ಬೆಂಗಳೂರು: ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಇನ್ನು ಮುಂದೆ ನೋಟಿಸ್ ನೀಡುವ ಬದಲು ಚಾಲನಾ ಪರವಾನಗಿಯನ್ನೇ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವರಿಗೆ ಸೂಚನೆ ನೀಡಿದ್ದಾರೆ.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.
ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ. ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.
in