ಸ್ಥಳ ಮಹಜರಿಗೆ ಕರೆತಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಖತರ್ನಾಕ್ ಚಡ್ಡಿ ಗ್ಯಾಂಗ್: ಇಬ್ಬರು ಪೊಲೀಸರಿಗೆ ಗಾಯ: ಗುಂಡು ಹಾರಿಸಿ ಆರೋಪಿಗಳ ಬಂಧನ
ಮಂಗಳೂರು: ನಿನ್ನೆಯಷ್ಟೇ ಬಂಧನಕ್ಕೀಡಾಗಿದ್ದ ಖತರ್ನಾಕ್ ”ಚಡ್ಡಿ ಗ್ಯಾಂಗ್”ನ ದರೋಡೆಕೋರರನ್ನು ಸ್ಥಳಮಹಜರಿಗಾಗಿ ಕರೆದುಕೊಂಡು ಹೋಗಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನಲ್ಲಿ ಸರಣಿ ದರೋಡೆ ಬೆನ್ನಲ್ಲೇ ಸಕಲೇಶಪುರದಲ್ಲಿ ನಿನ್ನೆ ಅವರನ್ನು ಬಂಧಿಸಲಾಗಿತ್ತು. ಮಧ್ಯಪ್ರದೇಶದ ರಾಜು ಸಿಂಗ್ವಾನಿಯ…
