Category: ಅಪರಾಧ

ಬೆಳ್ತಂಗಡಿ : ಪತ್ತೆಯಾಗದ ಪುಟ್ಟ ಮಗುವಿನ ಪೋಷಕರು : ಇನ್ನೂ ಕರಗಿಲ್ಲವೇ ಹೆತ್ತ ತಾಯಿಯ ಮನಸ್ಸು…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದೀಗ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ- ಆರೋಪಿ ದಿಲೀಪ್ ಹೆಗ್ಡೆಗೆ ಜಾಮೀನು ಮಂಜೂರು

ಕಾರ್ಕಳ: ಅಜೆಕಾರು ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಪ್ರಿಯತಮನ ಜತೆ ಸೇರಿ ಉಸಿರುಗಟ್ಟಿಸಿ ಭೀಕರವಾಗಿ ಹತ್ಯೆಗೈದ ಪ್ರಕರಣದ A2 ಆರೋಪಿ ಹಿರ್ಗಾನದ ನಿವಾಸಿ ದಿಲೀಪ್ ಹೆಗ್ಡೆಗೆ ಹೈಕೋರ್ಟ್ ಜಾಮೀನು ಮಂಜೂರುಗೊಳಿಸಿದೆ. ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಖತರ್ನಾಕ್ ಕಿಲ್ಲರ್ ಲೇಡಿ…

ಬ್ರಹ್ಮಾವರ: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬ್ರಹ್ಮಾವರ : ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಜಂಕ್ಷನ್‌ನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಎಸ್.ಎಮ್.ಎಸ್. ಶಾಲೆಯ 6ನೇ ತರಗತಿಯ ವಂಶಿ ಜಿ ಶೆಟ್ಟಿ(14) ಸಮ್ಮರ್…

ಮಂಗಳೂರಿನ ಮುಡಾ ಕಮೀಷನರ್ ಗೆ ಜೀವ ಬೆದರಿಕೆ, ವಾಮಾಚಾರ ಧಮ್ಕಿ : ಉರ್ವ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತರಿಗೆ ಇಬ್ಬರು ಮಧ್ಯವರ್ತಿಗಳು ತಮಗೆ ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ, ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಮಂಗಳೂರು ಮೂಡಾ ಆಯುಕ್ತೆ ನೂರ್ ಝಹರಾ ಖಾನ್ ಆರೋಪಿಸಿ, ಉರ್ವ…

ಬೈಂದೂರು ಮನೆಕಳ್ಳತನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬೈಂದೂರು: ಮನೆಗೆ ಬೀಗ ಹಾಕಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ ಮಾಡಿದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೈಂದೂರು ಉಪ್ಪುಂದ ನಿವಾಸಿಗಳಾದ ಯತಿರಾಜ್, ಮಹೇಶ್ ಯಳಜಿತ್ ಹಾಗೂ ನಾಗೂರು ನಿವಾಸಿ ಕಾರ್ತಿಕ್ ಬಂಧಿತ…

ಬೆಳ್ತಂಗಡಿಯ ಅಂಡಿಂಜೆಯಲ್ಲಿ ಬೈಕ್ ಅಪಘಾತ: ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು :ಸುಳ್ಯದಲ್ಲಿ ಯಕ್ಷಗಾನ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ

ಬೆಳ್ತಂಗಡಿ: ಬೈಕ್‌ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತರೊಬ್ಬರು ಮೃತಪಟ್ಟ ಘಟನೆ ಮಾ.31ರ ಸೋಮವಾರ ಮುಂಜಾನೆ 4 ಗಂಟೆಗೆ ಅಂಡಿಂಜೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ…

ಮಂಗಳೂರು: ದೇರಳಕಟ್ಟೆ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ, ಇಬ್ಬರು ಆರೋಪಿಗಳು ಸೆರೆ

ಉಳ್ಳಾಲ : ದೇರಳಕಟ್ಟೆಯಲ್ಲಿರುವ ಮುತ್ತೂಟ್​ ಫೈನಾನ್ಸ್​ನಲ್ಲಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೆರೆ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತ ಆರೋಪಿಗಳು. ಶನಿವಾರ ಸಂಜೆ ರೈಲಿನಲ್ಲಿ ಬಂದಿದ್ದ…

ಮಿಯ್ಯಾರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿ: ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವು

ಕಾರ್ಕಳ :ಚರ್ಚಿನಲ್ಲಿ ಪ್ರಾರ್ಥನೆ ಮುಗಿಸಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯ್ಯಾರು ಗ್ರಾಮದ ಜೋಡುಕಟ್ಟೆ ಚರ್ಚ್‌ ಬಳಿ ಭಾನುವಾರ ಸಂಭವಿಸಿದೆ. ಕಾರ್ಕಳ ಮಂಗಳಪಾದೆಯ ಮೇರಿ ವಾಝ್‌ (70) ಎಂಬವರು ಮೃತಪಟ್ಟ ಮಹಿಳೆ.ಅವರು ಮಿಯ್ಯಾರು ಚರ್ಚ್‌…

ಕಾಡುಹೊಳೆ ಬಳಿ ಕಾರು-ಓಮ್ನಿ ಮುಖಾಮುಖಿ ಡಿಕ್ಕಿ: ಇಬ್ಬರು ಮಕ್ಕಳು ಸಹಿತ ಐವರಿಗೆ ಗಾಯ

ಕಾರ್ಕಳ: ಮಾರುತಿ‌ ಓಮ್ನಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಹಾಗೂ ಒಮ್ನಿಯಲ್ಲಿದ್ದ ಮೂವರು ಸೇರಿ 5 ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕಾಡುಹೊಳೆ ಕೋಟೆಬೈಲು ತಿರುವಿನಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಕಾರಿನಲ್ಲಿ…

ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23),…