

ಕಾರ್ಕಳ ಆ. 27: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜಾತಿ ನಿಂದನೆ, ಅವಹೇಳನ ಆರೋಪದಲ್ಲಿ ಮಿಯ್ಯಾರು ಗ್ರಾಮದ ಸುಧೀರ್ ಬಂಗೇರ ವಿರುದ್ಧ ದಾಖಲಾಗಿದ್ದ ಪ್ರಕರಣದ ಮುಂದಿನ ತನಿಖೆಗೆ ತಡೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್ ಖಾತೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಕುರಿತ ಪೋಸ್ಟ್ ಒಂದಕ್ಕೆ ಕಾರ್ಕಳದ ಮಿಯ್ಯಾರು ಗ್ರಾಮದ ಸುಧೀರ್ ಬಂಗೇರ ಎಂಬವರು ದಲಿತ ನಿಂದನೆ ಕಾಮೆಂಟ್ ಹಾಕಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸುಧೀರ್ ಬಂಗೇರ ಅವರ ಬಂಧನವಾಗಿ ಬಳಿಕ ಬಿಡುಗಡೆಯಾಗಿತ್ತು.ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಫೇಸ್ ಬುಕ್ ನಲ್ಲಿ ಗೃಹ ಸಚಿವರ ಪೋಟೊ ಹಾಕಿ ಅದರಲ್ಲಿ ‘ಆರೆಸ್ಸೆಸ್ ಇನ್ನು ಎರಡು ವರ್ಷಗಳ ಅವಧಿ ಕೋಮುವಾದವನ್ನು ಉಸಿರಾಡುವುದಿಲ್ಲ. ಕಾರಣ ಗೃಹಮಂತ್ರಿ ಸ್ಥಾನದಲ್ಲಿ ಸೌಮ್ಯ ಸ್ವಭಾವದ ಸಚಿವರಿಲ್ಲ’ ಎಂಬ ಫೋಸ್ಟ್ ಮಾಡಲಾಗಿತ್ತು. ಈ ಪೋಸ್ಟ್‌ಗೆ ಸುಧೀರ್ ಬಂಗೇರ ಜೂ. 6ರಂದು ಕಮೆಂಟ್ ಹಾಕಿದ್ದರು.
ಈ ಕಾಮೆಂಟ್ ಕುರಿತು ನಿಟ್ಟೆ ಅತ್ತೂರಿನ ಸುರೇಶ ಚೇತನಹಳ್ಳಿ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಾಮಾಜಿಕ ಶಾಂತಿಯನ್ನು ಕದಡುವ ಉದ್ದೇಶದಿಂದ ರಾಜ್ಯದ ಗೃಹ ಮಂತ್ರಿಯವರು ದಲಿತ ಜಾತಿಗೆ ಸೇರಿದವರೆಂದು ತಿಳಿದರೂ ಅವರ ಜಾತಿಗೆ ಅವಹೇಳನ ಮಾಡುವ ರೀತಿಯಲ್ಲಿ ಸುಧೀರ ಬಂಗೇರ ಕಮೆಂಟ್ ಹಾಕಿದ್ದಾರೆ ಎಂದು ದೂರು ನೀಡಿದ್ದರು. ದಲಿತ ಮಂತ್ರಿಯವರಿಗೆ ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಲಾಗಿದೆ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದರು.
ಈ ಕುರಿತು ತನಿಖೆ ನಡೆಸಿದ ಪೊಲೀಸರು, ಪ್ರಕರಣದ ಆರೋಪಿ ಸುಧೀರ ಬಂಗೇರನನ್ನು ಜೂ. 7ರಂದು ಬಂಧಿಸಿದ್ದರು.
ಈ ಪ್ರಕರಣದ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ಪ್ರಕರಣದ ಮುಂದಿನ ತನಿಖೆಗೆ ತಡೆದ ನೀಡಿ ಮಧ್ಯಂತರ ಆದೇಶವನ್ನು ಹೊರಡಿಸಿದೆ. ವಕೀಲ ಎಚ್. ಪವನಚಂದ್ರ ಶೆಟ್ಟಿ ಸುಧೀರ್ ಬಂಗೇರ ಪರವಾಗಿ ವಾದ ಮಂಡಿಸಿದ್ದರು.





.
.
.
.
.
.
.
.
.
.
.
.
.
.
.
.
.
.
.
.
