Category: ಸ್ಥಳೀಯ ಸುದ್ದಿಗಳು

ಕಾರ್ಕಳ ಅಯ್ಯಪ್ಪನಗರದ ಬಳಿ ಭೀಕರ ಅಪಘಾತ: ಕಾರು ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಕಾರ್ಕಳ, ಫೆ. 28:ಮಾರುತಿ ಇಕೋ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಹಾಗೂ ಸಹಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಅಯ್ಯಪ್ಪನಗರ ಬಳಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಎರ್ಲಪಾಡಿಯ…

ಪಳ್ಳಿ ಕಲ್ಲಾಪು ಪರಿಸರದಲ್ಲಿ ಅಗ್ನಿ ಅನಾಹುತ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಕಾರ್ಕಳ,ಫೆ.28: ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಪಡು ಕಲ್ಲಾಪು ಪರಿಸರದಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿದ್ದು, ಕಾರ್ಕಳ ಅಗ್ನಿಶಾಮಕ ದಳದ ಸಕಾಲಿಕ ಕಾರ್ಯಾಚರಣೆಯಿಂದ ಬೆಂಕಿ ನಂದಿಸಿದ ಪರಿಣಾಮ ಭಾರೀ ಅನಾಹುತ ತಪ್ಪಿದೆ. ಪಡು ಕಲ್ಲಾಪು ನಿವಾಸಿ ರಾಮ ನಾಯ್ಕ್…

ಶಿವಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ,ಫೆ. 27: ಹೆಬ್ರಿ ತಾಲೂಕಿನ ಶಿವಪುರದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಪುರ ಗ್ರಾಮದ ನಿವಾಸಿ ಪೂವಪ್ಪ ಪೂಜಾರಿ (83ವ) ಆತ್ಮಹತ್ಯೆಗೆ ಶರಣಾದವರು. ವಿಪರೀತ ಬೀಡಿ ಸೇದುತ್ತಿದ್ದ ಅವರಿಗೆ ಕ್ಯಾನ್ಸರ್, ಶ್ವಾಸಕೋಶದ ತೊಂದರೆ ಹಾಗೂ ಬಿಪಿ ಸಮಸ್ಯೆ ಇದ್ದು ಚಿಕಿತ್ಸೆ…

ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾ. 1 ರಂದು ಹಳೆ ವಿದ್ಯಾರ್ಥಿಗಳ ‘ಸ್ನೇಹ ಸೇತು’ ಕಾರ್ಯಕ್ರಮ

ಕಾರ್ಕಳ,ಫೆ.26: ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಹಳೆ ವಿದ್ಯಾರ್ಥಿಗಳ ಸಮಾವೇಶ ‘ಸ್ನೇಹ ಸೇತು’ ಕಾರ್ಯಕ್ರಮವು ಮಾರ್ಚ್ 1ರಂದು ಭಾನುವಾರ ಕಾಲೇಜು ಮೈದಾನದಲ್ಲಿ ಜರುಗಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ…

ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್‌ನಲ್ಲಿ ಮೊದಲ ಹಂತದ ಪಲಿತಾಂಶ: ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಕಾರ್ಕಳ,ಫೆ. 26: ಎನ್.ಟಿ.ಎ ರಾಷ್ಟ್ರಮಟ್ಟದಲ್ಲಿ ನಡೆಸುವ ಜೆಇಇ ಮೈನ್ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್- 2026ರ ವಿಭಾಗದ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾದ 8 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ನಿಶಾನ್ ಎನ್. ಸಾಲ್ಯಾನ್ 99.8525917 ಪರ್ಸಂಟೈಲ್ (ಬಿ.ಆರ್ಕ್), ಅನಿರುದ್ಧ್ ಆರ್…

ನಿಟ್ಟೆ ಕಾಲೇಜಿನಲ್ಲಿ ರಾಜ್ಯಮಟ್ಟದ ‘ರಾಗ್ನಾರಾಕ್ ಎನ್ ಇಗ್ಮಾ 2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

ಕಾರ್ಕಳ, ಫೆ.25: ರಾಜ್ಯ ಮಟ್ಟದ ‘ರಾಗ್ನಾರಾಕ್ ಎನ್ ಇಗ್ಮಾ 2026’ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯನ್ನು ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ಸದಾನಂದ ಸಭಾಂಗಣದಲ್ಲಿ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ…

ನಾಳೆ (ಫೆ.26) ಕಾರ್ಕಳ ಜೋಡುರಸ್ತೆಯಲ್ಲಿ “ಮಾನಸ ಕಂಫರ್ಟ್ಸ್” ಉದ್ಘಾಟನೆ

ಕಾರ್ಕಳ, ಫೆ.25: ಕಾರ್ಕಳದ ಜೋಡುರಸ್ತೆಯ ಕಾರ್ಲ ಸಿಟಿ ಸೆಂಟರ್ ಕಟ್ಟಡದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಮಾನಸ ಕಂಫರ್ಟ್ಸ್” ಇದರ ಉದ್ಘಾಟನಾ ಸಮಾರಂಭವು ನಾಳೆ (ಫೆ. 26) ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯಿಲಿ ಉದ್ಘಾಟನೆ ನೆರವೇರಿಸಲಿದ್ದು, ಕುಕ್ಕುಂದೂರು ಪಂಚಾಯತ್…

ಜಿಲ್ಲಾಡಳಿತದ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಆರೋಪ: ಬಿಜೆಪಿ ಪ್ರತಿಭಟನೆ ಎಚ್ಚರಿಕೆಗೆ ಮಣಿದ ಜಿಲ್ಲಾಡಳಿತ

ಕಾರ್ಕಳ, ಫೆ.25: ಅಂಬೇಡ್ಕರ್ ಸಭಾಭವನದ ಉದ್ಘಾಟನೆಗೆ ಮುಖ್ಯಮಂತ್ರಿ ಬರುತ್ತಿದ್ದು, ಈ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರ್ ನಲ್ಲಿ ಸಂಸದರು ಹಾಗೂ ಸ್ಥಳೀಯ ಶಾಸಕರ ಫೋಟೋ ಕೈ ಬಿಟ್ಟ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿತ್ತು. ಅಂದಿನ ಸಚಿವ ಹಾಗೂ ಶಾಸಕ ಸುನಿಲ್…

ಜಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ

ಕಾರ್ಕಳ, ಫೆ.24: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಮತ್ತು ಪಾದಾಚಾರಿ ಇಬ್ಬರೂ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೆ.22 ರಂದು ರಾತ್ರಿ ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೈಕ್ ಜಾರ್ಕಳ ಪೇಟೆಯಲ್ಲಿ ರಸ್ತೆ ದಾಟಲೆಂದು ನಿಂತಿದ್ದ…

ಕಾರ್ಕಳ: ತೆಂಗಿನಕಾಯಿ ಕೊಯ್ಯುತ್ತಿದ್ದ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಕಾರ್ಕಳ, ಫೆ. 23: ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ತೆಂಗಿನಕಾಯಿ ಕೊಯ್ಯುವ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಪಳ್ಳಿ ಗ್ರಾಮದ ನಿವಾಸಿ ಜಗದೀಶ್ ಸಾಧು ಪೂಜಾರಿ(48) ಮೃತಪಟ್ಟವರು. ಬೆಳಗಾವಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಅವರು ಕಳೆದ…