Category: ಸ್ಥಳೀಯ ಸುದ್ದಿಗಳು

ಸೆ.06 ರಂದು ಕಾರ್ಕಳ ಪುಲ್ಕೇರಿ ಬೈಪಾಸ್ ಜಂಕ್ಷನ್ ಬಳಿ ಹೋಟೆಲ್ ಕಾರ್ಕಳ ಇನ್ ಬಾರ್ & ರೆಸ್ಟೋರೆಂಟ್ ಶುಭಾರಂಭ

ಕಾರ್ಕಳ, ಸೆ02: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಹೋಟೆಲ್ ಕಾರ್ಕಳ ಇನ್ ಬಾರ್ & ರೆಸ್ಟೋರೆಂಟ್ ಸೆ.06 ರಂದು ಉದ್ಘಾಟನೆಯಾಗಲಿದೆ. ಮಂಗಳೂರು -ಕುದುರೆಮುಖ ರಾಷ್ಟ್ರೀಯ ಹೆದ್ದಾರಿ ಹಾಗೂ ಪಡುಬಿದ್ರೆ-ಕಾರ್ಕಳ ರಾಜ್ಯ ಹೆದ್ದಾರಿ ಸಂಪರ್ಕಿಸುವ ಕಾರ್ಕಳದ ಪುಲ್ಕೇರಿ ಬೈಪಾಸ್ ಜಂಕ್ಷನ್…

ಜಿಲ್ಲಾ ಮಟ್ಟದ ದಸರಾ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.01:ಉಡುಪಿ ಜಿಲ್ಲಾ ಮಟ್ಟದ ದಸರಾ ಪ್ರಯುಕ್ತ ನಡೆದ ಕುಸ್ತಿ ಸ್ಪರ್ಧೆಯಲ್ಲಿ 53ಕೆ.ಜಿ. ವಿಭಾಗದಲ್ಲಿ ಯಶಾ ಜಿ ಕೋಟ್ಯಾನ್ ಪ್ರಥಮ ಹಾಗೂ 55 ಕೆಜಿ ವಿಭಾಗದಲ್ಲಿ ರಿಶಾ ಜಿ. ಕೋಟ್ಯಾನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳ ಎಸ್ ವಿ ಟಿ ಕಾಲೇಜಿನ ಕು.ಅನ್ವಿತಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ,ಸೆ.01: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಎಸ್‌.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು…

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್’ಎಸ್ಐ ಶಂಕರ್ ಅವರಿಗೆ ರಾಷ್ಟ್ರಪತಿ ಪದಕ

ಉಡುಪಿ, ಸೆ.01: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್’ಎಸ್ಐ ಶಂಕರ್ ಅವರಿಗೆ ರಾಷ್ಟ್ರಪತಿ ಪದಕ ಲಭಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಬೆಂಗಳೂರಿನಲ್ಲಿ ರಾಷ್ಟ್ರಪತಿ ಪದಕ ಗೌರವ ಪಡೆದುಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024 – 25ನೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಷಯವಾರು ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್…

ನಿಟ್ಟೆ ಕಾಲೇಜಿನಲ್ಲಿ ಬ್ರಾಂಚ್ ಅಸೋಸಿಯೇಷನ್ ಗಳು ಮತ್ತು ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನೆ

ಕಾರ್ಕಳ: 2025-26ನೇ ಸಾಲಿನ ಬ್ರಾಂಚ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನಿಟ್ಟೆಯ ಎನ್‌ಎಂಎಎಂಐಟಿಯ ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಶನಿವಾರ ನಡೆಯಿತು. ಈ ಕಾರ್ಯಕ್ರಮವನ್ನು ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾದ ಹಿರಿಯ ವ್ಯವಸ್ಥಾಪಕ ಮತ್ತು ಎನ್‌ಎಂಎಎಂಐಟಿಯ 2001-2005…

ಕಲ್ಲಂಬಾಡಿಪದಪು: ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರನ್ ಪಿ ಅವರಿಗೆ ಬೀಳ್ಕೊಡುಗೆ 

ಕಾರ್ಕಳ, ಆ.30: ಕಲ್ಲಂಬಾಡಿಪದವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರನ್ ಪಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ SDMC ಅಧ್ಯಕ್ಷೆ ಸಂಗೀತ ಬಿಎನ್, ವಿನಯ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ಸುರೇಶ…

ನಲ್ಲೂರು: ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ಶವ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ಕಾರ್ಕಳ,ಆ.29: ರಕ್ತದೊತ್ತಡ, ಡಯಾಬಿಟಿಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ತಾನು ಏಕಾಂಗಿಯಾಗಿ ವಾಸವಿದ್ದ ಮನೆಯಲ್ಲೇ ಮೃತಪಟ್ಟು ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಹೊಸಮನೆ ಪೆರೆಬೆಟ್ಟು ನಿವಾಸಿ ರಘುರಾಮ(65) ಎಂಬವರು ಮೃತಪಟ್ಟ ವ್ಯಕ್ತಿ. ರಘುರಾಮ ಕಳೆದ ಹಲವು…

ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಹೆಬ್ರಿ ಅಮೃತ ಭಾರತಿ ಯ ಬಾಲಕರ ತಂಡ ಪ್ರಥಮ ಸ್ಥಾನ

ಹೆಬ್ರಿ: ಶಾಲಾ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಕಾರ್ಕಳ ಇವರ ಆಶ್ರಯದಲ್ಲಿ ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಹೈಸ್ಕೂಲ್ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಹೆಬ್ರಿ ಪಿ.ಆರ್.ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ‘ಸ್ಫೂರ್ತಿ ಮಾತು-11’ ಸರಣಿ ಕಾರ್ಯಕ್ರಮ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ…