
ಬೆಳಗಾವಿ(ಸುವರ್ಣಸೌಧ)ಡಿ.18 : ಬಿಪಿಎಲ್ ಕಾರ್ಡ್ ಪಡೆಯಲು ಹಾಲಿ 1.20 ಲಕ್ಷ ಆದಾಯ ಮಿತಿಯಿದ್ದು, ಅದನ್ನು 1.80 ಲಕ್ಷಕ್ಕೆ ಏರಿಸುವ ಕುರಿತು ಚಿಂತನೆ ನಡೆಸಲಾಗಿದ್ದು, ಆದ್ದರಿಂದ ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮುನಿಯಪ್ಪ, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡುದಾರರ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಗೆ ಮಿತಿಗೊಳಿಸಿದೆ. ಆದರೆ, ಕೂಲಿ ಕಾರ್ಮಿಕರಿಗೂ ನಿತ್ಯ 500 ರೂ. ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ವಾರ್ಷಿಕ ಆದಾಯ ವರ್ಷಕ್ಕೆ 1.80 ಲಕ್ಷ ರೂ.ಗಳಿಗೂ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಆದಾಯ ಮಿತಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು.
ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಅಂತಹ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ ಎನ್ನುವ ಕಾರಣ ನೀಡಿ, ಸಂಬAಧಪಟ್ಟ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಿದರೆ, 15 ದಿನದ ಒಳಗಾಗಿ ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದರು.
ಕೇAದ್ರ ಸರ್ಕಾರ ರಾಜ್ಯದಲ್ಲಿ 7,75,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಿದೆ. ರಾಜ್ಯದಲ್ಲಿ 4.53 ಲಕ್ಷ ಬಿಪಿಎಲ್ ಹಾಗೂ 1.25 ಲಕ್ಷ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿವೆ. ರಾಜ್ಯದ ಜನಸಂಖ್ಯೆಗೆ ಹೊಲಿಸಿದರೆ ಶೇ.73ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದಿವೆ. ರಾಜ್ಯವು ಜಿಎಸ್??ಟಿ ಪಾವತಿ, ಆದಾಯ ತೆರಿಗೆ ಪಾವತಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಈ ಅಂಶವನ್ನು ಪರಿಗಣಿಸಿದರೆ ಬಿಪಿಎಲ್ ಕುಟುಂಬಗಳ ಪ್ರಮಾಣ ಶೇ.50ರಷ್ಟು ಇರಬೇಕಿತ್ತು. ಆದರೆ, ಇದಕ್ಕೂ ಹೆಚ್ಚಿನ ಕುಟುಂಬಗಳು ಬಿಪಿಎಲ್ ಕಾರ್ಡ್?? ಪಡೆದಿವೆ ಎಂದು ಸಚಿವರು ವಿವರಿಸಿದರು.
.
.
