Category: ಸ್ಥಳೀಯ ಸುದ್ದಿಗಳು

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಅನುದಾನಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸುನಿಲ್ ಕುಮಾರ್ ಮನವಿ

ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಂಗಳವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ…

ಭಾರೀ ಗಾಳಿಮಳೆಗೆ ಮನೆಗೆ ಮರ ಉರುಳಿ ಅಪಾರ ಹಾನಿ

ಕಾರ್ಕಳ:ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಪೇರಡ್ಕ ನಿವಾಸಿ ಲೋಕೇಶ್ ನಾಯ್ಕ ಎಂಬವರ ಮನೆಗೆ ಮರ ಉರುಳಿ ಬಿದ್ದು ಮನೆಯ ಮೇಲ್ಛಾವಣಿ ಹಾಗೂ ಸಿಮೆಂಟ್ ಶೀಟ್ ಹಾನಿಯಾಗಿದ್ದು ಸುಮಾರು 40 ಸಾವಿರ ನಷ್ಟ ಸಂಭವಿಸಿದೆ.

ವರಂಗ: ಕಾರು-ಬೈಕ್ ಡಿಕ್ಕಿ: ಕಾರು ಚಾಲಕ ಸೇರಿದಂತೆ ಸವಾರರಿಬ್ಬರು ಗಂಭೀರ

ಹೆಬ್ರಿ: ವರಂಗ ಗ್ರಾಮದ ಕೆಲಕಿಲ ಸೇತುವೆಯ ಬಳಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ಕೊಪ್ಪ ತಾಲೂಕಿನ ಎನ್’ಆರ್…

ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆ ಆರೋಪ:  ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಕೃಷ್ಣ ನಾಯಕ್ ವಿರುದ್ಧ ಎಫ್ಐಆರ್ ದಾಖಲು

ಕಾರ್ಕಳ: ಕಳೆದ ಒಂದು ವರ್ಷದಿಂದ ವಿವಾದಕ್ಕೆ ಕಾರಣವಾಗಿದ್ದ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕಿನಲ್ಲಿ ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಲಾಗಿದೆ ಆರೋಪಿಸಿ ಈ ಪ್ರಕರಣದ ಕುರಿತು ತನಿಖೆ ಆಗಬೇಕು ಎಂದು ಕಾಂಗ್ರೆಸ್ ಹಾಗೂ ಪರಶುರಾಮ…

ಕಾರ್ಕಳದ ವ್ಯಕ್ತಿಗೆ ಷೇರು ಮಾರುಕಟ್ಟೆಯ ಹೆಸರಿನಲ್ಲಿ ವಂಚನೆ: ನಕಲಿ ಖಾತೆಗೆ ಬರೋಬ್ಬರಿ 10 ಲಕ್ಷಕ್ಕೂ ಮಿಕ್ಕಿ ಹಣ ವರ್ಗಾಯಿಸಿಕೊಂಡ ಖದೀಮರು

ಕಾರ್ಕಳ: ವಾಟ್ಸಾಪ್ ಗ್ರೂಪ್‌ ನಲ್ಲಿ ಬಂದ ಸಂದೇಶವನ್ನು ನಂಬಿ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕಾರ್ಕಳದ ವ್ಯಕ್ತಿಯೊಬ್ಬರೂ ಲಕ್ಷಾಂತರ ರೂ ಹಣ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ರಮೇಶ್ (46) ಎಂಬವರು ಹಣ ಕಳೆದುಕೊಂಡವರು. ಅವರಿಗೆ ಕಳೆದ 15 ದಿನದ ಹಿಂದೆ…

ರಾಜ್ಯ ಸರ್ಕಾರದ ವಿರುದ್ಧ ಕಾರ್ಕಳ ಬಿಜೆಪಿ ವಿನೂತನ ಪ್ರತಿಭಟನೆ: ತಳ್ಳು ಗಾಡಿ ಹಾಗೂ ಲಾರಿ ಎಳೆದು ರಸ್ತೆ ತಡೆದು ಪ್ರತಿಭಟನೆ : ರಾಜ್ಯ ಸರ್ಕಾರದ ಭ್ರಷ್ಟಾಚಾರ, ತೈಲ ಬೆಲೆ ಹೆಚ್ಚಳದಿಂದ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರ ಬದುಕು ದುಸ್ತರವಾಗಿದೆ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಆರೋಪ

ಕಾರ್ಕಳ: ರಾಜ್ಯದಲ್ಲಿ ಪ್ರಟೋಲ್ ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ರಾಜ್ಯದ ಜನತೆಗೆ ಹೊಡೆತ ನೀಡಿದೆ. ತೈಲ ಬೆಲೆ ಹೆಚ್ಚಳದಿಂದ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ.ರಾಜ್ಯ ಸರ್ಕಾರದ ಸುಳ್ಳು ಗ್ಯಾರಂಟಿ ಯೋಜನೆಗಳಿಂದ ಗ್ರಾಮ ಪಂಚಾಯತ್ ಗಳಿಗೆ ನಯಾಪೈಸೆ ಅನುದಾನವಿಲ್ಲದೇ ಅಭಿವೃದ್ಧಿ…

ಉಡುಪಿ ಜಿಲ್ಲೆಗೆ ಸರಕಾರಿ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಬಿವಿಪಿ ಮನವಿ

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು CET ಮತ್ತು NEET ಪರೀಕ್ಷೆಯನ್ನು ಬರೆದು, ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣ ಪಡೆಯುವ ಮಹದಾಸೆ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ತಾಂತ್ರಿಕ ಹಾಗೂ…

ಜೂ 21 ರಂದು ತೈಲ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕಾರ್ಕಳ ಬಿಜೆಪಿ ಪ್ರತಿಭಟನೆ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಇದುವರೆಗೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ವಿಫಲವಾಗಿದೆ.ಜನರಿಗೆ ಉಚಿತ ಗ್ಯಾರಂಟಿಯ ಆಮಿಷ ತೋರಿಸಿ ಅಧಿಕಾರಕ್ಕೆ ಬಂದ ಸರಕಾರ ಈಗ ಉಚಿತ ಯೋಜನೆಗಳಿಗಾಗಿ ಹಣ ಹೊಂದಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈಗಾಗಲೇ…

ಕಾರ್ಕಳ ತಾಲೂಕಿನ 50 ಕನ್ನಡ ಮಾಧ್ಯಮ ಶಾಲೆಗಳ 2500 ಮಕ್ಕಳಿಗೆ ಕೊಡೆ ಹಾಗೂ ನೋಟ್ ಪುಸ್ತಕ ವಿತರಣೆ: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ದಾನಿಗಳ ಪಾತ್ರ ಮಹತ್ತರ: ಶಾಸಕ‌ ಸುನಿಲ್ ಕುಮಾರ್

ಕಾರ್ಕಳ:ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಗುಣಮಟ್ಟ ಶಿಕ್ಷಣ ನೀಡುವಲ್ಲಿ ಬೇಕಾದ ವ್ಯವಸ್ಥೆ ಕಲ್ಪಿಸುವಲ್ಲಿ ಎಲ್ಲಾ ಸರ್ಕಾರಗಳು ಬದ್ದವಾಗಿವೆ. ಸರ್ಕಾರಿ ಶಾಲೆಗಳು ಎನ್ನುವ ಕೀಳರಿಮೆ ಬಿಟ್ಟು ಸರ್ಕಾರಿ ಶಾಲೆಯಲ್ಲಿ ಕಲಿತು ಸಾಧನೆಗೈದವರು ಸಾಕಷ್ಟು ಜನ ಇದ್ದಾರೆ.ಇಂತಹ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಬಡ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಅವರನ್ನು ಬಂಧಿಸಿದ್ದ ಇನ್ಸ್‌ಪೆಕ್ಟರ್ ದಿಢೀರ್ ವರ್ಗಾವಣೆ!

ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಅವರನ್ನು ಮುಲಾಜಿಲ್ಲದೇ ಬಂಧಿಸಿದ್ದ ಕಾಮಾಕ್ಷಿಪಾಳ್ಯದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ನಟಿ ಪವಿತ್ರಾಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಾರೆಂಬ ಕೋಪಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಬಿಸಾಡಿದ ಪ್ರಕರಣಕ್ಕೆ…