Category: ಸ್ಥಳೀಯ ಸುದ್ದಿಗಳು

ಮಂಗಳೂರು ‘MRPL’ ತೈಲ ಶುದ್ಧಿಕರಣ ಘಟಕದಲ್ಲಿ ವಿಷಾನಿಲ ಸೋರಿಕೆ: ಘೋರ ದುರಂತದಲ್ಲಿ ಇಬ್ಬರು ನೌಕರರು ಬಲಿ!

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ತಣ್ಣೀರುಬಾವಿ MRPL ತೈಲ ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ನೌಕರರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿದ್ದಾರೆ. ಶನಿವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು,ಉತ್ತರ ಭಾರತ ಮೂಲದ ದೀಪಚಂದ್ರ ಭಾರ್ತೀಯಾ, ಬಿಜಿಲ್ ಪ್ರಸಾದ್ ಮೃತಪಟ್ಟ ಸಿಬ್ಬಂದಿಗಳು.…

ಕುಕ್ಕುಂದೂರು ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ಪೊಲೀಸರ ದಾಳಿ: ರಾಜಧನ ವಂಚಿಸಿ ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿ ವಶಪಡಿಸಿಕೊಂಡು ಮಾಲೀಕನ ವಿರುದ್ಧ ಕೇಸ್ ದಾಖಲು

ಕಾರ್ಕಳ: ಸರ್ಕಾರಕ್ಕೆ ರಾಜಧನ ಪಾವತಿಸದೇ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಸರ್ವೇ ನಂಬ್ರ 557/2 ರಲ್ಲಿನ ಪಾದೆಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಕುರಿತು ಮಾಹಿತಿ ಪಡೆದುಕೊಂಡ ಕಾರ್ಕಳ ನಗರ ಠಾಣೆಯ ಎಸ್ಐ ಶಿವಕುಮಾರ್ ಎಸ್ಆರ್, ಸಿಬ್ಬಂದಿಗಳಾದ ಸದಾಶಿವ ಶೆಟ್ಟಿ, ಸಂತೋಷ,…

ಕಾರ್ಕಳ: ಜಲಜೀವನ್‌ ಮಿಷನ್‌, ವಾರಾಹಿ ಯೋಜನೆ ಪ್ರಗತಿ ಪರಿಶೀಲನಾ ಸಭೆ : ಸೆಪ್ಟೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕ ಸುನಿಲ್ ಕುಮಾರ್ ಸೂಚನೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಈಗಾಗಲೇ ಚಾಲ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಜಲಜೀವನ್‌ ಮಿಷನ್‌ ಯೋಜನೆ ಹಾಗೂ ವಾರಾಹಿ ಯೋಜನೆ ಅನುಷ್ಠಾನದ ಕುರಿತು ಸಂಬಂದಪಟ್ಟ ಇಲಾಖಾ…

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಹಣ ದುರುಪಯೋಗ ಪ್ರಕರಣಕ್ಕೆ ಮಹತ್ವದ ತಿರುವು: ಅಮಾನತಾದ ಸಿಬ್ಬಂದಿಯಿಂದ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಅಡಳಿತ ಮಂಡಳಿ ವಿರುದ್ಧವೇ ದಲಿತ ದೌರ್ಜನ್ಯ ದೂರು!

ಹೆಬ್ರಿ: ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಹಣ ದುರುಪಯೋಗ ಪ್ರಕರಣದಲ್ಲಿ ಅಮಾನತುಗೊಂಡ ಸಿಬ್ಬಂದಿ ಶಂಕರ ನಾಯ್ಕ್ ಅವರು ಸಂಘದ ಕಾರ್ಯನಿರ್ವಹಣಾಧಿಕಾರಿ,ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಮಾನಸಿಕ ಕಿರುಕುಳ ಹಾಗೂ ದೌರ್ಜನ್ಯ ನಡೆದಿದೆ ಎಂದು ದೂರು ನೀಡಿದ್ದಾರೆ. ಈ…

ಹೆಬ್ರಿ ಅಮೃತ ಭಾರತಿ ವಿದ್ಯಾಲಯದಲ್ಲಿ ಗುರುಪೂರ್ಣಿಮೆ ಆಚರಣೆ 

ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಕಲ್ಪನಾ ಭಾಸ್ಕರ್ , ರಾಷ್ಟ್ರಸೇವಿಕಾ ಸಮಿತಿಯ ಉಡುಪಿ ಜಿಲ್ಲಾ ಸೇವಾ ಪ್ರಮುಖ್ ಇವರು ಮಾತನಾಡಿ, ನಮ್ಮ ಪೂರ್ವಜರು ಪ್ರಕೃತಿಯ ಆರಾಧಕರು .…

ಬೆಳ್ಮಣ್: ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ಮತ್ತು ಸಹಾಯ ಧನ ಹಸ್ತಾಂತರ ಕಾರ್ಯಕ್ರಮ: ಇಂದು ವಿದ್ಯಾರ್ಥಿವೇತನ ಪಡೆಯುವವರು ಮುಂದೆ ಕೊಡುವಂತಾಗಬೇಕು – ಐಕಳ ಹರೀಶ್ ಶೆಟ್ಟಿ

ಕಾರ್ಕಳ: ಇಂದು ವಿವಿಧ ಸಂಸ್ಥೆಗಳಿAದ ವಿದ್ಯಾರ್ಥಿವೇತನ ಪಡೆಯುವ ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಾಧನೆ ಮಾಡಿ ಮುಂದೆ ಅದೇ ರೀತಿಯ ವಿದ್ಯಾರ್ಥಿವೇತನಗಳನ್ನು ಕೊಡುವಂತವರಾಗಬೇಕು ಎಂದು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಬೆಳ್ಮಣ್ ಜ್ಯೂನಿಯರ್ ಕಾಲೇಜಿನ…

ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ : ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ: ಬಿಪಿನ್‌ಚಂದ್ರ ಪಾಲ್ ನಕ್ರೆ

ಕಾರ್ಕಳ: ಪ್ರಜಾಪ್ರಭುತ್ವ ಉಳಿಯುವಲ್ಲಿ ಪತ್ರಿಕಾ ಮಾಧ್ಯಮದ ಕೊಡುಗೆ ಅನನ್ಯ, ಪತ್ರಿಕೆಗೆ ಹಾಗೂ ಪತ್ರಕರ್ತರಿಗೆ ಪತ್ರಿಕಾ ಧರ್ಮವೇ ಧರ್ಮವಾಗಬೇಕು. ಆಧುನಿಕ ಕಾಲದಲ್ಲಿ ಪತ್ರಕರ್ತರ ಕಾರ್ಯ ಅನೇಕ ಸವಾಲುಗಳಿಂದ ಕೂಡಿದೆ. ಆದರೆ ಅವುಗಳಿಗೆ ಹೆದರದೆ ನೇರ ಹಾಗೂ ದಿಟ್ಟತನದಿಂದ ವರದಿಗಾರಿಕೆ ಮಾಡಬೇಕು. ಪತ್ರಕರ್ತರು ಎಲ್ಲರವರಾಗಿರಬೇಕು…

ಕಣಜಾರು ಮಾತಾಮರಿಯ ಮಹಾಸಂಘದಿಂದ “ಲಿಂಗ ಸಮನತಾ” ತರಬೇತಿ ಕಾರ್ಯಕ್ರಮ

ಕಾರ್ಕಳ: ಮಾತಾಮರಿಯ ಮಹಾಸಂಘ/ ಸ್ತ್ರೀ ಸಂಘಟನೆ, ಕಣಜಾರು ಇವರ ಆಶ್ರಯದಲ್ಲಿ “ಲಿಂಗ ಸಮನತಾ” ತರಬೇತಿ ಕಾರ್ಯಕ್ರಮ ಜುಲೈ 8 ರಂದು ಕಣಜಾರು ಸೌಹಾರ್ದಭವನದಲ್ಲಿ ಜರುಗಿತು. ಸಂಪಲ್ಮೂಲ ವ್ಯಕ್ತಿಯಾಗಿ ಉಡುಪಿ ಸಂಪದ ಸಂಸ್ಥೆಯ ಸಂಯೊಜಕರಾದ ಸ್ಟ್ಯಾನ್ಲಿ ಪೆರ್ನಾಂಡಿಸ್ ಭಾಗವಹಿಸಿದ್ದರು. ಕಣಜಾರು ಲೂರ್ಡ್ಸ್ ಮಾತೆ…

ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ಐದು ದಿನಗಳ ಬೋಧಕ ಅಭಿವೃದ್ಧಿ ಕಾರ್ಯಕ್ರಮ

ಕಾರ್ಕಳ: ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಅಂಗಸAಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜುಲೈ 7 ರಿಂದ 11 ರವರೆಗೆ “ಲರ್ನ್ – ಕಲಿಕೆಯ ಶ್ರೇಷ್ಠತೆ ಮತ್ತು ಪೋಷಣೆಯನ್ನು ಮರುಶೋಧಿಸುವುದು” ಎಂಬ ಶೀರ್ಷಿಕೆಯ ಐದು ದಿನಗಳ ಬೋಧಕ…

ಮುದ್ರಾಡಿ ಧರ್ಮಯೋಗಿ ಮೋಹನ್‌ ಸ್ವಾಮೀಜಿಯವರ 4ನೇ ಆರಾಧನಾ ಮಹೋತ್ಸವ : ಅವಧೂತ ವಿನಯ್‌ ಗುರೂಜಿಗೆ ಧರ್ಮಯೋಗಿ ಸಮ್ಮಾನ್‌ ಪ್ರದಾನ: ಮುದ್ರಾಡಿ ಶ್ರೀಕ್ಷೇತ್ರಕ್ಕೆ ಅದ್ಭುತ ಶಕ್ತಿಯಿದೆ : ವಿನಯ ಗುರೂಜಿ

ಹೆಬ್ರಿ: ನಮ್ಮಲ್ಲಿನ ವಿವಿಧ ಜಾತಿಗಳ ಆಚರಣೆಗಳು ಬೇರೆಯಾದರೂ ಉದ್ದೇಶ ಒಂದೇ ಜಗತ್ತಿಗೆ ಒಳಿತು ಮಾಡುವ ಬೆಳಕು ನೀಡುವುದು, ಮುದ್ರಾಡಿ ಶ್ರೀಕ್ಷೇತ್ರವು ಅಂತಹ ಮಹತ್ವದ ಕಾರ್ಯವನ್ನು ನಡೆಸುತ್ತಿದೆ, ಮುದ್ರಾಡಿ ಕ್ಷೇತ್ರಕ್ಕೆ ಅದ್ಭುತ ಶಕ್ತಿಯಿದೆ, ಧರ್ಮ ಯೋಗಿ ಮತ್ತು ಕರ್ಮಯೋಗಿಯಾಗಿದ್ದ ಮೋಹನ ಸ್ವಾಮೀಜಿಯಿಂದ ಕ್ಷೇತ್ರವು…