Category: ಅಪರಾಧ

ಬಂಟ್ವಾಳ: ಸ್ಕೂಟರ್ ಗೆ ಡಿಕ್ಕಿಯಾದ ಖಾಸಗಿ ಬಸ್ : ಓರ್ವ ಸ್ಥಳದಲ್ಲೇ ಸಾವು,ಇನ್ನೋರ್ವ ಗಂಭೀರ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಖಾಸಗಿ ಬಸ್‌ ಸ್ಕೂಟರ್ ಗೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ತುಂಬೆ ನಿವಾಸಿ ಪ್ರವೀಣ್ (30) ಎಂದು ಗುರುತಿಸಲಾಗಿದೆ. ಇನ್ನೊರ್ವ ಸವಾರ ಸಂದೀಪ್…

ಪುತ್ತೂರು: ನಾಪತ್ತೆಯಾಗಿದ್ದ ಮಹಿಳೆಯ ತಲೆಬುರುಡೆ, ಎಲುಬುಗಳು ಪತ್ತೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕುಂಬ್ರದ ಒಳಮೊಗ್ರು ಗ್ರಾಮದ ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾಗಿದ್ದು, ತಿಂಗಳ ಹಿಂದೆ ನಾಪತ್ತೆಯಾಗಿದ್ದ ನಳಿನಿ ಎಂಬವರದ್ದು ಎಂದು ಗುರುತಿಸಲಾಗಿದೆ. ಮಹಿಳೆಯ ತಲೆಗೂದಲು ನೇಣುಕುಣಿಕೆಯಲ್ಲಿ ಜೋತಾಡುತ್ತಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

ಉಡುಪಿ : ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ: ಸ್ಕೂಟರ್ ಸೇರಿದಂತೆ 740 ಗ್ರಾಂ ತೂಕದ ಗಾಂಜಾ ವಶಕ್ಕೆ

ಉಡುಪಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಾರಾಯಣ ನಗರ ರಸ್ತೆಯ ಬಳಿ ನಡೆದಿದೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ನರಿಂಗಾಣ ಗ್ರಾಮದ ಮಹಮ್ಮದ್‌ ಸಪಾಝ್‌ (29)ಹಾಗೂ ಪುತ್ತೂರು ಗ್ರಾಮದ ಸಂತೆಕಟ್ಟೆಯ…

ಮುಂಡ್ಕೂರು : ಕ್ಯಾನ್ಸರ್ ನಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ: ಕಳೆದೆರಡು ತಿಂಗಳಿನಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಡ್ಕೂರು ನಿವಾಸಿ ಬಿ. ಮಂಜುನಾಥ (73) ಆತ್ಮಹತ್ಯೆ ಮಾಡಿಕೊಂಡವರು. ಅವರು ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್‌ ಖಾಯಿಲೆಯಿಂದ ಬಳಲುತ್ತಿದ್ದು, ಅ.30 ರಂದು ರಾತ್ರಿ ಮನೆಯಿಂದ ಹೇಳದೆ…

ಅಜೆಕಾರು ಬಾಲಕೃಷ್ಣ ಪೂಜಾರಿ ಸಂಶಯಾಸ್ಪದ ಸಾವು ಪ್ರಕರಣಕ್ಕೆ ಮಹತ್ವದ ತಿರುವು: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಎಂದು ದೃಢ: ಪೊಲೀಸರಿಗೆ ಮಹತ್ವದ ಸಾಕ್ಷ್ಯ  ಲಭ್ಯ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪತ್ನಿ ಹಾಗೂ ಅವಳ ಪ್ರಿಯಕರ ಸೇರಿ ಗಂಡನಿಗೆ ವಿಷಪ್ರಾಶನ ಮಾಡಿ ಹತ್ಯೆಗೆ ಯತ್ನಿಸಿ ಅದು ಫಲಿಸದಿದ್ದಾಗ ಉಸಿರುಗಟ್ಟಿಸಿ ಕೊಲೆಗೈದ ಪ್ರಕರಣವು ಇಡೀ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು…

ಅಮೆಜಾನ್‌ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚನೆ: ಇಬ್ಬರುಆರೋಪಿಗಳು ಅಂದರ್

ಮಂಗಳೂರು: ಅಮೆಜಾನ್‌ ಕಂಪನಿಗೆ ಬರೊಬ್ಬರಿ 30 ಕೋಟಿ ರೂ. ವಂಚಿಸಿದ್ದ ಆರೋಪಿಗಳನ್ನು ಮಂಗಳೂರಿನ ಉರ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ರಾಜ್ಯದ ಧೋಪುರ್ ಜಿಲ್ಲೆಯ ನಿವಾಸಿ ರಾಜಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಬಂಧಿತ ಆರೋಪಿಗಳು. ಆರೋಪಿಗಳು…

ಕಟಪಾಡಿ: ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಢಿಕ್ಕಿ- 17 ಮಂದಿಗೆ ಗಂಭೀರ ಗಾಯ

ಉಡುಪಿ: ಪ್ರವಾಸಿ ಬಸ್ಸೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದು ಹಲವು ಪ್ರವಾಸಿಗರು ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66 ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೊಲ್ಲೂರು ಪುಣ್ಯಕ್ಷೇತ್ರ ದರ್ಶನಕ್ಕೆ…

ಮುದ್ರಾಡಿ: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ಹೆಬ್ರಿ: ದೀಪಾವಳಿ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿರುವ ದಾರುಣ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಲ್ಲಾಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮುದ್ರಾಡಿ ಬಲ್ಲಾಡಿಯ ನಿವಾಸಿ ಹರೀಶ್ (45) ಎಂಬವರು ಮುದ್ರಾಡಿ ಮಂಜುನಾಥ ರವರ ಸೊಸೈಟಿ ಬ್ಯಾಂಕ್…

ಹೆಬ್ರಿ: ಮದ್ಯಪಾನಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಟುಂಬದವರ ಮೇಲೆ ಹಲ್ಲೆ

ಹೆಬ್ರಿ: ಮದ್ಯಪಾನ ಮಾಡಲು ಅಡ್ಡಿಪಡಿಸಿದರೆಂಬ ಕಾರಣಕ್ಕೆ ಯುವಕನೊಬ್ಬ ತನ್ನ ಮನೆಯವರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಹೆಬ್ರಿ ತಾಲೂಕಿನ ಶಿವಪುರದಲ್ಲಿ ಗುರುವಾರ ನಡೆದಿದೆ. ಶಿವಪುರದ ಶೇಖರ ಎಂಬವರ ಪುತ್ರ ಪ್ರಸಾದ ಎಂಬಾತ ಅ. 31 (ಗುರುವಾರ) ರಂದು ಸಂಜೆ ಮದ್ಯಪಾನ ಮಾಡಲು…

ನಾಡ್ಪಾಲು: ಮದ್ಯವ್ಯಸನಿ ಬಾವಿಗೆ ಹಾರಿ ಆತ್ಮಹತ್ಯೆ

ಹೆಬ್ರಿ: ಹೆಬ್ರಿಯ ನಾಡ್ಪಾಲು ಎಂಬಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಡ್ಪಾಲು ನಿವಾಸಿ ಉಮೇಶ (52ವ) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ ರವರು ಕೂಲಿ ಕೆಲಸ ಮಾಡಿಕೊಂಡಿದ್ದು ವಿಪರಿತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಅವರು ಮಾನಸಿಕವಾಗಿ ಮನನೊಂದು ಜೀವನದಲ್ಲಿ…