ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ
ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ “ಕ್ರಿಯೇಟಿವ್ ಗುರುದೇವೋಭವ” ಕಾರ್ಯಕ್ರಮವನ್ನು ಶಿಕ್ಷಕರ ದಿನಾಚರಣೆಯಂದು ಹಮ್ಮಿಕೊಳ್ಳಲಾಯಿತು. ಜ್ಞಾನಜ್ಯೋತಿಯನ್ನು ಬೆಳಗಿ, ಡಾ.ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು. ಗುರುವಂದನೆಯನ್ನು ಸ್ವೀಕರಿಸಿದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ…
