
ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಮಹಾಗಣಪತಿ ದೇವಸ್ಥಾನದವಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವವು ಮೇ 30 ರಂದು ಶುಕ್ರವಾರ ನಡೆಯಲಿದೆ. ಬೆಳಗ್ಗೆ 10ಗಂಟೆಗೆ ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಸಂಸ್ಥೆಯ2025ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಳಿಗೆ ರೂ.64ಲಕ್ಷದ22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಅಧ್ಯಾಪಕರಿಗೆತಲಾರೂಒಂದು ಸಾವಿರದಂತೆರೂ.7 ಲಕ್ಷದ 21 ಸಾವಿರವೂ ಸೇರಿದಂತೆಒಟ್ಟುರೂ.1 ಕೋಟಿ 5 ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ವಹಿಸಿಕೊಳ್ಳಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಗಳೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಪ್ರೋ.ಪಿ.ಎಲ್.ಧರ್ಮ ಭಾಗವಹಿಸಲಿದ್ದಾರೆ.ಇದೇ ಸಂದರ್ಭ ಪಿಯುಸಿ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿರಾಜ್ಯಕ್ಕೆಮೊದಲ ಹತ್ತರೊಳಗಿನ ರ‍್ಯಾಂಕ್ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಡಿಸೆಂಬರ್ 22 ರಂದು ನಡೆಯುವಎರಡನೇ ಹಂತದ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಕಳೆದ ವರ್ಷ ಸಂಸ್ಥೆಯಿಂದ ವಿದ್ಯಾರ್ಥಿ ವೇತನಕ್ಕಾಗಿಒಟ್ಟು 1 ಕೋಟಿ 79 ಲಕ್ಷದ 54 ಸಾವಿರ ಹಾಗೂ ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ರೂ. 51 ಲಕ್ಷದ 64 ಸಾವಿರವನ್ನು ನೀಡಲಾಗಿತ್ತು





