Category: ದಕ್ಷಿಣ ಕನ್ನಡ

ಬೆಳ್ಳಾರೆ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಪಿಕಪ್

ಸುಳ್ಯ: ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸುಟ್ಟು ಹೋದ ಘಟನೆ ಭಾನುವಾರ ಸಂಭವಿಸಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವಿನಲ್ಲಿ ಆಕಸ್ಮಿಕವಾಗಿ ಎದುರು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ…

ಉಪ್ಪಿನಂಗಡಿ: ಚಾಕುವಿನಿಂದ ಇರಿದು ಯುವಕನ ಕೊಲೆ ಪ್ರಕರಣ; ಆರೋಪಿಯ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ಶರತ್ ಕುಮಾರ್ ಎಂಬ ಯುವಕನನ್ನು ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹರಿಪ್ರಸಾದ್ ಎಂದು ಗುರುತಿಸಲಾಗಿದೆ. ಕ್ಷುಲ್ಲಕ ವಿಚಾರಕ್ಕೆಸಂಬಂಧಿಸಿ ಚಿಕ್ಕಪ್ಪನ ಮನೆಮಂದಿಯೊAದಿಗೆ ಜಗಳವಾಡುತ್ತಿದ್ದ ಶರತ್…

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಭೀಕರ ಅಪಘಾತ : ತಂದೆ ಮಗ ಮೃತ್ಯು

ಪುತ್ತೂರು : ಬೈಕ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿ ಸಹಸವಾರ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ರವಿವಾರ ನಡೆದಿದೆ.…

ಕಾರ್ಕಳ: ಮೀನು ಸಾಗಾಟದ ಟ್ರಕ್ ಮೇಲೆ ಕಲ್ಲು ತೂರಾಟ ಪ್ರಕರಣ:  ಮೂವರು ಆರೋಪಿಗಳ ಬಂಧನ 

ಕಾರ್ಕಳ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆನೀಡಿದ ದಿನ ಕಾರ್ಕಳ ತಾಲೂಕಿನಲ್ಲಿ ಮೀನು ಸಾಗಾಟದ ಲಾರಿಯೊಂದಕ್ಕೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.…

ನೆಲ್ಯಾಡಿ: ಮನೆಯ ಅಂಗಳದಲ್ಲಿಯೇ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಬೆಳ್ತಂಗಡಿ : ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು…

ಕಾರ್ಕಳಕ್ಕೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಭೇಟಿ: ದೇಶದ ಆರ್ಥಿಕತೆಗೆ ಪ್ರವಾಸೋದ್ಯಮದ ಕೊಡುಗೆ ಅಪಾರ: ಕಾರ್ಕಳದ ವಿವಿಧ ಪ್ರವಾಸಿತಾಣಗಳ ಅಭಿವೃದ್ಧಿಗೆ 116 ಕೋ.ರೂ ಪ್ರಸ್ತಾವನೆಗೆ ಸ್ವದೇಶಿ ದರ್ಶನ್ ಯೋಜನೆಯಡಿ ಅನುದಾನದ ಭರವಸೆ

ಕಾರ್ಕಳ: ದೇಶದ ಆರ್ಥಿಕತೆಯಲ್ಲಿ ಪ್ರವಾಸೋದ್ಯಮದ ಕೊಡುಗೆ ಅಪಾರವಾಗಿದೆ. ಈ ನಿಟ್ಟಿನಲ್ಲಿ ದೇಶದ ಪ್ರಮುಖ ಐತಿಹಾಸಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ಅಭಿವೃದ್ಧಿಪಡಿಸಲಾಗುವುದೆಂದು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು. ಅವರು ಗುರುವಾರ ಬೆಳಗ್ಗೆ ಕಾರ್ಕಳಕ್ಕೆ ಭೇಟಿ ನೀಡಿ ಆನೆಕೆರೆ ಬಸದಿ…

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ 100 ಕ್ಕೂ ಅಧಿಕ ಜನ ಭಾಗಿ ಶಂಕೆ: ಪ್ರಕರಣದ ಕುರಿತು NIA ತನಿಖೆ ಅಗತ್ಯವಿದೆ: ಮಾಜಿ ಸಚಿವ ಸುನಿಲ್ ಕುಮಾರ್ ಒತ್ತಾಯ

ಕಾರ್ಕಳ: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ 100 ಕ್ಕೂ ಅಧಿಕ ಜನರು ಭಾಗಿಯಾಗಿ ಷಡ್ಯಂತ್ರ ನಡೆಸಿರುವ ಶಂಕೆಯಿದ್ದು,ಈ ಹತ್ಯೆಗೆ ಅಂತಾರಾಜ್ಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣದ ಫಂಡಿಂಗ್ ನಡೆದಿದೆ. ಜತೆಗೆ ಮಂಗಳೂರಿನ ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದಾರೆಂಬ ಆರೋಪವಿದೆ…

ದ.ಕ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೊಡವೂರು ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧ ಆಯ್ಕೆ

ಮಂಗಳೂರು: ಅವಿಭಜಿತ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಕನ್ನಡ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಕೊಡವೂರು ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್.ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ನಿರ್ದೇಶಕ ಮಂಡಳಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಗೆ ಮೇ.6ರಂದು ಮಂಗಳವಾರ ಚುನಾವಣೆ…

ಮತಾಂಧರಿಂದ ಹತ್ಯೆಗೀಡಾದ ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಕಾರ್ಕಳ ಬಂಟರ ಸಂಘದ ಸಂಚಾಲಕರಿಂದ 1 ಲಕ್ಷ ಧನಸಹಾಯ

ಕಾರ್ಕಳ: ಮತಾಂಧ ಶಕ್ತಿಗಳಿಂದ ಭೀಕರವಾಗಿ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ಮನೆಗೆ ಕಾರ್ಕಳ ಬಂಟರ ಸಂಘದ ಸಂಚಾಲಕರಾದ ವಿಜಯ ಶೆಟ್ಟಿ ಮೇ.5 ರಂದು ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿ ಹೆತ್ತವರಿಗೆ ಹಾಗೂ ಕುಟುಂಬದವರಿಗೆ ಸಾಂತ್ವನ ಹೇಳಿದರು. ಈ…

ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪತ್ತೆ : ನಾಲ್ಕು ಜಾನುವಾರುಗಳ ರಕ್ಷಣೆ

ಉಪ್ಪಿನಂಗಡಿ : ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬAಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿ, ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದಾರೆ.…