ಕಾರ್ಕಳ: ಶ್ರೀ ರಾಜರಾಜೇಶ್ವರಿ ಕ್ಷೇತ್ರ ಸದ್ಗುರು ಶ್ರೀ ನಿತ್ಯಾನಂದ ಮಂದಿರ ನೆಲ್ಲಿ ಅತ್ತೂರು ಇಲ್ಲಿನ ಬ್ರಹ್ಮಕಲಶೋತ್ಸವ ಜನವರಿ 28ರಿಂದ ಫೆಬ್ರವರಿ 5ರ ವರೆಗೆ ನಡೆಯಲಿದೆ.
ಜ. 31ರಂದು ನೆಲ್ಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಪುನರ್ ಪ್ರತಿಷ್ಠೆ ನಡೆಯಲಿದ್ದು ಫೆ. 2 ರಂದು ನಿತ್ಯಾನಂದ ಗುರುಗಳ ಪ್ರತಿಷ್ಠೆ ಮತ್ತು ದೈವಗಳ ಪ್ರತಿಷ್ಠೆ, ಫೆ. 3ರಂದು ಬ್ರಹ್ಮಕಲಶೋತ್ಸವ ಗುಂಡಿಬೈಲು ಶ್ರೀ ಸುಬ್ರಮಣ್ಯ ಭಟ್ ರವರ ಮಾರ್ಗದರ್ಶನ ಹಾಗೂ ಶ್ರೀ ಹರಿಪ್ರಸಾದ ಭಟ್ ಹೆರ್ಗ ಇವರ ನೇತೃತ್ವದಲ್ಲಿ ನಡೆಯಲಿದೆ.
ಜ. 30ರಂದು ಸಂಜೆ 6 ರಿಂದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ಕೈಕಂಬ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾಗೂ ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಅವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು ಶಾಸಕರಾದ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಕಲಾವಿದದಿಂದ ನೃತ್ಯ ಸಿಂಚನ ಹಾಗೂ ಬೈಲೂರು ಚೈತನ್ಯ ಕಲಾವಿದರಿಂದ ಅಷ್ಟೆಮಿ ತುಳು ಸಾಂಸಾರಿಕ ನಾಟಕ ನಡೆಯಲಿದೆ.
ಜ. 31ರಂದು ಬೆಳಗ್ಗೆಯಿಂದ ವೈದಿಕ ಕಾರ್ಯಕ್ರಮಗಳು ನಡೆಯಲಿದ್ದು ಸಂಜೆ 6 ರಿಂದ ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಯವರು, ಮಂಗಳೂರು ಎಂ ಆರ್ ಜಿ ಗ್ರೂಪ್ ನ ಅಧ್ಯಕ್ಷರಾದ ಬಂಜಾರ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಬಳಿಕ ಕಾಲಾಮಯಂ ಉಡುಪಿ ಇವರಿಂದ ಜಾನಪದ ವೈಭವ ನಡೆಯಲಿದೆ .
ಫೆ.1 ರಂದು ಧಾರ್ಮಿಕ ಸಭೆಯಲ್ಲಿ ಕೊಪ್ಪ ಗೌರಿಗದ್ದೆಯ ಸ್ವರ್ಣ ಪೀಠಿಕಾಪುರದ ವಿನಯ್ ಗುರೂಜಿ ಉಪಸ್ಥಿತರಿರಲಿದ್ದು, ಕರ್ನಾಟಕ ದಕ್ಷಿಣ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷರಾದ ಡಾ. ಎಂ ಬಿ ಪುರಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಂಸ್ಕತಿಕ ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಅವರಿಂದ ಸನಾತನ ರಾಷ್ಟ್ರಂಜಲಿ ನೃತ್ಯ ವೈವಿಧ್ಯ ನಡೆಯಲಿದೆ.
ಫೆ.2 ರಂದು ಧಾರ್ಮಿಕ ಸಭೆಯಲ್ಲಿ ಬೆಳಗಾವಿ ಬೇವಿನಕೊಪ್ಪ ಆನಂದಾಶ್ರಮದ ವಿಜಯಾನಂದ ಸ್ವಾಮೀಜಿ ಹಾಗೂ ಉಪ್ಪಳ ಕೊಂಡವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿ ಇರಲಿದ್ದು ಶಾಸಕ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಲರ್ಸ್ ಕನ್ನಡದ ಕೋಗಿಲೆ ಖ್ಯಾತಿಯ ಕಲಾವತಿ ದಯಾನಂದ್ ಅವರಿಂದ ಸಂಗೀತ ಸಂಜೆ ನಡೆಯಲಿದೆ .
ಫೆ.3 ರಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಮಧ್ಯಾಹ್ನ 12:30 ರಿಂದ ಧರ್ಮ ಸಭೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ .
ಫೆ. 5ರಂದು ಸಾಯಂಕಾಲ 6 ರಿಂದ ಪರಿವಾರ ಶಕ್ತಿಗಳಿಗೆ ಸಿರಿ ಸಿಂಗಾರ ನೇಮೋತ್ಸವ ನಡೆಯಲಿದೆ.