Category: ದಕ್ಷಿಣ ಕನ್ನಡ

ಮಂಗಳೂರು: ಭಾರಿ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ: ಬಾಲಕಿ ಸಾವು, ಅವಶೇಷಗಳಡಿ ಸಿಲುಕಿದ ಐವರ ರಕ್ಷಣೆಗೆ ಕಾರ್ಯಾಚರಣೆ

ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ದೇರಳೆಕಟ್ಟೆಯಲ್ಲಿ ಕಂಪೌಂಡ್…

ಶಿರ್ಲಾಲು ಪರಿಸರದಲ್ಲಿ ಮುಂದುವರಿದ ಒಂಟಿ‌ ಸಲಗದ ದಾಂಧಲೆ: ಅಡಿಕೆ ಕೃಷಿಗೆ ಹಾನಿ: ಆನೆ ಕಾಡಿಗಟ್ಟಲು ಅರಣ್ಯಾಧಿಕಾರಿಗಳ ಕಾರ್ಯಾಚರಣೆ

ಕಾರ್ಕಳ : ಶಿರ್ಲಾಲು ಗ್ರಾಮದಲ್ಲಿ ಕಾಡಾನೆ ಸಂಚಾರವು ಗ್ರಾಮಸ್ಥರ ನಿದ್ದೆಗೆಡಿಸಿದೆ. ಕಳೆದ ಒಂದು ವಾರದಿಂದ ಒಂಟಿ ಸಲಗವು ಸಿಕ್ಕ ಸಿಕ್ಕ ಕೃಷಿ ಬೆಳೆಗಳನ್ನು ನಾಶ ಮಾಡಿ ದಾಂಧಲೆ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಕಾಡಾನೆಗಳ ಗುಂಪಿನಿಂದ ಬೇರ್ಪಟ್ಟ…

ದಕ್ಷಿಣ ಕನ್ನಡದ ಪೊಲೀಸ್ ಆಯುಕ್ತ, ಎಸ್ಪಿ ವರ್ಗಾವಣೆ: ನೂತನ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ,ಎಸ್ಪಿಯಾಗಿ ಡಾ.ಅರುಣ್ ಕೆ ನೇಮಕ

ಬೆಂಗಳೂರು: ಕೋಮು ಸಂಘರ್ಷದಿಂದ ಬೆಂದಿರುವ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಖಡಕ್ ಅಧಿಕಾರಿಗಳ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗರ್ವಾಲ್ ಅವರನ್ನು…

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದುಸ್ಥಿತಿ ಮಂಗಳೂರಿನ ಜನರಿಗೆ ಬಂದಿಲ್ಲ: ಡಿಕೆಶಿ ವಿರುದ್ದ ಸುನಿಲ್ ವಾಗ್ದಾಳಿ

ಕಾರ್ಕಳ: ಕಾಂಗ್ರೆಸ್ ನವರ ಗ್ಯಾರಂಟಿಗಾಗಿ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದುಸ್ಥಿತಿ ಮಂಗಳೂರಿನ‌ ಜನರಿಗೆ ಬಂದಿಲ್ಲ. ಗ್ಯಾರಂಟಿ ಘೋಷಣೆಯ ಬಳಿಕವೂ ಉಡುಪಿ- ದಕ್ಷಿಣಕನ್ನಡದಲ್ಲಿ ಮಖಾಡೆ ಮಲಗಿರುವ ಕಾಂಗ್ರೆಸ್ ನ್ನು ಎಬ್ಬಿಸುವುದಕ್ಕೆ ವಿಶೇಷ ಯೋಜನೆ ರೂಪಿಸಿ ಎಂದು ಮಾಜಿ ಸಚಿವ ವಿ.ಸುನೀಲ್ ಕುಮಾರ್ ಡಿಸಿಎಂ ಡಿ.ಕೆ.ಶಿವಕುಮಾರ್…

ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: 15 ಮಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ಹತ್ಯೆ ಮತ್ತು ಖಲಂದರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣ‌ ಕುರಿತಂತೆ ಸ್ಥಳೀಯರಾದ ದೀಪಕ್,ಸುಮಿತ್ ಸೇರಿ 15 ಮಂದಿಯ ವಿರುದ್ಧ…

ಬಂಟ್ವಾಳ:ಪಿಕಪ್ ಚಾಲಕನ ಬರ್ಬರ ಹತ್ಯೆ: ಕೃತ್ಯದ ಬಳಿಕ ಬೈಕಿನಲ್ಲಿ ಪರಾರಿಯಾದ ಹಂತಕರು

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ದುಷ್ಕರ್ಮಿಗಳ ತಂಡವೊಂದು ಯುವಕನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಯುವಕನನ್ನು ಬರ್ಬರವಾಗಿ ಕಡಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ…

ಜೆ.ಇ.ಇ. ಮೈನ್(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್ ಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ರಾಷ್ಟ್ರಕ್ಕೆ ಕೆಟಗರಿ ವಿಭಾಗದಲ್ಲಿ 6ನೇ ರ‍್ಯಾಂಕ್

ಕಾರ್ಕಳ: .ಇ.ಇ. ಮೈನ್(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್ 99.4093359 ಪರ್ಸಂಟೈಲ್ ಪಡೆದು ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ಎರಡು ವಿಭಾಗಗಳಲ್ಲಿಯೂ ಕೆಟಗರಿ ವಿಭಾಗದಲ್ಲಿ ರಾಷ್ಟ್ರಕ್ಕೆ 6ನೇ ರ‍್ಯಾಂಕ್ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ವಿ…

ವಿದೇಶದಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಕೋಟ್ಯಾಂತರ ರೂ. ವಂಚನೆ: ಮಂಗಳೂರಿನ ಖಾಸಗಿ ಏಜೆನ್ಸಿ ವಿರುದ್ಧ ದೂರು

ಮಂಗಳೂರು: ಮಂಗಳೂರಿನ ಹೈರ್ ಗ್ಲೋ ಎಲಿಗಂಟ್ ಎಂಬ ಖಾಸಗಿ ಏಜೆನ್ಸಿಯು ನ್ಯೂಜಿಲೆಂಡ್‌ನಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ 185ಕ್ಕೂ ಹೆಚ್ಚು ಜನರಿಂದ 8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿದೆ. ಹೈರ್ ಗ್ಲೋ ಎಲಿಗೆಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈ.ಲಿ…

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣ: ಪೊಲೀಸರ ತನಿಖೆಯಲ್ಲಿ ಕಾರಣ ಬಹಿರಂಗ

ಮಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಆಕಾಂಕ್ಷಾ ನಾಯರ್ ನಿಗೂಢ ಸಾವು ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ವಿಚಾರ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ…

ಮಾಳ-ಕೆರ್ವಾಶೆ ವ್ಯವಸಾಯ ಸೇವಾ ಸಹಕಾರಿ ಸಂಘದ ಕೆರ್ವಾಶೆ ಶಾಖೆಯ ನೂತನ ಕಟ್ಟಡ ಉದ್ಘಾಟನೆ: ಸಹಕಾರಿ ಕ್ಷೇತ್ರವು ಜನರ ಬಳಿಗೆ ಹೋಗಿ ಸೇವೆ ನೀಡುವ ಕ್ಷೇತ್ರ: ಡಾ‌.ಎಂ ಎನ್ ರಾಜೇಂದ್ರ ಕುಮಾರ್

ಚಿತ್ರ ಕೃಪೆ: ಉಷಾ ಡಿಜಿಟಲ್ಸ್, ಕೆರ್ವಾಶೆ ಕಾರ್ಕಳ:ಸಹಕಾರಿ ಕ್ಷೇತ್ರವು ಗ್ರಾಮೀಣ ಭಾಗದ ಜನರ ಬಳಿ ಹೋಗಿ ಸೇವೆ ಕೊಡುವ ಕ್ಷೇತ್ರ. ಹಳ್ಳಿ ಹಳ್ಳಿಗಳಲ್ಲಿ ಶಾಖೆಗಳನ್ನು ತೆರೆದು ಜನರ ಜೀವನ ಮಟ್ಟ ಸುಧಾರಿಸಿದೆ ಎಂದು ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್…