Category: ಅಪಘಾತ

ಉಡುಪಿ :ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ : ‘RPF’ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ಮಹಿಳೆಯೊಬ್ಬರು ಆಯತಪ್ಪಿ ಬಿದ್ದಿದ್ದು, (RPF) ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಆಗಬಹುದಾದ ಅನಾಹುತ ತಪ್ಪಿದೆ. ಮಹಿಳೆ ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಆಯತಪ್ಪಿ ಬಿದ್ದಿದ್ದಾರೆ .ಈ ವೇಳೆ ತಕ್ಷಣ ಅಲ್ಲೇ…

ಕುಂದಾಪುರ : ದೇವಸ್ಥಾನದ ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು

ಕುಂದಾಪುರ : ಕೋಟೇಶ್ವರದ ಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಗೆ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಹಂಗಳೂರಿನ ಗೌರೀಶ್‌ ಬಿ.ಆರ್‌ (25) ಮೃತಪಟ್ಟವರು ಎಂದು ತಿಳಿದುಬಂದಿದೆ. ಗೌರೀಶ ಬಿ.ಆರ್. ಎಂಬಿಬಿಎಸ್‌ ವಿದ್ಯಾಭ್ಯಾಸ ಮುಗಿಸಿ ಮುಂದಿನ ವಿದ್ಯಾಬ್ಯಾಸಕ್ಕಾಗಿ ಮನೆಯಲ್ಲಿದ್ದು, ಬುಧವಾರ ಸಂಜೆ…

ತೆಕ್ಕಟ್ಟೆ: ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಶಾಲಾ ವಾಹನ: ಚಾಲಕನಿಗೆ ಗಂಭೀರ ಗಾಯ

ಕುಂದಾಪುರ : ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾ.ಹೆ. 66ರ ಪೇಟೆ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ‌ ನಿಯಂತ್ರಣ ತಪ್ಪಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ…

ಸುಳ್ಯ: ಕರ್ತವ್ಯದಲ್ಲಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ : ಆಸ್ಪತ್ರೆಗೆ ದಾಖಲು

ಸುಳ್ಯ : ಸುಳ್ಯದ ಕೊಡಿಯಾಲಬೈಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲೈನ್ ಮ್ಯಾನ್ ವೊಬ್ಬರಿಗೆ ವಿದ್ಯುತ್ ಶಾಕ್ ತಗುಲಿದೆ. ವಿದ್ಯುತ್ ಶಾಕ್ ಗೆ ಲೈನ್ ಮ್ಯಾನ್ ಕಾಲಿನ ಭಾಗ ಸುಟ್ಟು ಹೋಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಲೈನ್ ಮ್ಯಾನ್ ನನ್ನು ಆಸ್ಪತ್ರೆಗೆ ದಾಖಲಿ ಸಲಾಗಿದ್ದು,…

ಬೆಳ್ತಂಗಡಿ : ಆರ್‌ಎಎಫ್ ಪೊಲೀಸರ ಲಾರಿ ಪಲ್ಟಿ

ಬೆಳ್ತಂಗಡಿ: ಪೊಲೀಸರ ಆರ್‌ಎಎಫ್ ನ ಲಾರಿ ಮಗುಚಿ ಬಿದ್ದ ಘಟನೆ ಸೋಮವಾರ ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಸಂಭವಿಸಿದೆ. ಆರ್‌ಎಎಫ್‌ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ. ರೋಡ್‌ಗೆ ಬರುತ್ತಿದ್ದಾಗ ಕುದ್ರೋಟಿಕಟ್ಟೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ…

ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿತ : ಸೋದರ ಸಂಬಂಧಿಗಳಿಬ್ಬರು ಸ್ಥಳದಲ್ಲೇ ಮೃತ್ಯು

ಮಂಗಳೂರು: ನಗರದ ಜೈಲ್ ರಸ್ತೆಯಲ್ಲಿರುವ ಸಿ.ಜೆ.ಕಾಮತ್ ಮಾರ್ಗದಲ್ಲಿ ಹಳೆಯ ಮನೆಯನ್ನು ಕೆಡವುತ್ತಿದ್ದ ವೇಳೆ ನಡೆದ ಅವಘಡದಲ್ಲಿ ಇಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ಜೇಮ್ಸ್ ಜತ್ತನ್ನ ಮತ್ತು ಅಡ್ವಿನ್ ಜೆರಾಲ್ಡ್ ಮೊಬಿನ್ ಎಂದು ಗುರುತಿಸಲಾಗಿದೆ. ಮೃತರಿಬ್ಬರು ಸೋದರ ಸಂಬಂಧಿಗಳು. ಜೇಮ್ಸ್…

ಬಂಟ್ವಾಳದಲ್ಲಿ ಭೀಕರ ಕಾರು ಅಪಘಾತ: ನವವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಅವರ ಪತ್ನಿ ಮಾನಸ…

ಕುಂದಾಪುರದ ವಿದ್ಯಾರ್ಥಿಗೆ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು : ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕುಂದಾಪುರ: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಸೀಟು ಸಿಕ್ಕಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿಯೊಬ್ಬ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡು ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಶಿವಪ್ರಸಾದ್ ಶೆಟ್ಟಿ ಎಂಬುವರ ಮಗ ಸುಪ್ರಜ್ ಶೆಟ್ಟಿ(17) ಎಂದು ಗುರುತಿಸಲಾಗಿದೆ. ಕುಂದಾಪುರದ ಖಾಸಗಿ…

ಬೈಲೂರು: ಬೈಕ್- ಕಲ್ಲು ಸಾಗಾಟದ ಲಾರಿ ಡಿಕ್ಕಿ- ಇಬ್ಬರು ಗಂಭೀರ

ಕಾರ್ಕಳ: ಬೈಕಿಗೆ ಕಲ್ಲು ಸಾಗಾಟದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಮುಂಜಾನೆ ಬೈಲೂರು ಸಮೀಪದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಜಾರ್ಕಳ ಸಮೀಪದ ಸೂರ್ಯ(19ವ)…