Category: ಸ್ಥಳೀಯ ಸುದ್ದಿಗಳು

ಕಾರ್ಕಳ: ಭಾರಿ ಮಳೆಗೆ ಭೂಕುಸಿತ, ಮನೆಗೆ ಮರ ಬಿದ್ದು ಹಾನಿ

ಕಾರ್ಕಳ: ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಮಾಳದಲ್ಲಿ ಭೂಕುಸಿತ ಉಂಟಾಗಿದೆ. ಮಾಳದಲ್ಲಿ ಹಾದುಹೋಗುವ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮಣ್ಣು ತೆರವುಗೊಳಿಸಲು ಕ್ರಮ ವಹಿಸಲಾಗಿದೆ. ಪಳ್ಳಿ ಗ್ರಾಮದಲ್ಲೂ ಮಳೆಹಾನಿ ಉಂಟಾಗಿದ್ದು, ಕಲ್ಲೆಚ್ಚಿ ಎಂಬಲ್ಲಿ ಜಯಂತಿ ಅವರ ವಾಸ್ತವ್ಯದ ಮನೆಗೆ ಮರ…

ಕೇಂದ್ರ ಸರ್ಕಾರ ಜಿ.ಎಸ್.ಟಿ ನೋಟೀಸ್ ನೀಡಿದ್ದರೆ ರಾಜ್ಯ ಸರ್ಕಾರ ಹಿಂಪಡೆಯಲು ಸಾಧ್ಯವೇ: ಕಾಂಗ್ರೆಸ್ ನಾಯಕರಿಗೆ ಸಾಮಾನ್ಯ ಜ್ಞಾನವಿಲ್ಲ: ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ

ಕಾರ್ಕಳ,ಜು.24: ಸಣ್ಣಪುಟ್ಟ ವ್ಯಾಪಾರಿಗಳಿಗೆ ಟೀ ಅಂಗಡಿಗಳಿಗೆ, ಕಾಂಡಿಮೆಂಡ್ಸ್, ಬೇಕರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ. ಕೇಂದ್ರ ಸರ್ಕಾರ ನೋಟೀಸ್ ನೀಡಿದ್ದರೆ ರಾಜ್ಯ ಸರ್ಕಾರ ಹಿಂಪಡೆಯಲು ಸಾಧ್ಯವೇ ಎನ್ನುವ ಕನಿಷ್ಠ ಜ್ಞಾನ…

ಕಾರ್ಕಳದ ಮುಂಡ್ಲಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ನಿರ್ಬಂಧ ವಿಧಿಸಿದ್ದ ಪೊಲೀಸರಿಗೆ ತೀವ್ರ ಮುಖಭಂಗ: ಆಯೋಜಕರ ವಿರುದ್ಧ ದಾಖಲಾಗಿದ್ದ ದೂರಿಗೆ ಹೈಕೋರ್ಟ್‌ ತಡೆಯಾಜ್ಞೆ

ಕಾರ್ಕಳ : ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜಾರ್ಕಳ ಮುಂಡ್ಲಿಯಲ್ಲಿ ಕಳೆದ ಜ. 14ರಂದು ಶ್ರೀ ಈಶ್ವರ ಯಕ್ಷಗಾನ ಸಂಘದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನ‌ ಪ್ರದರ್ಶನಕ್ಕೆ ತಡೆಯೊಡ್ಡಿ ಆಯೋಜಕರು ಹಾಗೂ ಇತರರ ವಿರುದ್ಧ ಅಜೆಕಾರು ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ…

ನಾಳೆ (ಜು.24ರಂದು) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಹಾಗೂ ಪಿಯು,ITI ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜು. 23: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು,ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು, ಪದವಿಪೂರ್ವ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸ್ವರೂಪ.…

ಕಾರ್ಕಳ: ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಕೊಳೆರೋಗ: ನಿಯಂತ್ರಣ ಕ್ರಮ ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆ ಸೂಚನೆ

ಕಾರ್ಕಳ: ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಕಾರ್ಕಳ ತಾಲೂಕಿನಾದ್ಯಂತ ಅಡಿಕೆ ತೋಟಗಳಲ್ಲಿ ಅಡಿಕೆ ಕೊಳೆ ರೋಗ ಹೆಚ್ಚಾಗಿ ಕಂಡುಬರುತ್ತಿದೆ.ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಮಳೆ ಹಾಗೂ ಬಿಸಿಲು ಮಿಶ್ರಿತ ವಾತಾವರಣ, ಮಣ್ಣಿನಲ್ಲಿ ಹೆಚ್ಚಿದ ತೇವಾಂಶದಿAದಾಗಿ ರೋಗ ಇನ್ನಷ್ಟು ಹೆಚ್ಚಾಗುತ್ತದೆ. ಆದ್ದರಿಂದ…

ಕಾರ್ಕಳ ಕಾಂಗ್ರೆಸ್ ನಿಂದ ಕೀಳು ಮಟ್ಟದ ರಾಜಕೀಯ: ಬೋಳ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ

ಕಾರ್ಕಳ: ರಾಜ್ಯ ಸರಕಾರ ನೀಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೋಳ ಗ್ರಾಮದಲ್ಲಿ ಅನುಷ್ಟಾನಗೊಳಿಸಲು ಅವಕಾಶ ನೀಡುವುದಿಲ್ಲವೆಂದು ಗ್ರಾಮ ಸಭೆಯಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಗ್ರಾಮ ಪಂಚಾಯತ್ ಸದಸ್ಯರ ವಿರುದ್ದ ಕಾರ್ಕಳ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೋಳ ಗ್ರಾಮ ಪಂಚಾಯತ್ ಮುಂಬಾಗ…

ಹೆಬ್ರಿ ಸಂತೆಕಟ್ಟೆ ಹೊಟೇಲ್’ನಲ್ಲಿ ಹೊಡೆದಾಟ,ಜಾತಿ ನಿಂದನೆ ಪ್ರಕರಣ: ನಾಲ್ವರು ಆರೋಪಿಗಳ‌ ಬಂಧನ

ಹೆಬ್ರಿ, ಜು.23: ಹೆಬ್ರಿಯ ಕಳ್ತೂರು ಸಂತೆಕಟ್ಟೆಯ ಸಿರಿ ಮುಡಿ ಹೊಟೇಲಿನಲ್ಲಿ ಜು.20ರಂದು ನಡೆದ ವ್ಯಕ್ತಿಯೊಬ್ಬನ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ರೌಡಿ ಶೀಟರ್ ಸೇರಿದಂತೆ ಒಟ್ಟು ನಾಲ್ಕು ಮಂದಿ ಆರೋಪಿಗಳನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್‌ಗಳಾದ ಶ್ರೀಕಾಂತ್ ಕುಲಾಲ್…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ: ಪತ್ರಕರ್ತರು ಭಾಷೆ.ಪಂಗಡ,ಧರ್ಮಾತೀತವಾಗಿ, ರಾಜಕೀಯ ಪಕ್ಷಗಳ ಸಿದ್ದಾಂತಗಳಿಗೆ ಅಂಟದೇ ನಿಷ್ಠುರವಾಗಿ ಕರ್ತವ್ಯ ನಿರ್ವಹಿಸಬೇಕು: ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಮುಖ್ಯಸ್ಥ ಅಶ್ವಥ್ ಎಸ್.ಎಲ್

ಕಾರ್ಕಳ:ಸಮಾಜ ಹಾಗೂ ಆಡಳಿತ ವ್ಯವಸ್ಥೆಯನ್ನು ಎಚ್ಚರಿಸುವ ಹೊಣೆಗಾರಿಕೆ ಮಾಧ್ಯಮದ ಮೇಲಿದೆ. ಪತ್ರಕರ್ತರು ಭಾಷೆ.ಪಂಗಡ,ಧರ್ಮಾತೀತವಾಗಿ, ರಾಜಕೀಯ ಪಕ್ಷಗಳ ಸಿದ್ದಾಂತಗಳಿಗೆ ಅಂಟದೇ ನಿಷ್ಠುರವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಮುಖ್ಯಸ್ಥ ಅಶ್ವಥ್ ಎಸ್.ಎಲ್ ಹೇಳಿದರು. ಅವರು ಕಾರ್ಕಳ ತಾಲೂಕು ಪತ್ರಕರ್ತರ ಸಂಘ…

ಕಾರ್ಕಳ: ಮರದ ತುಂಡು ಮೈಮೇಲೆ ಬಿದ್ದು ಅಸ್ವಸ್ಥಗೊಂಡಿದ್ದ ವ್ಯಕ್ತಿ ಮೃತ್ಯು

ಕಾರ್ಕಳ: ಕೆಲಸ ಮಾಡುತ್ತಿದ್ದ ವೇಳೆ ಮೈಮೇಲೆ ಮರದ ತುಂಡು ಬಿದ್ದು ಅಸ್ವಸ್ಥಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಾರ್ಕಳದ ಕೆದಿಂಜೆಯಲ್ಲಿ ನಡೆದಿದೆ. ಕೆದಿಂಜೆಯ ಗಣೇಶ್ ಅವರು ವಾಸು ಎಂಬವರ ಬಳಿ ಟಿಂಬರ್ ಕೆಲಸ ಮಾಡುತ್ತಿದ್ದು, ಜುಲೈ 19 ರಂದು ಕೌಡೂರಿನಲ್ಲಿ ಕೆಲಸ ಮಾಡುತ್ತಿದ್ದ…

ನೀರೆ: ಭಿಕ್ಷಾಟನೆ ಮಾಡುತ್ತಿದ್ದ ವ್ಯಕ್ತಿ ಮೃತ್ಯು

ಕಾರ್ಕಳ: ಕಳೆದ 30 ವರ್ಷಗಳ ಹಿಂದೆ ಮನೆಯನ್ನು ತೊರೆದು ಕಾರ್ಕಳ ತಾಲೂಕಿನ ನೀರೆ ಪರಿಸರದಲ್ಲಿ ಭಿಕ್ಷಾಟನೆ ಮಾಡಿಕೊಂಡಿದ್ದ ವ್ಯಕ್ತಿ ಅಸೌಖ್ಯದಿಂದ ಮೃತಪಟ್ಟಿದ್ದಾರೆ. ಹೆಬ್ರಿ ಗ್ರಾಮದ ಮುದ್ರಾಡಿಯ ಕೃಷ್ಣ (56ವ) ಎಂಬವರು 30 ವರ್ಷಗಳ ಹಿಂದೆ ತಮ್ಮ ಮನೆಯನ್ನು ಬಿಟ್ಟು ನೀರೆಯಲ್ಲಿ ಭಿಕ್ಷಾಟನೆ…