Category: ಸ್ಥಳೀಯ ಸುದ್ದಿಗಳು

AKMS ಬಸ್ ಮಾಲೀಕ ರೌಡಿ ಶೀಟರ್ ಸೈಫುದ್ದೀನ್ ಕೊಲೆ ಪ್ರಕರಣ: ಹತ್ಯೆಗೆ ಸಂಚು ರೂಪಿಸಿದ ಮಹಿಳೆಯ ಬಂಧನ!

ಉಡುಪಿ,ಅ.04: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಸೆ .27 ರಂದು ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಎಂಬಾತನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಲಭಿಸಿದ್ದು, ಹತ್ಯೆಗೆ ಸಂಚು ರೂಪಿಸಿದ್ದ…

ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಝೀರ್ ಸಹಿತ ಹಲವು ಗಣ್ಯರಿಂದ ಕಾರ್ಕಳದ ಹಿರಿಯ ವಕೀಲ ಎಂ.ಕೆ ವಿಜಯಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನ

ಕಾರ್ಕಳ, ಅ,04: ಹಿರಿಯ ವಕೀಲರು ಹಾಗೂ ಬಿಜೆಪಿಯ ಹಿರಿಯ ಮುಂದಾಳುವಾಗಿದ್ದ ಎಂ.ಕೆ.ವಿಜಯಕುಮಾರ್ ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಆಂಧ್ರಪ್ರದೇಶದ ರಾಜ್ಯಪಾಲ ಅಬ್ದುಲ್ ನಝೀರ್ ಸೇರಿದಂತೆ ನೂರಾರು ಗಣ್ಯರು ಎಂ.ಕೆ ವಿಜಯಕುಮಾರ್ ಅವರ ಪಾರ್ಥಿವ…

ಕಾರ್ಕಳ: ರಿಕ್ಷಾ ಚಲಾಯಿಸುತ್ತಿದ್ದ ವ್ಯಕ್ತಿ ಹೃದಯಾಘಾದಿಂದ ಮೃತ್ಯು

ಕಾರ್ಕಳ: ಕಾರ್ಕಳದ ಡಾ.ಟಿ ಎಂ ಎ ಪೈ ರೋಟರಿ ಆಸ್ಪತ್ರೆಯ ಬಳಿ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕಸಬಾ ಗ್ರಾಮದ ತೆಳ್ಳಾರು ರಸ್ತೆಯ ನಿವಾಸಿ ಪ್ರಕಾಶ್ಚಂದ್ರ(55) ಮೃತಪಟ್ಟವರು. ಪ್ರಕಾಶ್ಚಂದ್ರ ಅವರು ಅ.3 ರಂದು ಮಧ್ಯಾಹ್ನ ಅತ್ತೂರಿನಿಂದ ಕ್ರಿಯೇಟಿವ್‌ ಕಾಲೇಜಿನ ಕಡೆಗೆ…

ಹಿರಿಯ ನ್ಯಾಯವಾದಿ ಬಿಜೆಪಿ ಮುಖಂಡ ಎಂ.ಕೆ ವಿಜಯ ಕುಮಾರ್ ನಿಧನ

ಕಾರ್ಕಳ, ಅ.04: ಬಿಜೆಪಿ ಹಿರಿಯ ಮುಖಂಡ ,ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್ ಶುಕ್ರವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾತ್ರಿ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಮ್ಮ ವಕೀಲ ವೃತ್ತಿಯಲ್ಲಿ 50 ವರ್ಷಗಳ…

ಕಾರ್ಕಳ: ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು-ನಗದು ಸಹಿತ 6.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಕಾರ್ಕಳ: ಮನೆಗೆ ಬೀಗ ಹಾಕಿ ಮನೆಯ ಮಾಲೀಕ ಪ್ರವಾಸಕ್ಕೆ ಹೋಗಿದ್ದ ಹೋಗಿದ್ದ ವೇಳೆ ಕನ್ನ ಹಾಕಿದ ಖದೀಮರು ಮನೆಯಲ್ಲಿದ್ದ ನಗದು ಸೇರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ನಕ್ರೆಯ ಸಾತುರ್ನಿನ್‌ ಮತಾಯಸ್‌ ಎಂಬವರು…

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ಕಾರ್ಕಳ: ಗಾಂಧಿ ಪ್ರತಿಪಾದಿಸಿದ ತತ್ವ ಸಿದ್ದಾಂತಗಳು ಸರ್ವ ಕಾಲಕ್ಕೂ ಪ್ರಸ್ತುತ ಮತ್ತು ಆ ತತ್ವ ಸಿದ್ದಾಂತಗಳು ದೇಶದ ಅಭಿವೃದ್ಧಿಗೆ ಪೂರಕವಾಗಿವೆ. ಈ ಸಿದ್ದಾಂತಗಳನ್ನು ಅನುಸರಿಸಿದರೆ ಮಾತ್ರವೇ ದೇಶ ಪ್ರಗತಿ ಕಾಣಲು ಸಾಧ್ಯ ಎಂದು ದೇಶದ ಚುಕ್ಕಾಣಿ ಹಿಡಿದವರು ಮನಗಾಣಬೇಕು. ಆ ಮೂಲಕ…

ಅಜೆಕಾರು:ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್- ಮಹಿಳೆ ವಿರುದ್ದ ಪ್ರಕರಣ ದಾಖಲು

ಅಜೆಕಾರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ಮಹಿಳೆಯೊಬ್ಬರ ವಿರುದ್ದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಪಾದಿತೆ ವಿಜಯ ವಿಜಿ ಎಂಬವರು ಸೆ. 30 ರಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ಖಾತೆಯಲ್ಲಿ “”ಉಪ್ಪು ತಿಂದ…

ನಂದಳಿಕೆ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನಂದಳಿಕೆ ನಿವಾಸಿ ಸಂತೋಷ ಆಚಾರ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಂತೋಷ್ ಅವರು ಕೂಲಿ ಕೆಲಸ ಮಾಡಿಕೊಂಡಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ಸೆ. 30 ಮನೆಯಲ್ಲಿ ನವರಾತ್ರಿ ಪೂಜೆ ನಡೆಸಿದ್ದರು.…

ಎಳ್ಳಾರೆ ಪಾಲ್ಬೆಟ್ಟು ಮಹಮ್ಮಾಯಿ ದೇವಸ್ಥಾನದಲ್ಲಿ ಅಜೆಕಾರು ಠಾಣಾಧಿಕಾರಿ ಮಹೇಶ್ ಟಿ.ಎಮ್ ಅವರಿಗೆ ಸನ್ಮಾನ

ಕಾರ್ಕಳ, ಅ.01: ಎಳ್ಳಾರೆ ಗ್ರಾಮದ ಪಾಲ್ಬೆಟ್ಟು ಮಹಮ್ಮಾಯಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಅಜೆಕಾರು ಪೊಲೀಸ್ ಠಾಣೆಯ ಎಸ್ಐ ಮಹೇಶ್ ಟಿ.ಎಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಎಳ್ಳಾರೆ ಗ್ರಾಮದ ಮುಳ್ಕಾಡು ನಿವಾಸಿ ಕುಮುದಾ ಶೆಟ್ಟಿಯವರ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು…

ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳಿಂದ ಕ್ರಿಸ್ತ ಸೇವಕೀ ಆಶ್ರಮ ಸಂದರ್ಶನ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಆಶ್ರಮ ನಿವಾಸಿಗಳೊಂದಿಗೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ದಿನಸಿ ಸಾಮಾಗ್ರಿಗಳನ್ನು ಹಂಚಿದರು. ಈ ಸಂದರ್ಭದಲ್ಲಿ ಸಂಸ್ಥೆಯ…