Share this news

ಕಾರ್ಕಳ : ಐ.ಸಿ.ಎ.ಐ ನಡೆಸಿದ 2024ರ ನವೆಂಬರ್ – ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳಾದ, ಕಾರ್ಕಳ ಕಾಬೆಟ್ಟು ನಿವಾಸಿ ವಿಶ್ವನಾಥ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಗಳ ಸುಪುತ್ರನಾದ ಸೋಮನಾಥ್ ವಿ. ಶೆಟ್ಟಿ, ಜಾರ್ಕಳದ ಮೋಹನ್ ಕಿಣಿ ಮತ್ತು ಶುಭಾ ಕಿಣಿ ದಂಪತಿಗಳ ಸುಪುತ್ರಿಯಾದ ಸ್ವಾತಿ ಕಿಣಿ ಮತ್ತು ಬೈಲೂರು ರಮೇಶ್ ಶೆಟ್ಟಿ ಮತ್ತು ಶಾಲಿನಿ ಶೆಟ್ಟಿ ದಂಪತಿಗಳ ಸುಪುತ್ರಿಯಾದ ರಕ್ಷಾ ಶೆಟ್ಟಿ ಅತ್ಯುತ್ತಮ ಅಂಕಗಳೊAದಿಗೆ ತೇರ್ಗಡೆ ಹೊಂದಿರುತ್ತಾರೆ.

ಇವರ ಸಾಧನೆಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹಾಗೂ ಜ್ಞಾನಸುಧಾ ಪರಿವಾರವು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿರುತ್ತಾರೆ.

 

 

Leave a Reply

Your email address will not be published. Required fields are marked *