ಕಾರ್ಕಳ: ಇತಿಹಾಸ ಪ್ರಸಿದ್ಧ ಮಿಯ್ಯಾರು ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಪುನಃ ಪ್ರತಿಷ್ಠೆ ,ಅಷ್ಟಬಂಧ ಸಹಸ್ರ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಜ.16 ರಿಂದ 28 ರವರೆಗೆ ನಡೆಯಲಿದ್ದು,ಈ ಪ್ರಯುಕ್ತ ನಾಳೆ ಜ.16 ರಂದು ಮಧ್ಯಾಹ್ನ 3 ರಿಂದ ಕಾರ್ಕಳ ಪುಲ್ಕೇರಿ ಬೈಪಾಸ್ ಪಡು ತಿರುಪತಿ ಮೈದಾನದಿಂದ ಹಸಿರು ಹೊರೆ ಕಾಣಿಕೆಯ ಭವ್ಯ ಮೆರವಣಿಗೆ ನಡೆಯಲಿದೆ.
ಹಸಿರು ಹೊರೆಕಾಣಿಕೆಯ ಮೆರವಣಿಗೆಯನ್ನು ಹೊಟೇಲ್ ಸಾಗರ್ ಸಮೂಹ ಸಂಸ್ಥೆಗಳ ಮಾಲೀಕರಾದ ಜಯರಾಮ ಬನಾನ್ ಉದ್ಘಾಟಿಸಲಿದ್ದು, ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಸುನಿಲ್ ಕುಮಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಬಿ.ಗಣಪತಿ ಹೆಗ್ಡೆ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಕಿಶೋರ್ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ತಾರಾನಾಥ ಕೋಟ್ಯಾನ್, ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ ಭಟ್, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸತ್ಯೇಂದ್ರ ನಾಯಕ್, ಪೂನಾ ಸಮಿತಿಯ ಅಧ್ಯಕ್ಷ ಆನಂದ ಎಂ.ಶೆಟ್ಟಿ,ಮಂಜೆಮನೆ, ಮುಂಬಯಿ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಕೆಳಗಿನ ಪಡುಮನೆ ಹಾಗೂ ಜೀರ್ಣೋದ್ಧಾರ ಸಮಿತಿ ಹಾಗೂ ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿರಲಿದ್ದಾರೆ.