Category: ಅಪರಾಧ

ಬೈಲೂರು : ಪಾದಾಚಾರಿಗೆ ಕಂಟೈನರ್ ಡಿಕ್ಕಿಯಾಗಿ ಮೃತ್ಯು

ಕಾರ್ಕಳ: ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೊಬ್ಬರಿಗೆ ಕಂಟೈನರ್ ಲಾರಿ ಡಿಕ್ಕಿಯಾಗಿ ಪಾದಾಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಯರ್ಲಪಾಡಿ ನಿವಾಸಿ ವಸಂತ್ ಆಚಾರ್ಯ (64) ಮೃತಪಟ್ಟವರು. ಮುಂಜಾನೆ ಕೆಲಸಕ್ಕೆ ಹೋಗಿದ್ದ ವಸಂತ ಅವರು ಮನೆಗೆ ವಾಪಸ್ಸಾಗುವ ವೇಳೆ ಬಸ್ಸಿನಿಂದ…

ಉಡುಪಿ :ಸರಕಾರಿ ವಸತಿ ಸಮುಚ್ಚಯದಲ್ಲಿ ಸರಣಿ ಕಳ್ಳತನ- ಆರು ಮನೆಗೆ ನುಗ್ಗಿದ ಕಳ್ಳರು : ಲಕ್ಷಾಂತರ ಮೌಲ್ಯದ ಚಿನ್ನಾಭರಣ ನಗದು ದೋಚಿ ಪರಾರಿ

ಉಡುಪಿ : ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಸರಕಾರಿ ಸಮುಚ್ಚಯಕ್ಕೆ ಕಳ್ಳರು ನುಗ್ಗಿ ಅಪಾರ ಪ್ರಮಾಣ ನಗ ನಗದು ಕಳ್ಳತನ ಮಾಡಿರುವ ಘಟನೆ ಉಡುಪಿ ನಗರದ ಮಿಷನ್ ಕಾಂಪೌಂಡ್ ಬಳಿ ನಡೆದಿದೆ. ಉಡುಪಿ ನಗರದ ಮಿಷನ್ ಕಂಪೌಂಡ್ ಬಳಿ ಇರುವ ಸರಕಾರಿ ನೌಕರರ…

ನಲ್ಲೂರು ಪಾಜೆಗುಡ್ಡೆ ಬಳಿ ಕ್ಯಾಂಟರ್ ಬೈಕ್ ನಡುವೆ ಭೀಕರ ಅಪಘಾತ: ಪತಿ ಹಾಗೂ ಮೂವರು ಮಕ್ಕಳು ಸಹಿತ ನಾಲ್ವರು ಸ್ಥಳದಲ್ಲೇ ಸಾವು:ಪತ್ನಿ ಗಂಭೀರ

ಕಾರ್ಕಳ: ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆಮು ಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್ ಸವಾರ…

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಪೋಕ್ಸೋ ನ್ಯಾಯಾಲಯ ಅದೇಶಿಸಿದೆ. ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ…

ಕಾರ್ಕಳ: ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ ಮೌಲ್ಯದ ಶೇರು ಮಾರಾಟ: ವಂಚಿಸಿದ ಸೋದರ ಸಂಬಂಧಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆರಿಕದಲ್ಲಿ ನೆಲೆಸಿರುವ ಲಲಿತಾ ರಾವ್‌ ಅವರ ಪತಿ ಅಶೋಕ್‌ ಕಾರ್ಕಳದಲ್ಲಿ…

ಮಂಗಳೂರು: ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ಇಬ್ಬರು ಯುವಕರು ನಾಪತ್ತೆ

ಮಂಗಳೂರು: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ ನಾಲ್ವರು ಯುವಕರ ಪೈಕಿ ಇಬ್ಬರು ಯುವಕರು ನೀರುಪಾಲಾದ ಘಟನೆ ರವಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನೀರಿನ ಸುಳಿಗೆ ಸಿಲುಕಿ ನಾಪತ್ತೆಯಾದ…

ಕುಂದಾಪುರ : ಬೈಕ್‌ ಬುಲೆಟ್‌ ಮುಖಾಮುಖಿ ಢಿಕ್ಕಿ: ಬೈಕ್‌ ಸವಾರ ಸಾವು, ಇಬ್ಬರಿಗೆ ಗಾಯ

ಕುಂದಾಪುರ: ಬೈಕ್‌ ಹಾಗೂ ಬುಲೆಟ್‌ ಮುಖಾಮುಖಿ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್‌ ರಸ್ತೆಯಲ್ಲಿ ರಾತ್ರಿ 11.00 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಕುಂದಾಪುರ ನಗರದ ಬರೆಕಟ್ಟುವಿನ…

ಪಡುಬಿದ್ರೆ:10 ವರ್ಷಗಳ ಹಿಂದೆ ನಾಪತ್ತೆಯಾಗಿದ್ದಾಕೆ ಬೆಂಗಳೂರಿನಲ್ಲಿ ಪತ್ತೆ: ಗಂಡನೊಂದಿಗೆ ಜೀವನ ನಡೆಸಲು ನಿರಾಕರಣೆ: ನಾಪತ್ತೆ ಪ್ರಕರಣಕ್ಕೆ ಅಂತ್ಯ ಹಾಡಿದ ಪೊಲೀಸರು

ಪಡುಬಿದ್ರೆ: ಕಳೆದ 2014ರಲ್ಲಿ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯನ್ನು ಇದೀಗ ಬರೋಬ್ಬರಿ 10 ವರ್ಷಗಳ ಬಳಿಕ ಪಡುಬಿದ್ರೆ ಪೊಲೀಸರು ಬೆಂಗಳೂರಿನಲ್ಲಿ ಪತ್ತೆಹಚ್ಚಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಲಿಮಾರು ನಿವಾಸಿ ಶಂಕರ ಶೆಟ್ಟಿ ಎಂಬವರ ಪತ್ನಿ ಶ್ರುತಿ ಶೆಟ್ಟಿ ಎಂಬವರು ಪತ್ತೆಯಾದ ಮಹಿಳೆ.…

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿ ಆಕ್ರೋಶ: ವ್ಯಾಪಾರ ಪರವಾನಗಿ ರದ್ದುಗೊಳಿಸುವಂತೆ ಆಗ್ರಹ

ವಿಟ್ಲ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯ ಅಂಗಡಿಗೆ ಬೆಂಕಿ ಹಚ್ಚಿದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಯ…

ಕಾರ್ಕಳ : ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದ ಸಾಣೂರಿನ ಯುವಕ

ಕಾರ್ಕಳ : ಯುವಕನೋರ್ವ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ಸೆ. 28ರಂದು ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಮನ್‌ ಶೆಟ್ಟಿ (22) ಎಂದು ಗುರುತಿಸಲಾಗಿದೆ. ಕಡಬಬೆಟ್ಟು ಜನನಿಬೀಡ ಪ್ರದೇಶದಲ್ಲಿರುವ ಬಾವಿಗೆ ಸುಮನ್‌ ಹಾರಿದ್ದು, ಆತ್ಮಹತ್ಯೆಗೆ ನಿಖರ ಕಾರಣ…