Category: ಅಪರಾಧ

ಮಂಗಳೂರು ಪಾಲಿಕೆಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲ ಪತ್ತೆ: ಮಧ್ಯವರ್ತಿಗಳಿಂದ ಲಕ್ಷಾಂತರ ರೂ ವಂಚನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆಯಾಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವಂಚಕರು ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್​​ನ್ನೇ ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ…

ಅಜೆಕಾರು: ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮೇಲೆ ಅಧಿಕಾರಿಗಳ ದಾಳಿ: ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ವಶ

ಕಾರ್ಕಳ: ಅಜೆಕಾರಿನ ಮನೋಜ್ ಟ್ರೇಡರ್ಸ್ ಅಂಗಡಿ ಮಾಲೀಕ ಮಂಜುನಾಥ ಹೆಗ್ಡೆ ಎಂಬವರು ಪಡಿತರ ಅಕ್ಕಿಯನ್ನು ಗ್ರಾಹಕರಿಂದ ಅತೀ ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಬೆಲೆಗೆ ರೈಸ್ ಮಿಲ್ ಹಾಗೂ ರಖಂ ಖರೀದಿದಾರರಿಗೆ ಮಾರಾಟ ಮಾಡಿ ಲಾಭ ಗಳಿಸುವ ಉದ್ದೇಶದಿಂದ ಅಕ್ರಮವಾಗಿ ಅಂಗಡಿಯಲ್ಲಿ…

ಹಿರ್ಗಾನ: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ

ಕಾರ್ಕಳ: ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಹಿರ್ಗಾನದ ಯುವತಿಯೊಬ್ಬಳಿಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಹಿರ್ಗಾನದ ಕೀರ್ತನಾ ಅವರಿಗೆ ಜೂ.27 ರಂದು ಟೆಲಿಗ್ರಾಂ ಖಾತೆಯಿಂದ @Nithya_ reception nist_ NSE99 ಲಿಂಕ್ ಬಂದಿದ್ದು, ಆ ಲಿಂಕ್ ಒಪನ್ ಮಾಡಿದಾಗ…

ಮಲ್ಲೇಶ್ವರ ಬಿಜೆಪಿ ಕಚೇರಿ ಎದುರು ಬಾಂಬ್ ಸ್ಫೋಟ ಪ್ರಕರಣ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನ ಬಂಧನ

ಚೆನ್ನೈ: 2013ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿ ಸ್ಫೋಟ ಪ್ರಕರಣದಲ್ಲಿ ಬೇಕಾಗಿದ್ದ ಶಂಕಿತ ಉಗ್ರ ಅಬೂಬಕ್ಕರ್ ಸಿದ್ದಿಕಿಯನ್ನು ತಮಿಳುನಾಡು ಪೊಲೀಸರ ಉಗ್ರ ನಿಗ್ರಹ ತಂಡ ಆಂಧ್ರ ಪ್ರದೇಶದಲ್ಲಿ ಬಂಧಿಸಿದೆ. ಅಬೂಬಕ್ಕರ್ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಕಳೆದ 30…

ಸಾಣೂರು: ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ನಿವೃತ್ತ ನರ್ಸ್ ಗೆ 5 ಲಕ್ಷಕ್ಕೂ ಮಿಕ್ಕಿ ವಂಚನೆ: ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲು

ಕಾರ್ಕಳ: ಕಾರ್ಕಳ ತಾಲೂಕು ಸಾಣೂರಿನ ನಿವೃತ್ತ ನರ್ಸ್ ಒಬ್ಬರಿಗೆ ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿ ಕೆವೈಸಿ ಅಪ್‌ಡೇಟ್ ಎಂದು ನಂಬಿಸಿ 5 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಪ್ರಕರಣ ನಡೆದಿದೆ. ಸಾಣೂರಿನ ಪ್ರೇಮಲತಾ (58) ಎಂಬವರು ನಿವೃತ್ತ ನರ್ಸ್ ಆಗಿದ್ದು,…

ಮಿಯ್ಯಾರು: ಮಧುಮೇಹದಿಂದ ಬಳಲುತ್ತಿದ್ದ ಮಹಿಳೆ ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಮಧುಮೇಹ ಹಾಗೂ ಜ್ವರದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಿಯ್ಯಾರಿನ ಮಲ್ಲಿಕಾ ಲೋಬೊ (43) ಮೃತಪಟ್ಟವರು. ಜೂ.30 ರಂದು ಅನಾರೋಗ್ಯದಿಂದ ಮನೆಯಲ್ಲಿ ಮಲಗಿದ್ದ ಅವರು ಸಂಜೆಯ ವೇಳೆಗೆ ಅವರ ಮಗಳು ಎಬ್ಬಿಸಿದಾಗ ಮಾತನಾಡದೇ ಇದ್ದ ಕಾರಣ ಅವರನ್ನು…

ಬ್ರಹ್ಮಾವರ: ಹಸು ರುಂಡ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ

ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿದ್ದು,ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಕುಂಜಾಲು…

ಕಾರ್ಕಳ: ಕುಟುಂಬ ಕಲಹಕ್ಕೆ ಬೇಸತ್ತ ಮದ್ಯವ್ಯಸನಿ ನೇಣಿಗೆ ಶರಣು

ಕಾರ್ಕಳ: ಕೌಟುಂಬಿಕ ಕಲಹ ಹಾಗೂ ವಿಪರೀತ ಮದ್ಯಪಾನ ಚಟ ಹೊಂದಿದ್ದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತಾನು ಕೆಲಸ ಮಾಡುತ್ತಿದ್ದ ಶೆಡ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಾಮರಾಜನಗರ ಜಿಲ್ಲೆಯ ಕುಮರೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಮರೇಶ್ ಸೂಡಾ ಗ್ರಾಮದ…

ಎಳ್ಳಾರೆ: ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕೌಟುಂಬಿಕ ಕಲಹ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಎಳ್ಳಾರೆ ಎಂಬಲ್ಲಿ ನಡೆದಿದೆ. ಎಳ್ಳಾರೆ ಗ್ರಾಮದ ಬಾಬಯ್ಯಬೆಟ್ಟು ನಿವಾಸಿ ನವೀನ್ ನಾಯ್ಕ್(38) ಎಂಬವರು ಆತ್ಮಹತ್ಯೆ ಮಾಡಿಕೊಂಡ…

ಅಜೆಕಾರು: ಅನಾರೋಗ್ಯದಿಂದ ಬಳಲುತ್ತಿದ್ದ ಮದ್ಯವ್ಯಸನಿ ಮೃತ್ಯು

ಅಜೆಕಾರು: ಸುಮಾರು 20 ವರ್ಷಗಳಿಂದ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಕಳೆದ 15 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮರ್ಣೆ ಗ್ರಾಮದ ನಿವಾಸಿ ಸುಧಾಕರ (35) ಮೃತಪಟ್ಟವರು. ಅವರು ಸುಮಾರು 15 ದಿನಗಳಿಂದ ಕುಡಿತದ ಚಟದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.…