ಬಂದಿತ್ತು ಎಂದು ವಿಮಾನ ನಿಲ್ದಾಣ ನಗರ ಪೊಲೀಸ್ ಕಮಿಷನರ್ ಆರ್. ಚೇತನ್ ಪಿಟಿಐಗೆ ತಿಳಿಸಿದ್ದಾರೆ.

ಏರ್‌ಪೋರ್ಟ್‌ ಟರ್ಮಿನಲ್ ಒಳಗೆ ಇಂಚಿಂಚು ಪರಿಶೀಲನೆ ನಡೆಸುತ್ತಿರುವ  ಭದ್ರತಾ ಅಧಿಕಾರಿಗಳು. ಪ್ರತಿಯೊ್ಬ್ಬ ಪ್ರಯಾಣಿಕರ ಬ್ಯಾಗ್‌ಗನ್ನ ಪರಿಶೀಲಿಸಿ ತೀವ್ರ ತಪಾಸಣೆ ತಪಾಸಣೆನಡೆಸುತ್ತಿರುವ ಪೊಲೀಸರು. ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆ ಆತಂಕದ ವಾತಾವರಣ ನಿರ್ಮಾಣವಾಗಿದೆ.  ಬಾಂಬ್ ಬೆದರಿಕೆ ಮೇಲ್ ಬಂದ ವೇಳೆಯೇ ಕಂದಾಯ ಸಚಿವ ಕೃಷ್ಣಬೈರೇಗೌಡ ಸಹ ಏರ್‌ಪೋರ್ಟ್‌ನೊಳಗೆ ಇದ್ದರು. ಬಾಂಬ್ ಬೆದರಿಕೆ ಮೇಲ್ ಬರುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅಲರ್ಟ್ ಆಗಿದ್ದಾರೆ. ಪ್ರಯಾಣಿಕರನ್ನ ವಿಮಾನ ನಿಲ್ದಾಣದಲ್ಲ ಲಾಕ್ ಮಾಡಿದ ಸಿಬ್ಬಂದಿ. ಪ್ರತಿಯೊಬ್ಬ ಪ್ರಯಾಣಿಕನ ಬ್ಯಾಗ್ ಪರಿಶೀಲನೆ ನಡೆಸಿದ್ದಾರೆ.

 

 

 

                        

                          

 

 

 

 

 

                        

                          

 

 

Leave a Reply

Your email address will not be published. Required fields are marked *