ನವದೆಹಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ತನಿಖೆಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಿಂಪಡೆಯಲಾಗಿತ್ತು. ಅಲ್ಲದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಪ್ರಕರಣದ ಕುರಿತು ಪ್ರತಿಕ್ರಿಯೆ ಕೇಳಿ ನೋಟಿಸ್ ನೀಡಿದೆ.
ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ಈ ನಡೆ ಪ್ರಶ್ನಿಸಿ ಸಿಬಿಐ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಂದು ಸುಪ್ರೀಂಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದೆ.
ಹೈಕೋರ್ಟ್ ನಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹಾಗೂ ಸಿಬಿಐ ಈ ಆದೇಶದ ಕುರಿತು ಪ್ರಶ್ನಿಸಿದ್ದರು.ಈ ವೇಳೆ ಶಾಸಕ ಯತ್ನಾಳ್ ಹಾಗೂ ಸಿಬಿಐ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯತ್ನಾಳ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಕಳೆದ ವಾರ ಸುಪ್ರೀಂ ಕೋರ್ಟ್ ಗೆ ಸಿಬಿಐ ಕೂಡ ಮೇಲ್ಮನವಿ ಸಲ್ಲಿಸಿತ್ತು. ಸಿಬಿಐ ಮೇಲ್ಮನವಿ ಅರ್ಜಿಯನ್ನು ಇಂದು ವಿತರಣೆ ನಡೆಸಿ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ನೋಟಿಸ್ ಜಾರಿಗೊಳಿಸಿ ಪ್ರತಿಕ್ರಿಯೆ ಕೇಳಿದೆ.