Category: ಅಪರಾಧ

ಕಾರ್ಕಳ :ಆನ್ಲೈನ್ ವಂಚನೆ ಬಲಿಯಾಗಿ ಲಕ್ಷಾಂತರ ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿನಿ!

ಕಾರ್ಕಳ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಆನ್ಲೈನ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು , ಈ ಬಗ್ಗೆ ಎಚ್ಚರಿಕೆಯಿಂದಿರುವಂತೆ ಪೊಲೀಸರು ಪದೇಪದೇ ಎಚ್ಚರಿಕೆ ನೀಡುತ್ತಿದ್ದರೂ ಜನರು ಮಾತ್ರ ದುರಾಸೆಗೆ ಬಲಿಯಾಗಿ ಮೋಸ ಹೋಗುವುದು ಮಾತ್ರ ನಿಂತಿಲ್ಲ. ಸುಲಭವಾಗಿ…

ಕಾರ್ಕಳ :ಮಹಿಳೆ ಖರೀದಿಸಿದ್ದ ಹೊಸ ಮೊಬೈಲ್ ಎಗರಿಸಿ ಪರಾರಿಯಾದ ಅಪರಿಚಿತ!

ಕಾರ್ಕಳ:ಮಹಿಳೆಯೊಬ್ಬರು ಹೊಸ ಮೊಬೈಲ್ ಖರೀದಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಅವರ ಕೈಯಲ್ಲಿದ್ದ ಮೊಬೈಲ್ ಚೀಲ ಹಾಗೂ ಅದರಲ್ಲಿದ್ದ ನಗದನ್ನು ಕಸಿದುಕೊಂಡು ಪರಾರಿಯಾಗಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಕಾಬೆಟ್ಟಿನ ಭಾರತ್ ಫೈನಾನ್ಸ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿರುವ ಹಾವೇರಿ…

ಪಾಲಡ್ಕ : ವಿವಾಹಿತ ಮಹಿಳೆ ನಾಪತ್ತೆ

ಮೂಡುಬಿದಿರೆ: ಟಿ.ಬಿ.ಕಾಯಿಲೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಕಳೆದ ಹತ್ತು ದಿನಗಳ ಹಿಂದೆ ಪಾಲಡ್ಕದಿಂದ ನಾಪತ್ತೆಯಾಗಿದ್ದು, ಈ ಕುರಿತು ಮೂಡುಬಿದಿರೆ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಿವಾಸಿ ಶಾಲಿನಿ (38) ನಾಪತ್ತೆಯಾದ ಮಹಿಳೆ. ಸೆ .2…

ಅಜೆಕಾರು : ಕಾರು- ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಅಜೆಕಾರು: ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರಿನಲ್ಲಿ ಬೈಕ್ ಮತ್ತು ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕಿರಣ್ ಕುಮಾರ್ ಪಿ ಎಂಬವರು ಕಾರಿನಲ್ಲಿ ಮಂಗಳೂರಿನಿಂದ ಅಜೆಕಾರು ಮಾರ್ಗವಾಗಿ ಶಿವಮೊಗ್ಗಕ್ಕೆ ಹೋಗುತ್ತಿದ್ದ…

ಮಂಗಳೂರು: ಪ್ರತಿಷ್ಠಿತ ಹೊಟೇಲ್ ಈಜುಕೊಳದಲ್ಲಿ ಬ್ಯಾಂಕ್ ಅಧಿಕಾರಿಯ ಮೃತದೇಹ ಪತ್ತೆ

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್‌ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರA ನಿವಾಸಿ ಗೋಪು ಆರ್…

ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ

ಅಮರಾವತಿ​ : ಸ್ಕಿಲ್​ ಹಗರಣದ ಎ1 ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371…

ಮಿಯ್ಯಾರು : ಮಾನಸಿಕ ಅಸ್ವಸ್ಥ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಎಂಬಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೋಡುಕಟ್ಟೆ ನಿವಾಸಿ ಸುರೇಶ ಪೂಜಾರಿ (48 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಅವರು ಹಲವು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಉಡುಪಿಯ…

ಮಕ್ಕಳ ಗುಂಪಿನ ಮೇಲೆ ಹರಿದ ಬಸ್: ಇಬ್ಬರ ಸ್ಥಿತಿ ಗಂಭೀರ

ಚಿಕ್ಕಮಗಳೂರು: ಶಾಲೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ಸು ಹರಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ಲ್ಲಿ ಇಂದು (ಗುರುವಾರ) ಬೆಳಗ್ಗೆ ನಡೆದಿದೆ. ತುಳಸಿ (15) ಮತ್ತು ನಿವೇದಿತ…

ತಲೆಮರೆಸಿಕೊಂಡಿದ್ದ ಐಸಿಸ್ ಉಗ್ರ ಸೈಯದ್ ನಬೀಲ್ ಬಂಧನ: ತಮಿಳುನಾಡಿನಲ್ಲಿ ಉಗ್ರನನ್ನು ಬಂಧಿಸಿದ ಎನ್‌ಐಎ

ನವದೆಹಲಿ: ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಐಸಿಸ್ ಉಗ್ರ ಸೈಯದ್ ನಬೀಲ್‌ನನ್ನು ತಮಿಳುನಾಡಿನಲ್ಲಿ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಈತ ತ್ರಿಶೂರ್ ಮೂಲದ ಘಟಕದ ಐಸಿಸ್ ಉಗ್ರ ಸಂಘಟನೆಯ ನಾಯಕನಾಗಿದ್ದಾನೆ. ಸೈಯದ್ ಕೇರಳದಲ್ಲಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ. ಈತನ ಸಂಚು ಬಯಲಾದ ಹಿನ್ನೆಲೆ…

ಕಾರ್ಕಳ : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕಾರ್ಕಳ : ಕಾರ್ಕಳ ತಾಲೂಕು ನೂರಾಳ್ ಬೆಟ್ಟು ವಿನ ಸುಜಯ ಎಂಬವರು ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸುಜಯ ಅವರು ಸೆಪ್ಟೆಂಬರ್ 4ರಂದು ಹೊಸ್ಮಾರಿನ ರಾಜವರ್ಮ ಮುದ್ಯ…