Category: ನಿಧನ

ಕನ್ನಡ ಚಿತ್ರರಂಗದ ಮೇರು ನಟ, ಹಿರಿಯ ನಿರ್ಮಾಪಕ ದ್ವಾರಕೀಶ್ ವಿಧಿವಶ: ದ್ವಾರಕೀಶ್ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್(8 2) ಮಂಗಳವಾರ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ದ್ವಾರಕೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಕಾಡುಹೊಳೆ ಬಂಗಾರ್ ಭಟ್ರು(ವೆಂಕಟರಮಣ ಭಟ್) ನಿಧನ

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದ ಕಾಡುಹೊಳೆಯ ವೇ.ಮೂ. ವೆಂಕಟರಮಣ ಭಟ್ (84)(ಬಂಗಾರ್ ಭಟ್ರು) ಗುರುವಾರ ಮಧ್ಯಾಹ್ನ ಮಣಿಪಾಲದ ಆಸ್ಪತೆಯಲ್ಲಿ ನಿಧನರಾದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಡುಹೊಳೆ, ಅಜೆಕಾರು…

ನಿವೃತ್ತ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ನಿಧನ

ಕಾರ್ಕಳ:ಉದಯವಾಣಿ ಪತ್ರಿಕೆಯ ಮಂಗಳೂರು ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ವಿಶ್ರಾಂತ ಪತ್ರಕರ್ತ ಮನೋಹರ ಪ್ರಸಾದ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಕರ್ವಾಲಿನವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ…

ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ

ಬೆಂಗಳೂರು:ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್,ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಭಾನುವಾರ ಮುಂಜಾನೆ ಹೃದಯಾಘಾತವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ…

ಗರ್ಭಕಂಠ ಕ್ಯಾನ್ಸರ್‌ನಿಂದ ಖ್ಯಾತ ನಟಿ ಪೂನಮ್‌ ಪಾಂಡೆ ನಿಧನ!

ಮುಂಬಯಿ: ಬಾಲಿವುಡ್ ನ ಅತ್ಯಂತ ಖ್ಯಾತ ನಟಿ ಪೂನಂ ಪಾಂಡೆ ಅವರು 32 ನೇ ವಯಸ್ಸಿನಲ್ಲಿ ಗರ್ಭಕಂಠದ ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಕಾನ್ಪುರದಲ್ಲಿ ನಿಧನ: ಪೂನಮ್‌ ಪಾಂಡೆ ಅವರು ತಮ್ಮ ತವರು ಕಾನ್ಪುರದ ಮನೆಯಲ್ಲಿ ನಿಧನರಾಗಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಇತರ ಮಾಹಿತಿಗಳು…

ನಿಧನ: ಅಂಡಾರು ಗಿರೀಶ್ ಕಾಮತ್

ಕಾರ್ಕಳ: ವರಂಗ ಗ್ರಾಮದ ಅಂಡಾರಿನ ಸಮಾಜ ಸೇವಕ ಕಾಂಗ್ರೆಸ್ ಕಾರ್ಯಕರ್ತ ಗಿರೀಶ್ ಕಾಮತ್(51) ಗುರುವಾರ ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.ಜನಾನುರಾಗಿಯಾಗಿದ್ದುಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಕಳೆದ ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು.…

ಕಾಡುಹೊಳೆ ಭಾಗ್ಯೋದಯ ರೈಸ್ ಮಿಲ್ ಉದ್ಯಮಿ,ಪ್ರಗತಿಪರ ಕೃಷಿಕ ಬಾಲಕೃಷ್ಣ ನಾಯಕ್ ಹೃದಯಾಘಾತದಿಂದ ನಿಧನ

ಅಜೆಕಾರು:ಮರ್ಣೆ ಗ್ರಾಮದ ಕಾಡುಹೊಳೆ ಭಾಗ್ಯೋದಯ ರೈಸ್ ಮಿಲ್ಲಿನ ಮಾಲೀಕರಾಗಿದ್ದ ,ಉದ್ಯಮಿ ಪ್ರಗತಿಪರ ಕೃಷಿಕರಾದ ಬಾಲಕೃಷ್ಣ ನಾಯಕ್ (67) ಮಂಗಳವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಕಾಡುಹೊಳೆಯ ತಮ್ಮ ನಿವಾಸದಲ್ಲಿ ಬೆಳಗ್ಗೆ 7.30 ಸುಮಾರಿಗೆ ಏಕಾಎಕಿ ಅಸ್ವಸ್ಥರಾದ ಅವರು ತೀವೃ ಹೃದಯಾಘಾತದಿಂದ ಕುಸಿದುಬಿದ್ದು ನಿಧನರಾಗಿದ್ದಾರೆ.…

ಅಜೆಕಾರು: ಎದೆನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವು

ಕಾರ್ಕಳ: ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿದ್ದ ವಸಂತ (53) ಎಂಬವರು ಎದೆನೋವು ಉಲ್ಬಣಿಸಿ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 6 ಗಂಟೆಗೆ ಸುಮಾರಿಗೆ ಮನೆಯಲ್ಲಿರುವ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು.ಕೂಡಲೇ ಸ್ಥಳೀಯರಾದ…

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ: ಕಳಚಿತು ಕನ್ನಡ ಚಿತ್ರರಂಗದ ಹಿರಿಯ ಕೊಂಡಿ

ಬೆಂಗಳೂರು: ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಲೀಲಾವತಿ ಆರೋಗ್ಯ ಕ್ಷೀಣಿಸುತ್ತಿದ್ದಂತೆ ಚಿತ್ರರಂಗದ ಗಣ್ಯರು, ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಆರೋಗ್ಯ ಮತ್ತಷ್ಟು…

ಉಡುಪಿ: ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯೆಗೆ ಹೃದಯಾಘಾತ: ನಿವೃತ್ತ ವೈದ್ಯೆ ಡಾ.ಶಶಿಕಲಾ ನಿಧನ

ಉಡುಪಿ: ವೈದ್ಯೆಯೊಬ್ಬರು ರೋಗಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲೇ ತೀವೃ ಎದೆ ನೋವಿನಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಮೆಡಿಸಿನ್ ವಿಭಾಗದ ವೈದ್ಯರಾಗಿರುವ ಡಾ. ಶಶಿಕಲಾ ಅವರು ರೋಗಿಗೆ ಚಿಕಿತ್ಸೆ ನೀಡುತ್ತಿರುವಾಗಲೇ ತೀವೃ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ವೈದ್ಯೆ. ಡಾ.ಶಶಿಕಲಾ…