Category: ಅಪರಾಧ

ಗಾಂಜಾ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ: 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಬ್ಬರಿಗೆ ಉಡುಪಿ ಜಿಲ್ಲಾ ನ್ಯಾಯಾಲಯವು ಸುಧೀರ್ಘ 4 ವರ್ಷಗಳ ಕಾಲ ವಿಚಾರಣೆ ನಡೆಸಿ ಕೊನೆಗೂ ಶಿಕ್ಷೆ ಹಾಗೂ ದಂಡ ಪ್ರಕಟಿಸಿ ಆದೇಶಿಸಿದೆ. ಆಂಧ್ರಪ್ರದೇಶದ ಹೈದರಾಬಾದ್ ಅಮೀರ್‌ಪೇಟೆ ನಿವಾಸಿ ತಿಪಿರ್ ನೇನಿ ಆದಿತ್ಯ(21)…

ಅಜೆಕಾರು :ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಮರ್ಣೆ ಗ್ರಾಮದ ಅಜೆಕಾರಿನ ಉದ್ಯಮಿಯೊಬ್ಬರು ಮಂಗಳವಾರ ಸಂಜೆ ಹೆರ್ಮುಂಡೆಯ ತನ್ನ ಗೇರುಬೀಜ ಕಾರ್ಖಾನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜೆಕಾರಿನ ನಿವಾಸಿ ನಕುಲದಾಸ್ ಪೈ(55) ಎಂಬವರು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ.ಮಂಗಳವಾರ ಸಂಜೆ ಕೆಲಸಗಾರರು ಹೋದ ಬಳಿಕ ಈ ಕೃತ್ಯ ಎಸಗಿದ್ದಾರೆ.…

ಕಾರ್ಕಳ: 3 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ದಿಢೀರ್ ಪತ್ತೆಯಾಗಿ ಆಸ್ಪತ್ರೆಯಲ್ಲಿ ಸಾವು ! ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಮನೆಗೆ ಬಿಟ್ಟುಹೋದ ಅಪರಿಚಿತ ವ್ಯಕ್ತಿ: ಸಾವಿನ ಕುರಿತು ಸಂಬಂಧಿಕರ ಶಂಕೆ

ಕಾರ್ಕಳ : ಕಾಪು ತಾಲೂಕಿನ ಪಿಲಾರು ಗ್ರಾಮದ ನಿವಾಸಿ ಮೂಲತಃ ತಮಿಳುನಾಡಿನ ಮಣಿ ಎಂಬವರ ಅಣ್ಣ ಮುರುಗ ಎಂಬವರು ಕಳೆದ 3 ತಿಂಗಳ ಹಿಂದೆ ಕಲ್ಲಿನ ಕೋರೆಯಲ್ಲಿ ಕೆಲಸಕ್ಕೆಂದು ಹೋದವರು ಮನೆಗೆ ಬಾರದೇ ನಾಪತ್ತೆಯಾಗಿದ್ದರು. ಮುರುಗ ನಾಪತ್ತೆಯಾದ ಬಳಿಕ ಜೂ.3ರಂದು ರಿಕ್ಷಾದಲ್ಲಿ…

ಬೈಕ್ ಗೆ  ಖಾಸಗಿ ಬಸ್ ಡಿಕ್ಕಿ : ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೂಡುಬಿದಿರೆ: ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಎಂಬಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ…

ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪವೇ ಒಡಿಶಾ ರೈಲು ಅಪಘಾತಕ್ಕೆ ಕಾರಣ: ರೈಲ್ವೆ ಅಧಿಕಾರಿಗಳು

ನವದೆಹಲಿ: ಬಾಲಸೋರ್ ರೈಲು ಅಪಘಾತದ ಬಗ್ಗೆ ಸಿಬಿಐ ಸೋಮವಾರ ತನ್ನ ತನಿಖೆಯನ್ನು ಪ್ರಾರಂಭಿಸುತ್ತಿದ್ದಂತೆ, ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪದಿಂದಾಗಿ ಅಪಘಾತ ಸಂಭವಿಸಿದೆ ಎಂದು ಉನ್ನತ ರೈಲ್ವೆ ಅಧಿಕಾರಿಗಳು ಹೇಳಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಸಿಬಿಐ ತನಿಖೆ…

ಯಾದಗಿರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, 13 ಮಂದಿಗೆ ಗಾಯ

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರು ಆಂಧ್ರ ಜಿಲ್ಲೆಯ ನಂದ್ಯಾಲ ಜಿಲ್ಲೆಯ…

32 ವರ್ಷದ ಹಿಂದಿನ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

ಹೊಸದಿಲ್ಲಿ : ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ಕೊಲೆ ಪ್ರಕರಣವೊಂದರಲ್ಲಿ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ. 32 ವರ್ಷಗಳ ಹಿಂದಿನ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ವಾರಾಣಸಿಯ ನ್ಯಾಯಾಲಯವು ಜೈಲಿನಲ್ಲಿರುವ ದರೋಡೆಕೋರ ಮುಖ್ತಾರ್ ಅನ್ಸಾರಿ ಅವರನ್ನು ಇಂದು ದೋಷಿ ಎಂದು ಘೋಷಿಸಿ…

ಕಲ್ಯಾ: ರಬ್ಬರ್ ಮರದಿಂದ ಬಿದ್ದು ಗಾಯಗೊಂಡಿದ್ದ ತ್ರಿಪುರಾ ಮೂಲಕ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೋಟಿಬೆಟ್ಟು ಎಂಬಲ್ಲಿನ ಕೇರಳ ಮೂಲದ ಬಿಜು ಎಂಬಾತನ ರಬ್ಬರ್ ತೋಟದಲ್ಲಿ ರಬ್ಬರ್ ಮರದಿಂದ ಬಿದ್ದು ಗಾಯಗೊಂಡಿದ್ದ ತ್ರಿಪುರಾ ರಾಜ್ಯದ ರಾಂಪುರ ಮಥಿನ್ ನಗರ್ ನಿವಾಸಿ ಅವಯ್ ಮಂಜ ದೆಬ್ರಮ್(34) ಎಂಬಾತ ಚಿಕಿತ್ಸೆ ಫಲಿಸದೇ ಶುಕ್ರವಾರ…

ಕಾಡುಹೊಳೆ ಅಪಾಯಕಾರಿ ತಿರುವಿನಲ್ಲಿ ಸರಣಿ ಅಪಘಾತ:ಬೈಕ್ ಹಾಗೂ ಸ್ಕೂಟರಿಗೆ ಕಾರು ಡಿಕ್ಕಿ:ಮಕ್ಕಳು ಸೇರಿ 6 ಜನರಿಗೆ ಗಾಯ

ಕಾರ್ಕಳ:ಮರ್ಣೆ ಗ್ರಾಮ ಕಾಡುಹೊಳೆ ಸೇತುವೆಯ ಬಳಿಯ ಅಪಾಯಕಾರಿ ತಿರುವಿನಲ್ಲಿ ಅತಿವೇಗವಾಗಿ ಬಂದ ಕಾರೊಂದು ಬೈಕ್ ಹಾಗೂ ಸ್ಕೂಟರಿಗೆ ಡಿಕ್ಕಿಯಾಗಿ ಮಕ್ಕಳು ಸಹಿತ 6 ಜನರಿಗೆ ಗಾಯಗಳಾದ ಘಟನೆ ಜೂನ್ 4ರಂದು ಭಾನುವಾರ ಸಂಜೆ ಸಂಭವಿಸಿದೆ. ಕಾರು ಚಾಲಕಿಯ ಅವಾಂತರದಿಂದ ತಿರುವಿನಲ್ಲಿ ವೇಗವಾಗಿ…

ನಲ್ಲೂರು : ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಮರಕ್ಕೆ ಡಿಕ್ಕಿ : ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ : ತಾಲೂಕಿನ ನಲ್ಲೂರು ಪರಪ್ಪಾಡಿ ಎಂಬಲ್ಲಿ ಇಂದು ಬೆಳಿಗ್ಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಟೆಂಪೋ ಮಗುಚಿ ಬಿದ್ದಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಲ್ಪೆಯಿAದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ…