Category: ಸ್ಥಳೀಯ ಸುದ್ದಿಗಳು

ಪೆರ್ಡೂರು: ಕಾಲೇಜು ವಿದ್ಯಾರ್ಥಿನಿ ಮೃತ್ಯು

ಉಡುಪಿ :ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು.ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅವರು ಹಿರಿಯಡಕ ಸರಕಾರಿ…

ಅಜೆಕಾರು: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಪತ್ನಿ ಪ್ರತಿಮಾ ಜಾಮೀನು ಅರ್ಜಿ ವಿಚಾರಣೆ

ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಸಂಬಂಧ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ವಿಚಾರಣೆ ಮಂಗಳವಾರ ನಡೆದಿದ್ದು, ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಸಂಚಾರಿ ಪೀಠದ ನ್ಯಾಯಾಧೀಶರು ಮಾ. 18ಕ್ಕೆ ತೀರ್ಪು ನೀಡಲಿದ್ದಾರೆ. ಬಾಲಕೃಷ್ಣ…

ಕಾರ್ಕಳ: ಮದ್ಯವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಪಾನದ ಚಟ ಹೊಂದಿದ್ದ 18 ವರ್ಷ ಹರೆಯದ ಯುವಕನೋರ್ವ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾರ್ಕಳದ ಬಂಗ್ಲೆಗುಡ್ಡೆಯ ಹಿಮ್ಮುಂಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದ್ದು, ಹಿಮ್ಮುಂಜೆ ನಿವಾಸಿ ಕುಮಾರ ಎಂಬವರ…

ಅಕ್ರಮ ಮರಳು ಸಾಗಾಟ : 2 ಟಿಪ್ಪರ್‌ ವಶಕ್ಕೆ : ಚಾಲಕ ಎಸ್ಕೇಪ್

ಕಾರ್ಕಳ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಚಾಲಕರು ಪರಾರಿಯಾಗಿದ್ದಾರೆ. ಕಾರ್ಕಳ ನಗರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್. ಆರ್. ಅವರು ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ…

ಕಾರ್ಕಳ: ಕುಖ್ಯಾತ ದನಕಳ್ಳ ಮೊಹಮ್ಮದ್‌ ಯೂನಸ್‌ ಅರೆಸ್ಟ್ 

ಕಾರ್ಕಳ: ವಿವಿಧ ಠಾಣೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್‌ ದನಕಳ್ಳನನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಲ್ಲೂರು ಗ್ರಾಮದ ಬೋರ್ಕಟ್ಟೆ ದೊಡ್ಡಕಜೆಯ ಮೊಹಮ್ಮದ್‌ ಯೂನಸ್‌ (30) ಬಂಧಿತ. ಈತನ ಮೇಲೆ ದನಕಳ್ಳತನಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ, ಅಜೆಕಾರು, ಹೆಬ್ರಿ, ಶಿರ್ವ, ಮೂಡುಬಿದಿರೆ…

ಮಂಗಳೂರು: ರಾಜ್ಯ ರಾಷ್ಟ್ರಮಟ್ಟದ ವಿಜೇತ ಕ್ರೀಡಾಪಟುಗಳ ಅಭಿನಂದನೆ ಹಾಗೂ ಕಾರ್ಯಾಗಾರ- ದೈಹಿಕ ಶಿಕ್ಷಣ ಶಿಕ್ಷಕರ ಶ್ರಮ ಅಭಿನಂದನಾರ್ಹ- ಭಾಸ್ಕರ್ ಕೆ.

ಮಂಗಳೂರು: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ದಕ್ಷಿಣ ವಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಇವರ ಆಶ್ರಯದಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಆಶ್ರಯದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ…

ರಾಜ್ಯದ ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ: ಅರಣ್ಯ ಮತ್ತು ಪರಿಸರ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ…

ಕುಕ್ಕುಜೆ: ರಿಕ್ಷಾ ಚಾಲಕ ನಾಪತ್ತೆ

ಅಜೆಕಾರು: ಕಾರ್ಕಳ ತಾಲೂಕು ಕುಕ್ಕುಜೆ ಗ್ರಾಮದ ನಿವಾಸಿ ರಿಕ್ಷಾ ಚಾಲಕ ವ್ಯಕ್ತಿಯೊಬ್ಬರು ಮಾ.7 ರಿಂದ ನಾಪತ್ತೆಯಾಗಿದ್ದಾರೆ. ಕುಕ್ಕುಜೆಯ ಸೂರ್ಯ (52ವ) ನಾಪತ್ತೆಯಾದವರು. ಸೂರ್ಯ ಅವರು ಪೆರ್ಡೂರು ಮೇಲ್‌ಪೇಟೆಯಲ್ಲಿ ರಿಕ್ಷಾ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದು, ಮಾ.7 ರಂದು ಬೆಳಿಗ್ಗೆ 11 ಗಂಟೆಗೆ ಪೆರ್ಡೂರಿಗೆ…

ಅಜೆಕಾರು: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಲಾರಿ ಸಹಿತ ಪೊಲೀಸ್ ವಶಕ್ಕೆ-ಪ್ರಕರಣ ದಾಖಲು

ಅಜೆಕಾರು: ಕಾರ್ಕಳ ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕುಜೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಹಾಗೂ ಸಾಗಿಸುತ್ತಿದ್ದ ಮರಳನ್ನು ಲಾರಿ ಸಹಿತ ಪೊಲೀಸರು ವಶಪಡಿಸಿಕೊಂಡಿದ್ದು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ರೌಂಡ್ಸ್ ನಲ್ಲಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಕುಕ್ಕುಜೆ ಗ್ರಾಮದ…

ಕಾರ್ಕಳ: ಸ್ಕೂಟರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಉಜಿರೆಯಲ್ಲಿ ಪತ್ತೆ

ಕಾರ್ಕಳ: ಕಾರ್ಕಳ ತಾಲೂಕಿನ ನೀರೆಯಲ್ಲಿ ಸ್ಕೂಟರ್‌ಗೆ ಅಪಘಾತವೆಸಗಿ ಪರಾರಿಯಾಗಿದ್ದ ಕಾರನ್ನು ಕಾರ್ಕಳ ನಗರ ಪೊಲೀಸರು ಉಜಿರೆಯಲ್ಲಿ ಪತ್ತೆ ಹಚ್ಚಿದ್ದಾರೆ. ನೀರೆ ಗ್ರಾಮದ ಜಡ್ಡಿನಂಗಡಿ ಬಳಿ ಕಳೆದ ಫೆ.26ರಂದು ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ರಾಜೇಶ್ ಶೆಟ್ಟಿ (35) ಗಂಭೀರವಾಗಿ…