ಬೆಂಗಳೂರು, ಆ,15: ಬೆಂಗಳೂರು ನಗರದ ವಿಲ್ಸನ್ ಗಾರ್ಡನ್ ಸಮೀಪದ ಚಿನ್ನಯ್ಯನಪಾಳ್ಯ ಎಂಬಲ್ಲಿನ ಮನೆಯೊಂದರಲ್ಲಿ ನಿಗೂಢ ಸ್ಫೋಟ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು 12ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. ಈ ಸ್ಫೋಟದಲ್ಲಿ ಮುಬಾರಕ್(8) ಎಂಬ ಬಾಲಕ ಮೃತಪಟ್ಟಿದ್ದಾನೆ. ಈ ಸ್ಫೋಟದಲ್ಲಿ ಕಸ್ತೂರಮ್ಮ(35), ಸರಸಮ್ಮ(50), ಶಬೀರನಾ ಬಾನು(35), ಸುಬ್ರಮಣಿ(62), ಶೇಖ್ ನಜೀದ್ ಉಲ್ಲಾ(37), 8 ವರ್ಷದ ಬಾಲಕಿ ಫಾತಿಮಾ ಸೇರಿ 12 ಜನರಿಗೆ ಗಾಯಗಳಾಗಿದ್ದು, ಸಂಜಯ್ಗಾಂಧಿ ಮತ್ತು ಜಯನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕಸ್ತೂರಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಕಸ್ತೂರಿಗೆ 8 ವರ್ಷದ ಕಯಾಲ್ ಎಂಬಾ ಹೆಣ್ಣು ಮಗುವಿದೆ. ವಿಕ್ಟೋರಿಯಾ ಬರ್ನಿಂಗ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಮುಬಾರಕ್ ಬಾಲಕನ ಪಕ್ಕದ ಮನೆಯಲ್ಲಿ ಕಸ್ತೂರಿ ವಾಸವಿದ್ದರು.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎನ್ನತ್ತಿದ್ದಾರೆ.ಆದರೆ ಸಿಲಿಂಡರ್ ಸ್ಫೋಟವಾಗಿದ್ದರೆ ಬೆಂಕಿ ವ್ಯಾಪ್ತಿಸುತ್ತಿತ್ತು.ಆದರೆ ಯಾವುದೇ ಬೆಂಕಿ ಕಾಣಿಸಿಕೊಂಡಿಲ್ಲ. ಇದೇ ನಗರದ ಸಾಕಷ್ಟು ಜನರು ಬೆಳಗ್ಗೆಯೇ ಲಾಲ್ ಬಾಗ್ನಲ್ಲಿ ಕೆಲಸಕ್ಕೆ ಹೋಗುತ್ತಾರೆ. ಒಂದು ವೇಳೆ ಇಂದು ಕೆಲಸಕ್ಕೆ ಹೋಗದೇ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಸಿಲಿಂಡರ್ ಬ್ಲಾಸ್ಟ್ ಆಗಿರುವ ಸಾಧ್ಯತೆ ಕಡಿಮೆ ಎಂದು ಸ್ಥಳಿಯರು ಹೇಳುತ್ತಿದ್ದಾರೆ. ಕೆಲವರ ಕೈ ಮತ್ತು ತಲೆ ಹೋಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಸದ್ಯ ಸ್ಫೋಟಗೊಂಡಿರುವ ಮನೆ ಸುತ್ತ ಮುತ್ತಲಿನ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.