ನವದೆಹಲಿ: ಈ ಬಾರಿಯ ಚುನಾವಣೆಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಉತ್ತರಪ್ರದೇಶದ ಅಮೇಥಿ ಹಾಗೂ ರಾಯ್’ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು,ಪ್ರಕಟಿಸಲು ಮಾತ್ರ ಬಾಕಿ ಇದೆ ಎನ್ನುವ ಮಾಹಿತಿ ಲಭಿಸಿದೆ.
ನಾಮಪತ್ರ ಸಲ್ಲಿಕೆಗೆ ಶುಕ್ರವಾರ ಅಂತಿಮ ದಿನವಾಗಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದೊಳಗೆ ಕಾಂಗ್ರೆಸ್ ತನ್ನ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ ಅಮೇಥಿಗೆ ರಾಹುಲ್, ರಾಯ್’ಬರೇಲಿ ಕ್ಷೇತ್ರಕ್ಕೆ ಪ್ರಿಯಾಂಕಾ ವಾದ್ರಾ ಹೆಸರನ್ನು ಬಹುತೇಕ ಫೈನಲ್ ಮಾಡಲಾಗಿದೆ ಎನ್ನಲಾಗಿದೆ.