ಬೆಂಗಳೂರು: ಮೈಸೂರಿನ ಗಂಗರಾಜು ಮತ್ತು ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ 142 ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಖುದ್ದು ಜಾರಿ ನಿರ್ದೇಶನಾಲಯವೇ ಟ್ವಿಟ್ಟರ್ ಎಕ್ಸ್ ನಲ್ಲಿ ಮಾಹಿತಿ ನೀಡಿದೆ.
ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಇಡಿ, ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬAಧಿಸಿದAತೆ ಬೆಂಗಳೂರು ವಲಯ ಕಚೇರಿಯ ಜಾರಿ ನಿರ್ದೇಶನಾಲಯ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳ ಅಡಿಯಲ್ಲಿ ರೂ. 300 ಕೋಟಿ (ಅಂದಾಜು) ಮಾರುಕಟ್ಟೆ ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು 1860 ರ ಐಪಿಸಿಯ ವಿವಿಧ ಸೆಕ್ಷನ್ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಅಡಿಯಲ್ಲಿ ದಾಖಲಿಸಿದ ಎಫ್ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿದೆ. ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಿ.ಎಂ. ಪಾರ್ವತಿ ಅವರಿಗೆ ಅಕ್ರಮ ಪರಿಹಾರ ನಿವೇಶನ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಪಾತ್ರ ಪ್ರಮುಖ ಪಾತ್ರ ವಹಿಸಿದ್ದು, ತನಿಖೆಯ ಸಮಯದಲ್ಲಿ ಬಿ.ಎಂ. ಪಾರ್ವತಿ ಅವರಿಗೆ ಹಂಚಿಕೆಯಾದ 14 ನಿವೇಶನಗಳನ್ನು ಹೊರತುಪಡಿಸಿ ಹೆಚ್ಚಿನ ಸಂಖ್ಯೆಯ ನಿವೇಶನಗಳನ್ನು ಮುಡಾ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಪರಿಹಾರವಾಗಿ ಅಕ್ರಮವಾಗಿ ಹಂಚಿಕೆ ಮಾಡಿದೆ ಎಂಬುದು ಬಹಿರಂಗವಾಗಿದೆ. ಅವರು ಈ ನಿವೇಶನಗಳನ್ನು ಭಾರಿ ಲಾಭಕ್ಕೆ ಮಾರಾಟ ಮಾಡಿದ್ದಾರೆ ಲೆಕ್ಕವಿಲ್ಲದಷ್ಟು ಹಣವನ್ನು ಗಳಿಸಿದ್ದಾರೆ. ಹೀಗೆ ಗಳಿಸಿದ ಲಾಭವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಲಾಗಿದೆ.