Category: ಸ್ಥಳೀಯ ಸುದ್ದಿಗಳು

ಕಾರ್ಕಳ ಬಾಹುಬಲಿ ಮಹಾಮಸ್ತಕಾಭೀಷೇಕ ಮಹೋತ್ಸವದ ಪ್ರಯುಕ್ತ ಸಮಾಲೋಚನಾ ಸಭೆ

ಕಾರ್ಕಳ,ಜ.26: ಮುಂಬರುವ 2027ರಲ್ಲಿ ನಡೆಯಲಿರುವ ಕಾರ್ಕಳದ ಇತಿಹಾಸ ಪ್ರಸಿದ್ಧ ಬಾಹುಬಲಿ ಮಹಾಮಸ್ತಕಾಭೀಷೇಕ ಮಹೋತ್ಸವದ ಅಂಗವಾಗಿ ಜೈನ ಸಮುದಾಯದ ವತಿಯಿಂದ ಪೂರ್ವಭಾವಿ ಸಮಾಲೋಚನಾ ಸಭೆಯು ಸೋಮವಾರ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ…

ಕಾರ್ಕಳ:ಕ್ರಿಯೇಟಿವ್ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಕಾರ್ಕಳ,ಜ. 26: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 16ನೆಯ ರಾಷ್ಟ್ರೀಯ ಮತದಾರರ ದಿನಾಚರಣೆ 2026 ರ ಅಂಗವಾಗಿ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಮತದಾನವು ಎಷ್ಟು ಮಹತ್ವವಾದದ್ದು ಎಂಬ ಅರಿವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲಾಯಿತು.…

ಮಾಳ ಗುರುಕುಲ ಅನುದಾನಿತ ಶಾಲೆಯಲ್ಲಿ ಗಣರಾಜ್ಯೋತ್ಸವ

ಕಾರ್ಕಳ,ಜ. 26: ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ 77ನೇ ವರ್ಷದ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಹಿರಿಯರಾದ ಲಕ್ಷ್ಮಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಾದಿರಾಜ ಭಟ್, ರವಿ ಸೇರಿಗಾರ್ ಉಪಸ್ಥಿತರಿದ್ದರು.…

ಜೋಡುರಸ್ತೆ :ಕಾರು ಡಿಕ್ಕಿಯಾಗಿ ಪಾದಾಚಾರಿ ಗಂಭೀರ

ಕಾರ್ಕಳ, ಜ.26: ರಸ್ತೆ ದಾಟಲೆಂದು ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಜೋಡುರಸ್ತೆ ಕುಲಾಲ್ ಮಂದಿರದ ಬಳಿ ಶನಿವಾರ ರಾತ್ರಿ ನಡೆದಿದೆ. ಕೇರಳ ಮೂಲದ ಸೂರ್ಯನ್ ಎಂಬ ಅರ್ಥವನ್ನು ನೀಡುತ್ತವೆ ವ್ಯಕ್ತಿ ಕಳೆದ 3 ದಿನಗಳ…

ಅಜೆಕಾರಿನಲ್ಲಿ ಹಿಂದೂ ಸಂಗಮ ಕಾರ್ಯಕ್ರಮ: ಜಾತಿಗಳ ಆಧಾರದಲ್ಲಿ ಹಿಂದೂಗಳ ಒಗ್ಗಟ್ಟು ಒಡೆಯುವ ಪ್ರಯತ್ನ ನಡೆಯುತ್ತಿದೆ,ಇದರ ವಿರುದ್ಧ ಹಿಂದೂ ಸಮಾಜ ಜಾಗೃತವಾಗಬೇಕಿದೆ : ವಾದಿರಾಜ ಭಟ್, ಗೋಪಾಡಿ

ಅಜೆಕಾರು, ಜ.26: ಹಿಂದೂ ಸಮಾಜ ಎಂದಿಗೂ ದ್ವೇಷವನ್ನು ಉತ್ತೇಜಿಸಿಲ್ಲ, ಯಾರೊಂದಿಗೂ ದ್ವೇಷವನ್ನು ಸಾಧಿಸಿಲ್ಲ.ಸಮಾಜದಲ್ಲಿ ಸಹಬಾಳ್ವೆಯೊಂದಿಗೆ ಜೀವನ‌ ನಡೆಸುತ್ತಿದೆ. ಆದರೆ ಪ್ರಸಕ್ತ ದಿನಗಳಲ್ಲಿ ಹಿಂದೂಗಳಲ್ಲಿನ ಜಾತಿಗಳನ್ನು ಒಡೆಯುವ ಮಹಾಸಂಚು ನಡೆಯುತ್ತಿದೆ,ಇಂತಹ ಪ್ರಯತ್ನದ ವಿರುದ್ಧ ಸಮಸ್ತ ಹಿಂದೂ ಸಮಾಜ ಜಾಗೃತವಾಗಬೇಕಿದೆ ಎಂದು RSS ಕಾರ್ಯವಾಹ…

ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭ

ಕಾರ್ಕಳ,ಜ.25: ಇತಿಹಾಸಪ್ರಸಿದ್ಧ ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದ ವಾರ್ಷಿಕ ಮಹೋತ್ಸವವು ಬಸಿಲಿಕಾ ಧ್ವಜಾರೋಹಣದ ಮೂಲಕ ಭಕ್ತಿಭಾವ ಮತ್ತು ಭವ್ಯತೆಯಿಂದ ಭಾನುವಾರ ಆರಂಭಗೊಂಡಿತು. ಈ ವರ್ಷದ ಮಹೋತ್ಸವವು ವಿಶೇಷ ಮಹತ್ವ ಹೊಂದಿದ್ದು, ಬಸಿಲಿಕಾಗೆ ಮೈನರ್ ಬಸಿಲಿಕಾ ಪದವಿ ಲಭಿಸಿದ 10ನೇ ವರ್ಷದ…

ಅತ್ತೂರು-ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಭಾತೃತ್ವದ ದಿನ  ಆಚರಣೆ

ಕಾರ್ಕಳ, ಜ.25: ಅತ್ತೂರು-ಕಾರ್ಕಳದ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ಶನಿವಾರ ಭಾತೃತ್ವದ ದಿನವನ್ನು ಭಕ್ತಿಪೂರ್ಣವಾಗಿ ಆಚರಿಸಲಾಯಿತು. ಈ ದಿವ್ಯ ಬಲಿಪೂಜೆಯನ್ನು ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಬಿಜೈ ಸಂತ ಫ್ರಾನ್ಸಿಸ್ ಜೇವಿಯರ್ ದೇವಾಲಯದ ಧರ್ಮಗುರುಗಳು ಪ್ರಧಾನ ಧರ್ಮಗುರುಗಳಾಗಿ…

ಕಾರ್ಕಳ: ಬಿಜೆಪಿ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯಿಂದ ಕಾಂಗ್ರೆಸ್‌ ಗೆ ‘ವೋಟ್ ಚೋರಿ’ ಗೆ ಆತಂಕ : ಶಾಸಕ ಸುನಿಲ್ ಕುಮಾರ್

ಕಾರ್ಕಳ,ಜ.24: ಚುನಾವಣಾ ಆಯೋಗವು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಕೈಗೆತ್ತಿಕೊಂಡಿರುವುದರಿಂದ ಕಾಂಗ್ರೆಸ್‌ನ ‘ವೋಟ್ ಚೋರಿ’ ಮಾಡುವವರಿಗೆ ಆತಂಕ ಶುರುವಾಗಿದೆ ಎಂದು ಮಾಜಿ ಸಚಿವ ಹಾಗೂ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಖಾಸಗಿ ಹೊಟೇಲ್ ನಲ್ಲಿ ನಡೆದ…

ಹೆಬ್ರಿ :ಅಮೃತ ಭಾರತಿ ವಿದ್ಯಾಲಯದಲ್ಲಿ ವಸಂತ ಪಂಚಮಿ ಆಚರಣೆ

ಹೆಬ್ರಿ ,ಜ.24: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಸಂತ ಪಂಚಮಿ ಪೂಜೆಯನ್ನು ನಡೆಸಲಾಯಿತು. ವಸಂತ ಪಂಚಮಿಯಂದು ವಿದ್ಯಾಧಿದೇವತೆಯಾದ ಸರಸ್ವತಿ ದೇವಿಯು ಭೂಮಿಯಲ್ಲಿ ಅವತರಿಸಿದ ಪರ್ವ ಕಾಲವಾಗಿದೆ. ಜ್ಞಾನವನ್ನು ಪಡೆಯುವ ವಿದ್ಯಾರ್ಥಿಗಳು ಭಕ್ತಿಯಿಂದ ಪೂಜಿಸಿದರೆ ಅಜ್ಞಾನ, ವಿಪರೀತ…

ಕಾರ್ಕಳ: ಬೈಲೂರು ಮೈನ್ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕ್ಕೆ ಚಾಲನೆ

ಕಾರ್ಕಳ,ಜ. 24: ​ಬೈಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಮೈನ್) ಯಲ್ಲಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಬಡಗುತಿಟ್ಟು ಯಕ್ಷಗಾನ ತರಬೇತಿ “ಯಕ್ಷ ಶಿಕ್ಷಣ” ಕಾರ್ಯಕ್ರಮವನ್ನು ಡಿ.22 ರಂದು ಯಕ್ಷಗಾನ ರಂಗದ ಸಂಘಟಕರು ಹಾಗೂ ಬಹುಮೇಳಗಳ ಯಜಮಾನರಾದ ಪಳ್ಳಿ ಕಿಶನ್ ಕುಮಾರ್ ಹೆಗ್ಡೆ ಅವರು…