Category: ಅಪರಾಧ

ಬೆಳ್ಮಣ್: ಪಾದಾಚಾರಿ ಮತ್ತು ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು: ಪಾದಾಚಾರಿ ಸಾವು, ಕಾರಿನಲ್ಲಿದ್ದ ಐವರಿಗೆ ಗಾಯ

ಕಾರ್ಕಳ: ತಾಲೂಕಿನ ಬೆಳ್ಮಣ್ ಗ್ರಾಮದ ಅರಣ್ಯ ಇಲಾಖೆಯ ಕಛೇರಿ ಬಳಿ ಹಾದು ಹೋಗಿರುವ ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಅತೀವೇಗವಾಗಿ ಹೋಗುತ್ತಿದ್ದ ಕಾರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಯಾಗಿ, ಬಳಿಕ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಡಿಕ್ಕಿಯಾದ ಪಾದಾಚಾರಿ ವ್ಯಕ್ತಿ…

ಮಾಳ : ತೋಡಿಗೆ ಬಿದ್ದು ವ್ಯಕ್ತಿ ಸಾವು

ಕಾರ್ಕಳ: ತಾಲೂಕಿನ ಮಾಳ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ‌ಮೃತಪಟ್ಟಿದ್ದಾರೆ. ಮಾಳ ಗ್ರಾಮದ ಕನೆಗುಂಡಿ ಶ್ಯಾಮ ಮೇರ ಮೃತಪಟ್ಟವರು. ಅವರು ನ.4 ರಂದು ಕೃಷಿ ಕೆಲಸಕ್ಕೆಂದು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ.

ನಿಟ್ಟೆ: ಎದೆನೋವಿನಿಂದ ವ್ಯಕ್ತಿ ಸಾವು

ಕಾರ್ಕಳ: ತಾಲೂಕಿನ ನಿಟ್ಟೆಯಲ್ಲಿ ವ್ಯಕ್ತಿಯೊಬ್ಬರು ಎದೆನೋವಿನಿಂದ ಮೃತಪಟ್ಟಿದ್ದಾರೆ. ನಿಟ್ಟೆಯ ರಮೇಶ ಅವರು ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು , ಅ. 23 ರಂದು ದೀಪಾವಳಿ ಹಬ್ಬಕ್ಕೆಂದು ಮನೆಗೆ ಬಂದಿದ್ದರು. ನ. 02 ರಂದು ರಾತ್ರಿ ಮನೆಯಲ್ಲಿ ತುಳಸಿ ಹಬ್ಬಕ್ಕೆ ಪಟಾಕಿ…

ಕಾರ್ಕಳ:ಈದ್ ಮಿಲಾದ್ ಗೆ ತೋರಣ ಕಟ್ಟುವ ವಿಚಾರದಲ್ಲಿ ಗಲಾಟೆ: ವ್ಯಕ್ತಿಗೆ ನಿಂದನೆ ಜೀವ ಬೆದರಿಕೆ

ಕಾರ್ಕಳ: ಈದ್ ಮಿಲಾದ್ ವೇಳೆ ತೋರಣ ಕಟ್ಟುವ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿರುವ ಘಟನೆ ನ.2 ರಂದು ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ತಪ್ಸೀರ್ ಎಂಬವರು ತಮ್ಮ ಬೈಕಿನಲ್ಲಿ ಜರಿಗುಡ್ಡೆ ಎಂಬಲ್ಲಿರುವ ಮಸೀದಿಗೆ ನಮಾಜ್‌ ಮಾಡಲು ತನ್ನ…

ಮಂಗಳೂರು: ರೌಡಿಶೀಟರ್ ನೌಫಲ್ ಬಜಾಲ್ ಬರ್ಬರ ಹತ್ಯೆ

ಮಂಗಳೂರು: ಮಂಗಳೂರು ಮೂಲದ ರೌಡಿಶೀಟರ್, ಜೋಡಿಕೊಲೆ ಆರೋಪಿ ನೌಫಲ್ ಬಜಾಲ್ ಯಾನೆ ತುಕ್ಕ ನೌಫಲ್ ಎಂಬಾತ ಉಪ್ಪಳದಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದಾನೆ ಎನ್ನುವ ಮಾಹಿತಿ ಲಭಿಸಿದೆ. ಟೋಪಿ ನೌಫಾಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ…

ಇರ್ವತ್ತೂರು: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ತಾಲೂಕಿನ ಇರ್ವತ್ತೂರು ಗ್ರಾಮದಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇರ್ವತ್ತೂರಿನ ಮಹೇಶ್ ಶೆಟ್ಟಿ(37ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಹೇಶ್ ಶೆಟ್ಟಿ ಅವರ ಕುಡಿತದ ಚಟದಿಂದ ಬೇಸತ್ತ ಅವರ ಪತ್ನಿ ಕಳೆದ 3 ವರ್ಷಗಳ ಹಿಂದೆ ವಿಚ್ಛೇದನ ನೀಡಿದ್ದರು.ಪತ್ನಿ…

ನಿಷೇಧಿತ ಪಿಎಫ್ಐ ಸದಸ್ಯರಿಂದ ಸುಹಾಸ್ ಶೆಟ್ಟಿ ಹತ್ಯೆ: ಎನ್ ಐ ಎ ಚಾರ್ಟ್‌ಶೀಟ್‌ನಲ್ಲಿ ಸತ್ಯ ಬಹಿರಂಗ

ಮಂಗಳೂರು (ಅ.31): ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ.01ರಂದು ನಡೆದಿದ್ದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಿಷೇಧಿತ ಪಿಎಫ್ಐ ಸದಸ್ಯರಿಂದ ಸುಹಾಸ್ ಶೆಟ್ಟಿ ಹತ್ಯೆ ನಡೆದಿದೆ ಎನ್ನುವ…

ಮುದ್ರಾಡಿ: ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು

ಹೆಬ್ರಿ: ಬೈಕಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮುದ್ರಾಡಿಯ ಹರೀಶ(45) ಮೃತಪಟ್ಟ ದುರ್ದೈವಿ. ಹರೀಶ ಅವರು ಅ.25 ರಂದು ಬೈಕಿನಲ್ಲಿ ಹೋಗುತ್ತಿದ್ದಾಗ ರಾತ್ರಿ ಮುದ್ರಾಡಿ ರಿಕ್ಷಾ ನಿಲ್ದಾಣ ಬಳಿಯ ಬ್ಯಾರಿಕೇಡ್ ಗೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಹೆಬ್ರಿ…

ಹೆಬ್ರಿ: ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ವಿಜಯಲಕ್ಮೀ ಬಾರ್‌ ಎಂಡ್‌ ರೆಸ್ಟೊರೆಂಟ್‌ ಮತ್ತು ಲಾಡ್ಜ್ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಹೆಬ್ರಿ ಪೊಲೀಸ್‌ ಠಾಣೆಯ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಪ್ರೀತಂಕುಮಾರ್‌ ಪಯಾಸ್‌ ಅವರಿಗೆ ಬಂದ ಖಚಿತ ಮಾಹಿತಿ…

ದ್ವೇಷ ಭಾಷಣ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಸಾರ್ವಜನಿಕ ಸಮಾರಂಭದಲ್ಲಿ ‘ಧರ್ಮಗಳ ನಡುವೆ ದ್ವೇಷವನ್ನು ಪ್ರಚೋದಿಸುವ, ಸಾರ್ವಜನಿಕ ಶಾಂತಿಗೆ ಭಂಗ ತರುವಂತಹ’ ಭಾಷಣ ಮಾಡಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20 ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ…